Get Updates
Get notified of breaking news, exclusive insights, and must-see stories!

ಮುರುಗೇಶ್ ನಿರಾಣಿ

ಮುರುಗೇಶ್ ನಿರಾಣಿ
ಯಶಸ್ವಿ ಉದ್ಯಮಿಯೂ ಆಗಿರುವ ಮುರುಗೇಶ್ ನಿರಾಣಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದ ಬಿಜೆಪಿ ಶಾಸಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವರು.
By Moumi Majumdar | Thursday, September 1, 2022, 12:56:18 PM [IST]

ಮುರುಗೇಶ್ ನಿರಾಣಿ ಜೀವನ ಚರಿತ್ರೆ

ಯಶಸ್ವಿ ಉದ್ಯಮಿಯೂ ಆಗಿರುವ ಮುರುಗೇಶ್ ನಿರಾಣಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದ ಬಿಜೆಪಿ ಶಾಸಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವರು.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಪ್ರಭಾವಿ ನಾಯಕ. 2018ರ ಚುನಾವಣೆಯಲ್ಲಿ ಬೀಳಗಿಯಿಂದ 3ನೇ ಬಾರಿಗೆ ಮುರುಗೇಶ್ ನಿರಾಣಿ ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಡ ಹೇರಿದ್ದು, ಭಾರೀ ಸುದ್ದಿಯಾಗಿತ್ತು.

ಬಿಇ, ಸಿವಿಲ್ ಪದವೀಧರರಾಗಿರುವ ಮರುಗೇಶ್ ನಿರಾಣಿ ಯಶಸ್ವಿ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರಾಣಿ ಶುಗರ್ಸ್ ಹೆಸರಿನಲ್ಲಿ ಸಕ್ಕರೆ ಕಾರ್ಖನೆಗಳ ಮಾಲೀಕರು. ಸಹೋದರ ಹನುಮಂತ ನಿರಾಣಿ ಸಹ ರಾಜಕೀಯದಲ್ಲಿದ್ದು, ವಿಧಾನ ಪರಿಷತ್ ಸದಸ್ಯರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹಂಚಿನಾಳ ಮೂಲದ ಮುರುಗೇಶ್ ನಿರಾಣಿ 2004ರಲ್ಲಿ ಮೊದಲ ಬಾರಿಗೆ ಗೆಲುವು ದಾಖಲಿಸಿ ವಿಧಾನಸಭೆ ಪ್ರವೇಶಿಸಿದರು. 2008ರಲ್ಲಿ ಮತ್ತೆ ಆಯ್ಕೆಯಾದ ಅವರು ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಸಚಿವರಾದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು. ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಿದರು. ಆದರೆ 2013ರ ಚುನಾವಣೆಯಲ್ಲಿ 55,417 ಮತಗಳನ್ನು ಪಡೆದು ಸೋಲು ಕಂಡರು.

2018ರ ಚುನಾವಣೆಯಲ್ಲಿ ಮತ್ತೆ ಶಾಸಕರಾಗಿ 3ನೇ ಬಾರಿಗೆ ಆಯ್ಕೆಗೊಂಡರು. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರಾಗಿ ಸಂಪುಟಕ್ಕೆ ಸೇರಿದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಮತ್ತೆ ಸಚಿವರಾದರು. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವರಾದರು.

1993 ರಿಂದ 2000ದ ತನಕ ಬಾಗಲಕೋಟೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿಯೂ ಮುರುಗೇಶ್ ನಿರಾಣಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. 2013-14ರಲ್ಲಿ ಸರ್ದಾರ್ ವಲ್ಲಬಾಯಿ ಪಟೇಲ್ ಪ್ರತಿಮೆ‌ ಲೋಹ ಸಂಗ್ರಹಣಾ ಸಮಿತಿ ರಾಜ್ಯ ಪ್ರಕೋಷ್ಟದ ಸಂಚಾಲಕರಾಗಿದ್ದರು.

ರಾಜಕೀಯ ಹೊರತುಪಡಿಸಿ ಮುರುಗೇಶ್‌ ನಿರಾಣಿ ಯಶಸ್ವಿ ಉದ್ಯಮಿ. ಸಕ್ಕರೆ ಕಾರ್ಖಾನೆ, ಸಿಮೆಂಟ್ ಕಾರ್ಖಾನೆ ಸ್ಥಾಪಿಸಿದ್ದಾರೆ. ಎಂ. ಆರ್. ಎನ್ (ನಿರಾಣಿ) ಉದ್ದಿಮೆ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು. ಸಾಮಾನ್ಯ ಕೃಷಿ ಕುಟುಂಬದಲ್ಲಿ ಜಿನಿಸಿದ ನಿರಾಣಿ ಈಗ ಸಕ್ಕರೆ ಕಾರ್ಖಾನೆ, ಸಿಮೆಂಟ್ ಕಾರ್ಖಾನೆ, ಶಿಕ್ಷಣ ಸಂಸ್ಥೆಗಳ ಮಾಲೀಕರು.

