Get Updates
Get notified of breaking news, exclusive insights, and must-see stories!

ಮಧು ಬಂಗಾರಪ್ಪ

ಮಧು ಬಂಗಾರಪ್ಪ
2022ರ ಸೆಪ್ಟೆಂಬರ್‌ನಲ್ಲಿ ಕೆಪಿಸಿಸಿ ಒಬಿಸಿ ಘಟಕದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ ಮಾಡಲಾಗಿದೆ. 2021ರ ಜುಲೈನಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ್ದರು.
By Moumi Majumdar | Wednesday, September 14, 2022, 11:16:25 AM [IST]

ಮಧು ಬಂಗಾರಪ್ಪ ಜೀವನ ಚರಿತ್ರೆ

2022ರ ಸೆಪ್ಟೆಂಬರ್‌ನಲ್ಲಿ ಕೆಪಿಸಿಸಿ ಒಬಿಸಿ ಘಟಕದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ ಮಾಡಲಾಗಿದೆ. 2021ರ ಜುಲೈನಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ್ದರು.

ಎಸ್. ಮಧು ಬಂಗಾರಪ್ಪ ಸೊರಬ ಕ್ಷೇತ್ರದ ಮಾಜಿ ಶಾಸಕರು, ಕಾಂಗ್ರೆಸ್ ನಾಯಕ. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ 2013ರಲ್ಲಿ ಸೊರಬ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಮೊದಲ ಬಾರಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರು.

4/9/1966ರಲ್ಲಿ ಸೊರಬ ತಾಲೂಕಿನ ಕುಬಟೂರು ಎಂಬಲ್ಲಿ ಜನಿಸಿದ ಮಧು ಬಂಗಾರಪ್ಪ ಪದವೀಧರರು. ರಾಜಕೀಯಕ್ಕೆ ಬರುವ ಮೊದಲು ಸಿನಿಮಾ ಆಡಿಯೋ ಕ್ಷೇತ್ರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಚಿತ್ರ ನಿರ್ಮಾಪಕರಾದ ಅವರು ಉದ್ಯಮಿಯೂ ಹೌದು.

2013ರ ಚುನಾವಣೆಯಲ್ಲಿ 58,541 ಮತಗಳನ್ನು ಪಡೆದು 37,316 ಮತ ಪಡೆದ ಕೆಜೆಪಿ ಪಕ್ಷದ ಹೆಚ್. ಹಾಲಪ್ಪರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾದರು. ಈ ಚುನಾವಣೆಯಲ್ಲಿ ಮಧು ಬಂಗಾರಪ್ಪಗೆ ಕಾಂಗ್ರೆಸ್‌ನಿಂದ ಸಹೋದರ ಕುಮಾರ್ ಬಂಗಾರಪ್ಪ ಎದುರಾಳಿಯಾಗಿದ್ದರು. 33,176 ಮತಗಳನ್ನು ಪಡೆದು ಕುಮಾರ್ ಬಂಗಾರಪ್ಪ ಸೋಲು ಕಂಡರು.

2018ರ ಚುನಾವಣೆಯಲ್ಲಿ ಸೊರಬದ ರಾಜಕೀಯ ಚಿತ್ರಣ ಬದಲಾಯಿತು. ಕುಮಾರ್ ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 72,091 ಮತಗಳನ್ನು ಪಡೆದು ಜಯಗಳಿಸಿದರು. ಮಧು ಬಂಗಾರಪ್ಪ ಜೆಡಿಎಸ್‌ನಿಂದ ಕಣಕ್ಕಿಳಿದು 58,805 ಮತಗಳನ್ನು ಪಡೆದು ಸೋಲೊಪ್ಪಿಕೊಂಡರು.

2013ರಲ್ಲಿ ಸೊರಬದಲ್ಲಿ ಸೋಲು ಕಂಡಿದ್ದ ಹೆಚ್. ಹಾಲಪ್ಪ ಪ್ರಸ್ತುತ ಸಾಗರ ಕ್ಷೇತ್ರದ ಬಿಜೆಪಿ ಶಾಸಕರು. ಸೊರಬ ರಾಜಕೀಯ ಸಹೋದರರ ಸವಾಲ್ ಎಂದೇ ಖ್ಯಾತಿ ಪಡೆದಿದೆ. ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ ಇವರಲ್ಲಿ ಯಾರು ಗೆಲ್ಲುತ್ತಾರೆ? ಎಂಬುದು ಚುನಾವಣೆ ಸಂದರ್ಭದಲ್ಲಿ ಬಹುದೊಡ್ಡ ಚರ್ಚೆಯ ವಿಷಯವಾಗುತ್ತದೆ.

