ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ 7,897 ಮತಗಳನ್ನು ಪಡೆದು ಆಯ್ಕೆಗೊಂಡರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಪ್ರಸ್ತುತ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ. ಕರ್ನಾಟಕ ಕಾಂಗ್ರೆಸ್‌ನ ಪ್ರಭಾವಿ ನಾಯಕ ಸದ್ಯ ರಾಜ್ಯ ರಾಜಕಾರಣದಿಂದ ದೂರ ಉಳಿದಿದ್ದಾರೆ.
ಗಾಂಧಿ ಕುಟುಂಬದ ನಿಷ್ಠಾವಂತ ನಾಯಕ. ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ, ಕಾರ್ಮಿಕ ಸೇರಿದಂತೆ ವಿವಿಧ ಖಾತೆಗಳ ಸಚಿವರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡರು.
4 ದಶಕಗಳ ಚುನಾವಣೆ ಇತಿಹಾಸದಲ್ಲಿ ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿದ್ದ ಮಲ್ಲಿಕಾರ್ಜುನ ಖರ್ಗೆ 2019ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡರು. ಸತತವಾಗಿ 9 ಬಾರಿ ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದ ಕೀರ್ತಿ ಖರ್ಗೆ ಅವರದ್ದು.
1947, ಜುಲೈ 24ರಂದು ಜನಿಸಿದ ಮಲ್ಲಿಕಾರ್ಜುನ ಖರ್ಗೆ ಗುಲ್ಬರ್ಗ ಸರ್ಕಾರಿ ಕಾಲೇಜಿನಲ್ಲಿ ಬಿಎ ಪದವಿ ಪಡೆದರು. ಕಾನೂನು ಪದವಿ ಪಡೆದ ಬಳಿಕ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಕಚೇರಿಯಲ್ಲಿ ಜ್ಯುನಿಯರ್ ಆಗಿ ವಕೀಲ ವೃತ್ತಿ ಆರಂಭಿಸಿದರು.
ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಮುಖ್ಯಮಂತ್ರಿಯಾಗಬೇಕಿತ್ತು ಎಂಬುದನ್ನು ಅವರ ಅಭಿಮಾನಿಗಳು ಈಗಲೂ ಹೇಳುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ರಾಜಕೀಯದಲ್ಲಿದ್ದು, ಚಿತ್ತಾಪುರ ಕ್ಷೇತ್ರದ ಶಾಸಕರು, ಮಾಜಿ ಸಚಿವರು.
ವಿದ್ಯಾರ್ಥಿ ಸಂಘದ ನಾಯಕರಾಗಿ ವೃತ್ತಿ ಜೀವನ ಆರಂಭಿಸಿದ ಮಲ್ಲಿಕಾರ್ಜುನ ಖರ್ಗೆ ಬಳಿಕ ಲೋಕಸಭೆ, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಬೆಳೆದರು. 1969ರಲ್ಲಿ ಕಾಂಗ್ರೆಸ್ ಸೇರಿದ ಖರ್ಗೆ ಪಕ್ಷ, ಗಾಂಧಿ ಕುಟುಂಬಕ್ಕೆ ಅತ್ಯಂತ ನಿಷ್ಠರು.
1972ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ 9 ಬಾರಿ ವಿಧಾನಸಭೆಗೆ, 2 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು. ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದಾರೆ.
ರಾಜ್ಯದಲ್ಲಿ ಗೃಹ, ಕಂದಾಯ, ಪ್ರಾಥಮಿಕ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಖಾತೆ ನಿಭಾಯಿಸಿದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ ಎಂಬುದು ಅವರ ಅಭಿಮಾನಿಗಳಿಗೆ ನಿರಾಸೆ ಮೂಡಿಸುವ ವಿಚಾರ.
ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಖಾತೆ ಸಚಿವರಾಗಿದ್ದರು. ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಾಯಕರಲ್ಲಿ ಖರ್ಗೆ ಸಹ ಒಬ್ಬರು.
| ಪೂರ್ಣ ಹೆಸರು | ಮಲ್ಲಿಕಾರ್ಜುನ ಖರ್ಗೆ |
| ಜನ್ಮ ದಿನಾಂಕ | 21 Jul 1942 (ವಯಸ್ಸು 83) |
| ಹುಟ್ಟಿದ ಸ್ಥಳ | ವರವಟ್ಟಿ, ಭಾಲ್ಕಿ ತಾಲ್ಲೂಕು, ಬೀದರ್ ಜಿಲ್ಲೆ |
| ಪಕ್ಷದ ಹೆಸರು | Indian National Congress |
| ವಿದ್ಯಾರ್ಹತೆ | Graduate Professional |
| ಉದ್ಯೋಗ | ರಾಜಕಾರಣಿ ಮತ್ತು ವಕೀಲ |
| ತಂದೆಯ ಹೆಸರು | ಮಾಪಣ್ಣಾ |
| ತಾಯಿಯ ಹೆಸರು | ಸೈಬವ್ವಾ |
| ಅವಲಂಬಿತರ ಹೆಸರು | ರಾಧಾಬಾಯಿ |
| ಅವಲಂಬಿತರ ಉದ್ಯೋಗ | ಗೃಹಿಣಿ |
| ಮಕ್ಕಳು | 3 ಪುತ್ರ(ರು) 2 ಪುತ್ರಿ(ಯರು) |
| ಧರ್ಮ | ಬೌದ್ಧ |
| ವೆಬ್‌ಸೈಟ್ | NIL |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.