ಮತ್ತಷ್ಟು ಓದು

ಮುರುಗೇಶ್ ನಿರಾಣಿ ವಯಕ್ತಿಕ ಜೀವನ

ಪೂರ್ಣ ಹೆಸರು ಮುರುಗೇಶ್ ನಿರಾಣಿ
ಜನ್ಮ ದಿನಾಂಕ 01 Jun 1965 (ವಯಸ್ಸು 60)
ಹುಟ್ಟಿದ ಸ್ಥಳ ಬಾಗಲಕೋಟೆ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ
ಉದ್ಯೋಗ ಉದ್ಯಮಿ, ರಾಜಕಾರಣಿ
ತಂದೆಯ ಹೆಸರು ರುದ್ರಪ್ಪ ನಿರಾಣಿ
ತಾಯಿಯ ಹೆಸರು ಸುಶೀಲಾ ಬಾಯಿ
ಅವಲಂಬಿತರ ಹೆಸರು ಕಮಲಾ ನಿರಾಣಿ
ಅವಲಂಬಿತರ ಉದ್ಯೋಗ ಗೃಹಿಣಿ
ಧರ್ಮ ಹಿಂದು
ಜಾತಿ ಲಿಂಗಾಯತ ಪಂಚಮಸಾಲಿ
ವೆಬ್‌ಸೈಟ್ https://www.murugeshnirani.com/

ಮುರುಗೇಶ್ ನಿರಾಣಿ ಒಟ್ಟು ಆಸ್ತಿ

ಒಟ್ಟು ಆಸ್ತಿ
₹27.84 CRORE
ಆಸ್ತಿ
₹98.03 CRORE
ಸಾಲಸೋಲ
₹70.19 CRORE

ಮುರುಗೇಶ್ ನಿರಾಣಿ ಕುರಿತು ಆಸಕ್ತಿದಾಯಕ ಸಂಗತಿಗಳು

ರಾಜಕೀಯದ ಜೊತೆ ಯಶಸ್ವಿ ಉದ್ಯಮಿಯಾಗಿಯೂ ಮುರುಗೇಶ್ ನಿರಾಣಿ ಗುರುತಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಯಶಸ್ವಿಯಾಗಿ ನಡೆಸಿದ್ದಾರೆ

ಸಾಮಾನ್ಯ ಕೃಷಿ ಕುಟುಂಬದಿಂದ ಬಂದವರು ಈಗ ಸಕ್ಕರೆ, ಸಿಮೆಂಟ್ ಕಾರ್ಖನೆಗಳ ಮಾಲೀಕರು

ಮುರುಗೇಶ್ ನಿರಾಣಿ ರಾಜಕೀಯ ಟೈಮ್‌ಲೈನ್

  • 2021: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆ
  • 2018: 3ನೇಬಾರಿಗೆ ಶಾಸಕರಾಗಿ ಆಯ್ಕೆ. ಯಡಿಯೂರಪ್ಪ ಸಂಪುಟದಲ್ಲಿ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರಾಗಿ ಕಾರ್ಯ ನಿರ್ವಹಣೆ
  • 2013: ವಿಧಾನಸಭೆ ಚುನಾವಣೆಯಲ್ಲಿ ಸೋಲು
  • 2008: ಎರಡನೇ ಬಾರಿಗೆ ಶಾಸಕರಾಗಿ ಬೀಳಗಿಯಿಂದ ಆಯ್ಕೆ. ಬಿಜೆಪಿ ಸರ್ಕಾರದಲ್ಲಿ ಬೃಹತ್, ಮಧ್ಯಮ ಕೈಗಾರಿಕಾ ಖಾತೆ ಸಚಿವರಾಗಿ ಕಾರ್ಯ
  • 2004: ಜಮಖಂಡಿ-ಬೀಳಗಿ ಅವಿಭಜಿತ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
  • 1993: ಬಾಗಲಕೋಟೆ ಬಿಜೆಪಿ ಜಿಲ್ಲಾ ಅಧ್ಯಕ್ಷರು

ಹಿಂದಿನ ಇತಿಹಾಸ

  • 2021: ಆಗಸ್ಟ್ 4ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಸೇರ್ಪಡೆಯಾದರು.
  • 1987: ಧಾರವಾಡ ಜಿಲ್ಲೆ ಹುಬ್ಬಳ್ಳಿಯ ಬಿ.ವಿ.ಬಿ ಎಂಜಿನಿಯರಿಂಗ್ ಕಾಲೇಜಿನಿಂದ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿ ಪಡೆದರು.
  • 1982: 1982ರಲ್ಲಿ ಬಾಗಲಕೋಟೆ ಜಿಲ್ಲೆ ಮುಧೋಳದ ಆರ್‌ಎಂಜಿ ಜೂನಿಯರ್ ಕಾಲೇಜಿನಲ್ಲಿ ಪಿ.ಯು.ಸಿ ಉತ್ತೀರ್ಣರಾದರು.

ಮುರುಗೇಶ್ ನಿರಾಣಿ ಸಾಧನೆಗಳು

ಕರ್ನಾಟಕದಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಯಶಸ್ವಿಯಾಗಿ ನಡೆಸಿದ್ದಾರೆ

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+