ಎಂ. ಬಿ. ಪಾಟೀಲ್ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ. ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಶಾಸಕ. 2023ರ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು. ವಿಜಯಪುರ ಭಾಗದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಮಲ್ಲನಗೌಡ ಬಸನಗೌಡ ಪಾಟೀಲ ಎಂಬುದು ಎಂ. ಬಿ. ಪಾಟೀಲ ಪೂರ್ಣ ಹೆಸರು. ಬಿ. ಇ. (ಸಿವಿಲ್) ಪದವೀಧರ. ವಿಜಯಪುರ ತಾಲೂಕು ತೊರವಿ ಗ್ರಾಮದ ಪ್ರಭಾವಿ ಕುಟುಂಬಕ್ಕೆ ಸೇರಿದವರು. 27ನೇ ವಯಸ್ಸಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು.
ಬೆಂಗಳೂರಿನ ಪೂರ್ಣಪ್ರಜ್ಞ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವಿಜಯಪುರದ ದರಬಾರ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು. ಬಿ. ಇ.ಯನ್ನು ತಮ್ಮದೇ ಸಂಸ್ಥೆಯ ಬಿ. ಎಲ್. ಡಿ. ಇ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂರ್ಣಗೊಳಿಸಿದರು.
1991ರಲ್ಲಿ ತಿಕೋಟಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಯ್ಕೆಯಾಗಿ ಮೊದಲ ಬಾರಿಗೆ ಶಾಸಕರಾದರು. 1998ರಲ್ಲಿ ವಿಜಾಪುರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಗೊಂಡು ಸಂಸದಸರು ಆದರು.
2004ರಲ್ಲಿ ತಿಕೋಟಾದಿಂದ ಮತ್ತೆ ವಿಧಾನಸಭೆಗೆ ಆಯ್ಕೆಯಾದರು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಬಬಲೇಶ್ವರ ಕ್ಷೇತ್ರದಿಂದ ಕಣಕ್ಕಿಳಿದು ಆಯ್ಕೆಗೊಂಡರು. ಬಳಿಕ 2013, 2018ರಲ್ಲಿಯೂ ಇದೇ ಕ್ಷೇತ್ರದಿಂದ ಆಯ್ಕೆಗೊಂಡರು.
2013ರ ಚುನಾವಣೆಯಲ್ಲಿ ಗೆದ್ದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾದರು. 2018ರ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಣೆ ಮಾಡಿದರು.
2022ರ ಜನವರಿಯಲ್ಲಿ ಎಂ. ಬಿ. ಪಾಟೀಲ್ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡರು. ಇವರು ಲಿಂಗಾಯತ ಸಮುದಾಯಕ್ಕೆ ಸೇರಿರುವುದರಿಂದ ಈ ಹೊಣೆ ನೀಡಲಾಗಿದೆ.
| ಪೂರ್ಣ ಹೆಸರು | ಎಂ. ಬಿ. ಪಾಟೀಲ್ |
| ಜನ್ಮ ದಿನಾಂಕ | 07 Oct 1964 (ವಯಸ್ಸು 61) |
| ಹುಟ್ಟಿದ ಸ್ಥಳ | ವಿಜಯಪುರ, ಕರ್ನಾಟಕ |
| ಪಕ್ಷದ ಹೆಸರು | Bharatiya Janta Party |
| ವಿದ್ಯಾರ್ಹತೆ | BLDEA's V P Dr PG Halakatti College of Engineering & Technology |
| ಉದ್ಯೋಗ | ಕೃಷಿಕ, ರಾಜಕಾರಣಿ |
| ತಂದೆಯ ಹೆಸರು | ಬಸನಗೌಡ ಪಾಟೀಲ್ |
| ತಾಯಿಯ ಹೆಸರು | NA |
| ಅವಲಂಬಿತರ ಹೆಸರು | ಆಶಾ ಪಾಟೀಲ್ |
| ಅವಲಂಬಿತರ ಉದ್ಯೋಗ | ಕೃಷಿಕರು |
| ಮಕ್ಕಳು | 2 ಪುತ್ರ(ರು) |
| ಧರ್ಮ | ಹಿಂದು |
| ಜಾತಿ | ಲಿಂಗಾಯತ |
| ವೆಬ್‌ಸೈಟ್ | mbpatil.com |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.