• search
  • Live TV
ಮುಖ್ಯಪುಟ
 » 
ರಾಜಕಾರಣಿಗಳು
 » 
ಸಿದ್ದರಾಮಯ್ಯ

ಸಿದ್ದರಾಮಯ್ಯ

ಜೀವನ ಚರಿತ್ರೆ

ಸಿದ್ದರಾಮಯ್ಯ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು. 2013 ರಿಂದ 2018ರ ತನಕ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು.

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ 2019ರಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು. ವಿರೋಧ ಪಕ್ಷದ ನಾಯಕರಾಗಿ ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದಲ್ಲಿ ಸಿದ್ದರಾಮಯ್ಯ ನಿಸ್ಸೀಮರು.

ಮೂಲತಃ ವೃತ್ತಿಯಿಂದ ವಕೀಲರಾದ ಇವರು ಸಮಾಜವಾದಿ ಯುವಜನ ಸಭಾ ಮೂಲಕ ರಾಜಕೀಯಕ್ಕೆ ಬಂದರು. 1978 ರವರೆಗೂ ಇವರು ಜ್ಯೂನಿಯರ್ ಲಾಯರ್ ಆಗಿ ಕೆಲಸ ಮಾಡಿದರು. ಕರ್ನಾಟಕ ವಿಧಾನಸಭೆಯ ಹಲವಾರು ಸ್ಥಾನಗಳಲ್ಲಿ ಸೇವೆ ಸಲ್ಲಿಸಿರುವ ಸಿದ್ದರಾಮಯ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರು.

ಕಾಂಗ್ರೆಸ್ ಸೇರುವ ಮುನ್ನ ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯ ಪಕ್ಷದ ವತಿಯಿಂದ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಎರಡು ವರ್ಷ ಕೆಲಸ ಮಾಡಿದ್ದಾರೆ. ರಾಜ್ಯದ ಬಲಿಷ್ಠ ಕುರುಬ ಸಮುದಾಯಕ್ಕೆ ಸೇರಿದ ಇವರು ಜೆಡಿಎಸ್ ಮುಖಂಡ ಎಚ್.ಡಿ. ದೇವೆಗೌಡರ ವಿರುದ್ಧ ಬಂಡಾಯ ಸಾರಿದ ನಂತರ 2005-06 ರಲ್ಲಿ ಪಕ್ಷದಿಂದ ಉಚ್ಛಾಟಿಸಲ್ಪಟ್ಟರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.

ವಯಕ್ತಿಕ ಜೀವನ

ಪೂರ್ಣ ಹೆಸರು ಸಿದ್ದರಾಮಯ್ಯ
ಜನ್ಮ ದಿನಾಂಕ 12 Aug 1948 (ವಯಸ್ಸು 74)
ಹುಟ್ಟಿದ ಸ್ಥಳ ಮೈಸೂರು
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ Graduate Professional
ಉದ್ಯೋಗ ರಾಜಕಾರಣಿ
ತಂದೆಯ ಹೆಸರು ಸಿದ್ದರಾಮೇಗೌಡ
ತಾಯಿಯ ಹೆಸರು ಬೋರಮ್ಮ ಗೌಡ
ಅವಲಂಬಿತರ ಹೆಸರು ಪಾರ್ವತಿ ಸಿದ್ದರಾಮಯ್ಯ
ಅವಲಂಬಿತರ ಉದ್ಯೋಗ ಹೌಸ್ ವೈಫ್
ಮಕ್ಕಳು 2 ಪುತ್ರ(ರು)

ವಿಳಾಸ

ಖಾಯಂ ವಿಳಾಸ ಎಂಸಿ ಲೇಔಟ್, ವಿಜಯನಗರ ವಾಟರ ಟ್ಯಾಂಕ್ ಹತ್ತಿರ, ಬೆಂಗಳೂರು
ಪ್ರಸ್ತುತ ವಿಳಾಸ ಕಾವೇರಿ, ನಂ.1, ವಿಂಡ್ಸರ್ ಮ್ಯಾನರ್ ಸರ್ಕಲ್, ಬೆಂಗಳೂರು
ಸಂಪರ್ಕ ಸಂಖ್ಯೆ 9448054400
ಸಾಮಾಜಿಕ ಜಾಲತಾಣದ ವಿಳಾಸ

ಆಸಕ್ತಿಕರ ಅಂಶಗಳು

ಸಿದ್ದರಾಮಯ್ಯನವರ ಪಾಲಕರು ತಮ್ಮ ಮಗ ಡಾಕ್ಟರ್ ಆಗಲಿ ಎಂದು ಬಯಸಿದ್ದರು. ಆದರೆ ಇವರು ಮಾತ್ರ ವಕೀಲಿಕೆ ಆರಿಸಿಕೊಂಡರು. ಹಸಿವು ಮುಕ್ತ ರಾಜ್ಯ ಮಾಡುವುದು ಸಿದ್ದರಾಮಯ್ಯನವರ ಪ್ರಮುಖ ಗುರಿಗಳಲ್ಲೊಂದು.

ಈ ನಿಟ್ಟಿನಲ್ಲಿ ಬಡವರಿಗಾಗಿ ಕಡಿಮೆ ದರದಲ್ಲಿ ತಿಂಡಿ ನೀಡುವ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿದರು. 2018ರಲ್ಲಿ ಮುಖ್ಯಮಂತ್ರಿಯಾಗಿ ಇವರು ತಮ್ಮ 13ನೇ ಬಜೆಟ್ ಮಂಡಿಸಿದ್ದು ದಾಖಲೆಯಾಗಿದೆ.

ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ವಿರುದ್ಧ ಸಮರ ಸಾರಿದ ಇವರು 2010 ರಲ್ಲಿ ಬೆಂಗಳೂರಿನಿಂದ ಬಳ್ಳಾರಿಯವರೆಗೆ 320 ಕಿ. ಮೀ. ಪಾದಯಾತ್ರೆ ಮಾಡಿದರು. ಇದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮೈಲುಗಲ್ಲಾಗಿದೆ.

ರಾಜಕೀಯ ಕಾಲಾನುಕ್ರಮ

  • 2022
    ಆಗಸ್ಟ್ 3ರಂದು ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಎಂಬ ಸಮಾವೇಶ ಆಯೋಜನೆ ಮಾಡಲಾಗಿತ್ತು. 5 ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಹಿಂದಿನ ಇತಿಹಾಸ

  • 2019
    ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು.

ಡಿ. ದೇವರಾಜ ಅರಸು ನಂತರ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರ್ಣಗೊಳಿಸಿದ ಏಕೈಕ ಮುಖ್ಯಮಂತ್ರಿ ಇವರಾಗಿದ್ದಾರೆ. ಮುಖ್ಯಮಂತ್ರಿಯಾದ ನಂತರ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದರು.
ಒಟ್ಟು ಆಸ್ತಿ15.5 CRORE
ಆಸ್ತಿ20.37 CRORE
ಸಾಲಸೋಲ4.86 CRORE

Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.

ಆಲ್ಬಂ