ಮುಖ್ಯಪುಟ
 » 
ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಯಮಕನಮರಡಿ (ಎಸ್‌ಸಿ) ಕ್ಷೇತ್ರದ ಕಾಂಗ್ರೆಸ್ ಶಾಸಕ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು.

ಸತೀಶ್ ಜಾರಕಿಹೊಳಿ ಜೀವನ ಚರಿತ್ರೆ

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಯಮಕನಮರಡಿ (ಎಸ್‌ಸಿ) ಕ್ಷೇತ್ರದ ಕಾಂಗ್ರೆಸ್ ಶಾಸಕ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು.

ಸತೀಶ್ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ವಾಲ್ಮೀಕಿ (ಬೇಡರ) ಸಮುದಾಯಕ್ಕೆ ಸೇರಿದ ಇವರು ದ್ವಿತೀಯ ಪಿಯುಸಿ ತನಕ ವ್ಯಾಸಂಗ ಮಾಡಿದ್ದಾರೆ.

ಸತೀಶ್ ಜಾರಕಿಹೊಳಿ 1998 ರಿಂದ 2004ರ ತನಕ ವಿಧಾನ ಪರಿಷತ್ ಸದಸ್ಯರಾಗಿದ್ದರು. 2004 ರಿಂದ 2008ರ ತನಕ ಸಹ ಪರಿಷತ್ ಸದಸ್ಯರಾಗಿದ್ದರು. 2004ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಮುಖ್ಯಮಂತ್ರಿ ಧರಂಸಿಂಗ್ ಸಂಪುಟದಲ್ಲಿ ಸತೀಶ್ ಜಾರಕಿಹೊಳಿ ಜವಳಿ (ಸ್ವತಂತ್ರ ಖಾತೆ) ರಾಜ್ಯ ಸಚಿವ ಸ್ಥಾನ ಸಿಕ್ಕಿತ್ತು.

2008ರ ಚುನಾವಣೆಯಲ್ಲಿ 46,132 ಮತಗಳನ್ನು ಪಡೆದು ಯಮಕನಮರಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡರು. 2013ರ ಚುನಾವಣೆಯಲ್ಲಿಯೂ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ 2013ರಿಂದ 2015ರ ತನಕ ಅಬಕಾರಿ ಸಚಿವರಾಗಿ ಕೆಲಸ ಮಾಡಿದರು. 2015 ರಿಂದ 2016ರ ತನಕ ಸಣ್ಣ ಕೈಗಾರಿಕಾ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು.

2018ರ ಚುನಾವಣೆಯಲ್ಲಿ 73,512 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದಾರೆ. 2021ರ ಜನವರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ ನೇಮಕಗೊಂಡಿದ್ದಾರೆ.

ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿ ಶಾಸಕರು, ಮಾಜಿ ಸಚಿವರು. ಮತ್ತೊಬ್ಬ ಸಹೋದರ ಲಖನ್ ಜಾರಕಿಹೊಳಿ ಸಹ ರಾಜಕೀಯಕ್ಕೆ ಬಂದಿದ್ದು, ಪಕ್ಷೇತರ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

ಮತ್ತಷ್ಟು ಓದು
By Moumi Majumdar Updated: Tuesday, September 13, 2022, 09:58:46 AM [IST]

ಸತೀಶ್ ಜಾರಕಿಹೊಳಿ ವಯಕ್ತಿಕ ಜೀವನ

ಪೂರ್ಣ ಹೆಸರು ಸತೀಶ್ ಜಾರಕಿಹೊಳಿ
ಜನ್ಮ ದಿನಾಂಕ 01 Jun 1962 (ವಯಸ್ಸು 61)
ಹುಟ್ಟಿದ ಸ್ಥಳ ಗೋಕಾಕ್
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ SSLC Education from govt P.U College Gokak in the year April 1978, P.U.C from J.S.S. Arts, Science & Commerce College Gokak in 1981
ಉದ್ಯೋಗ ಕೃಷಿ & ಉದ್ಯಮ
ತಂದೆಯ ಹೆಸರು ಲಕ್ಷಣರಾವ ರಾ. ರ ಜಾರಕಿಹೊಳಿ
ತಾಯಿಯ ಹೆಸರು ಭೀಮವ್ವ ಲ. ಜಾರಕಿಹೊಳಿ
ಧರ್ಮ ಹಿಂದು
ಜಾತಿ ವಾಲ್ಮೀಕಿ
ವೆಬ್‌ಸೈಟ್ www.satishsugars.com
ಸಾಮಾಜಿಕ ಜಾಲತಾಣದ ವಿಳಾಸ ಸಾಮಾಜಿಕ ಜಾಲತಾಣದ ವಿಳಾಸ:

ಸತೀಶ್ ಜಾರಕಿಹೊಳಿ ಒಟ್ಟು ಆಸ್ತಿ

ಒಟ್ಟು ಆಸ್ತಿ: ₹163.97 CRORE
ಆಸ್ತಿ:₹175.3 CRORE
ಸಾಲಸೋಲ: ₹11.33 CRORE

ಸತೀಶ್ ಜಾರಕಿಹೊಳಿ ಕುರಿತು ಆಸಕ್ತಿದಾಯಕ ಸಂಗತಿಗಳು

ಮೌಢ್ಯವಿರೋಧಿ ದಿನಾಚರಣೆ ಆಚರಣೆ ಮಾಡುವ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಮಾಡುತ್ತಾರೆ.

ಬೆಳಗಾವಿ ಜಿಲ್ಲೆಯ ಪ್ರಭಾವಿ ಜಾರಕಿಹೊಳಿ ಸಹೋದರರಲ್ಲಿ ಸತೀಶ್ ಜಾರಕಿಹೊಳಿ ಒಬ್ಬರು

ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ ರಾಜಕೀಯ ಟೈಮ್‌ಲೈನ್

2021
  • ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ
2018
  • 73,512 ಮತಗಳನ್ನು ಪಡೆದು ಪುನಃ ಶಾಸಕರಾಗಿ ಆಯ್ಕೆ.
2013
  • 2ನೇ ಬಾರಿಗೆ ಶಾಸಕರಾಗಿ ಆಯ್ಕೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ, ಸಣ್ಣ ಕೈಗಾರಿಕಾ ಖಾತೆ ಸಚಿವರಾಗಿ ಕೆಲಸ
2008
  • 46,132 ಮತಗಳನ್ನು ಪಡೆದು ಯಮಕನಮರಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ.
2004
  • 2004 ರಿಂದ 2008ರ ತನಕ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಧರಂಸಿಂಗ್ ಸಂಪುಟದಲ್ಲಿ ಜವಳಿ ಖಾತೆ ಸಚಿವರಾಗಿದ್ದರು
1998
  • ಸತೀಶ್ ಜಾರಕಿಹೊಳಿ 1998 ರಿಂದ 2004ರ ತನಕ ವಿಧಾನ ಪರಿಷತ್ ಸದಸ್ಯರಾಗಿದ್ದರು.

Disclaimer: The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X