• search
  • Live TV
ಮುಖ್ಯಪುಟ
 » 
ರಾಜಕಾರಣಿಗಳು
 » 
ಶಶಿಕಲಾ ಜೊಲ್ಲೆ

ಶಶಿಕಲಾ ಜೊಲ್ಲೆ

ಜೀವನ ಚರಿತ್ರೆ

ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿರುವ ಏಕೈಕ ಮಹಿಳಾ ಸಚಿವೆ ಶಶಿಕಲಾ ಜೊಲ್ಲೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಶಶಿಕಲಾ ಜೊಲ್ಲೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ.

ಶಶಿಕಲಾ ಜೊಲ್ಲೆ 20 ನವೆಂಬರ್ 1969ರಲ್ಲಿ ಬೆಳಗಾವಿ ಜಿಲ್ಲೆಯ ಭೀವಶಿಯಲ್ಲಿ ಜನಿಸಿದರು. 1985ರಲ್ಲಿ ಹೈಸ್ಕೂಲ್‌ ಶಿಕ್ಷಣವನ್ನು ಘಟಪ್ರಭಾದಲ್ಲಿ ಪೂರ್ಣಗೊಳಿಸಿದರು. 1989ರ ಡಿಸೆಂಬರ್ 21ರಂದು ಉದ್ಯಮಿಯಾದ ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆಯನ್ನು ವಿವಾಹವಾದರು.

2008ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡ ಶಶಿಕಲಾ ಜೊಲ್ಲೆ 2013, 2018ರಲ್ಲಿ ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಸಬಲೀಕರಣ ಖಾತೆ ಸಚಿವೆಯಾಗಿದ್ದರು ಶಶಿಕಲಾ ಜೊಲ್ಲೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಶಶಿಕಲಾ ಜೊಲ್ಲೆಗೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಆದರೆ ಮತ್ತೆ ಅವರಿಗೆ ಸಚಿವ ಸ್ಥಾನ ನೀಡಲಾಯಿತು. ಮುಜರಾಯಿ, ವಕ್ಪ್ ಮತ್ತು ಹಜ್ ಖಾತೆಯ ಹೊಣೆಯನ್ನು ನೀಡಲಾಗಿದೆ.

ಚಿಕ್ಕೋಡಿ, ನಿಪ್ಪಾಣಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕ್‌ಗಳನ್ನು ಹೊಂದಿದ್ದಾರೆ. ಬಿಜೆಪಿಯ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾಗಿಯೂ ಶಶಿಕಲಾ ಜೊಲ್ಲೆ ಕೆಲಸ ಮಾಡಿದ್ದಾರೆ.

ವಯಕ್ತಿಕ ಜೀವನ

ಪೂರ್ಣ ಹೆಸರು ಶಶಿಕಲಾ ಜೊಲ್ಲೆ
ಜನ್ಮ ದಿನಾಂಕ 20 Nov 1969 (ವಯಸ್ಸು 53)
ಹುಟ್ಟಿದ ಸ್ಥಳ ಭೀವಶಿ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ SSLC from High School Ghataprabha
ಉದ್ಯೋಗ ಸಮಾಜ ಸೇವೆ
ತಂದೆಯ ಹೆಸರು NA
ತಾಯಿಯ ಹೆಸರು NA
ಅವಲಂಬಿತರ ಹೆಸರು ಅಣ್ಣಾ ಸಾಹೇಬ್ ಜೊಲ್ಲೆ
ಅವಲಂಬಿತರ ಉದ್ಯೋಗ ಉದ್ಯಮಿ, ಕೃಷಿಕರು
ಮಕ್ಕಳು 2 ಪುತ್ರ(ರು)

ವಿಳಾಸ

ಖಾಯಂ ವಿಳಾಸ ಬಸವಜ್ಯೋತಿ ಫಾರ್ಮ್ ಹೌಸ್, ಚಿಕ್ಕೋಡಿ ತಾಲೂಕು, ಬೆಳಗಾವಿ ಜಿಲ್ಲೆ
ಪ್ರಸ್ತುತ ವಿಳಾಸ ಬಸವಜ್ಯೋತಿ ಫಾರ್ಮ್ ಹೌಸ್, ಚಿಕ್ಕೋಡಿ ತಾಲೂಕು, ಬೆಳಗಾವಿ ಜಿಲ್ಲೆ
ಸಂಪರ್ಕ ಸಂಖ್ಯೆ NA
ಈ ಮೇಲ್ sajolle1@gmail.com
ವೆಬ್‌ಸೈಟ್ shashikalajolle.in
ಸಾಮಾಜಿಕ ಜಾಲತಾಣದ ವಿಳಾಸ

ಆಸಕ್ತಿಕರ ಅಂಶಗಳು

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿದ್ದ ಏಕೈಕ ಮಹಿಳಾ ಸಚಿವೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿರುವ ಏಕೈಕ ಮಹಿಳಾ ಸಚಿವೆ

ಶಶಿಕಲಾ ಜೊಲ್ಲೆ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆ, ಚಿಕ್ಕೋಡಿ- ಸದಲಗಾ ಕ್ಷೇತ್ರದಲ್ಲಿ ಅಣ್ಣಾ ಸಾಹೇಬ್ ಜೊಲ್ಲೆಗೆ ಟಿಕೆಟ್ ನೀಡಿತ್ತು. ಶಶಿಕಲಾ ಜಿಲ್ಲೆ ಗೆದ್ದರು, ಪತಿ ಅಣ್ಣಾ ಸಾಹೇಬ್ ಜೊಲ್ಲೆ ಸೋತರು.

ರಾಜಕೀಯ ಕಾಲಾನುಕ್ರಮ

  • 2021
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆ. ಮುಜರಾಯಿ, ವಕ್ಪ್ ಮತ್ತು ಹಜ್ ಖಾತೆಯ ಹೊಣೆ.
  • 2019
    ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರ್ಪಡೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಸಬಲೀಕರಣ ಖಾತೆ ಹೊಣೆ.
  • 2018
    87,006 ಮತಗಳನ್ನು ಪಡೆದು ಎರಡನೇ ಬಾರಿಗೆ ಶಾಸಕಿಯಾಗಿ ಆಯ್ಕೆಯಾದರು.
  • 2013
    81,860 ಮತಗಳನ್ನು ಪಡೆದು ಕಾಂಗ್ರೆಸ್‌ನ ಪಾಂಡುರಂಗ ಪಾಟೀಲ್ ಸೋಲಿಸಿ ಮೊದಲ ಬಾರಿಗೆ ಶಾಸಕಿಯಾದರು.
  • 2008
    ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ 38,585 ಮತಗಳನ್ನು ಪಡೆದು ಸೋಲು.
ಒಟ್ಟು ಆಸ್ತಿ17.57 CRORE
ಆಸ್ತಿ34.49 CRORE
ಸಾಲಸೋಲ16.92 CRORE

Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X