2013, 2014ರಲ್ಲಿ ಮಧು ಬಂಗಾರಪ್ಪ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತರಕಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ. 2018ರ ಚುನಾವಣೆಯಲ್ಲಿ ಸೋತ ಬಳಿಕವೂ ಅವರನ್ನು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಪಕ್ಷ ನೇಮಕ ಮಾಡಿತ್ತು.

2019ರ ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 506512 ಮತಗಳನ್ನು ಪಡೆದು ಬಿಜೆಪಿಯ ಬಿ. ವೈ. ರಾಘವೇಂದ್ರ ಎದುರು ಸೋಲುಕಂಡರು.

ಲೋಕಸಭೆ ಚುನಾವಣೆ ಸೋಲಿನ ಬಳಿಕ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದರು. 2021ರ ಜುಲೈ 30ರಂದು ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಂತಾದ ನಾಯಕರ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಂಡರು.

ಮತ್ತಷ್ಟು ಓದು

ಮಧು ಬಂಗಾರಪ್ಪ ವಯಕ್ತಿಕ ಜೀವನ

ಪೂರ್ಣ ಹೆಸರು ಮಧು ಬಂಗಾರಪ್ಪ
ಜನ್ಮ ದಿನಾಂಕ 15 Mar 2019 (ವಯಸ್ಸು 7)
ಹುಟ್ಟಿದ ಸ್ಥಳ ಬೆಂಗಳೂರು
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ
ಉದ್ಯೋಗ ಶಾಸಕ ಹಾಗೂ ವ್ಯಾಪಾರೋದ್ಯಮಿ
ತಂದೆಯ ಹೆಸರು ಎಸ್. ಬಂಗಾರಪ್ಪ
ತಾಯಿಯ ಹೆಸರು ಶಕುಂತಲಾ ಬಂಗಾರಪ್ಪ
ಅವಲಂಬಿತರ ಹೆಸರು NA
ಧರ್ಮ ಹಿಂದು

ಮಧು ಬಂಗಾರಪ್ಪ ಒಟ್ಟು ಆಸ್ತಿ

ಒಟ್ಟು ಆಸ್ತಿ
₹43.05 CRORE
ಆಸ್ತಿ
₹69.51 CRORE
ಸಾಲಸೋಲ
₹26.46 CRORE

ಮಧು ಬಂಗಾರಪ್ಪ ಕುರಿತು ಆಸಕ್ತಿದಾಯಕ ಸಂಗತಿಗಳು

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರ

ಕನ್ನಡ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹೋದರ

ರಾಜಕೀಯ ಹೊರತುಪಡಿಸಿ 'ಕಲ್ಲರಳಿ ಹೂವಾಗಿ' ಕನ್ನಡ ಚಿತ್ರ ನಿರ್ಮಾಣಕ್ಕಾಗಿ ರಾಷ್ಟ್ರಪತಿಗಳಿಂದ ಪದಕ ಪಡೆದಿದ್ದಾರೆ.

ಚಲನಚಿತ್ರ ನಟರಾಗಿ, ನಿರ್ಮಾಪಕರಾಗಿ, ವಿತರಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಮಧು ಬಂಗಾರಪ್ಪ ಸಹೋದರ ಕುಮಾರ್ ಬಂಗಾರಪ್ಪ ಸಹ ರಾಜಕೀಯದಲ್ಲಿದ್ದು, ಪ್ರಸ್ತುತ ಸೊರಬ ಕ್ಷೇತ್ರದ ಬಿಜೆಪಿ ಶಾಸಕರು.

ಮಧು ಬಂಗಾರಪ್ಪ ರಾಜಕೀಯ ಟೈಮ್‌ಲೈನ್

  • 2022: ಕೆಪಿಸಿಸಿ ಒಬಿಸಿ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕ.
  • 2021: ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ್ದರು.
  • 2019: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು 506512 ಮತಗಳನ್ನು ಪಡೆದು ಸೋಲು.
  • 2018 : 2018ರ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ. ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಸೋಲು.
  • 2013 : 2013ರ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ.

ಹಿಂದಿನ ಇತಿಹಾಸ

  • 2019: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು 506512 ಮತಗಳನ್ನು ಪಡೆದು ಸೋಲು.

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+