ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ತೋಟಗಾರಿಕಾ ಸಚಿವರು.
ಕನ್ನಡ ಚಲನಚಿತ್ರ ನಿರ್ಮಾಪಕರು ಆದ ಆದ ಮುನಿರತ್ನ 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದರು. ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಶಾಸಕರಾದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾದ ಮುನಿರತ್ನ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ 2ನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದರು. 108,065 ಮತಗಳನ್ನು ಪಡೆದು ಜಯಗಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ, ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸೇರಿ 2019ರ ಡಿಸೆಂಬರ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆದರೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರುವಲ್ಲಿ ವಿಫಲರಾದರು.
ಆದರೆ ಮುಖ್ಯಮಂತ್ರಿ ಬದಲಾವಣೆಯಾಗಿ ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಮುನಿರತ್ನ ಸಂಪುಟ ಸೇರಿದರು. ತೋಟಗಾರಿಕಾ ಖಾತೆ ಸಚಿವರಾದರು.
ರಾಜಕೀಯ ಹೊರತುಪಡಿಸಿ ಮುನಿರತ್ನ ಕನ್ನಡ ಚಿತ್ರ ನಿರ್ಮಾಪಕರು. ಅನೇಕ ನಟರ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
| ಪೂರ್ಣ ಹೆಸರು | ಮುನಿರತ್ನ |
| ಜನ್ಮ ದಿನಾಂಕ | 23 Jul 1964 (ವಯಸ್ಸು 61) |
| ಹುಟ್ಟಿದ ಸ್ಥಳ | NA |
| ಪಕ್ಷದ ಹೆಸರು | Bharatiya Janta Party |
| ವಿದ್ಯಾರ್ಹತೆ | Corporation Boys High School |
| ಉದ್ಯೋಗ | ಚಿತ್ರ ನಿರ್ಮಾಪಕ, ರಾಜಕಾರಣಿ |
| ತಂದೆಯ ಹೆಸರು | ಸುಬ್ರಮಣಿ ನಾಯ್ಡು |
| ತಾಯಿಯ ಹೆಸರು | Not Known |
| ಅವಲಂಬಿತರ ಹೆಸರು | ಮಂಜುಳಾ |
| ಅವಲಂಬಿತರ ಉದ್ಯೋಗ | ಗೃಹಿಣಿ |
| ಧರ್ಮ | ಹಿಂದು |
| ಜಾತಿ | ನಾಯ್ಡು |
| ವೆಬ್‌ಸೈಟ್ | NA |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.