Get Updates
Get notified of breaking news, exclusive insights, and must-see stories!

ಉಮಾಶ್ರೀ

ಉಮಾಶ್ರೀ
ಉಮಾಶ್ರೀ ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದ ಮಾಜಿ ಶಾಸಕಿ. ಚಲನಚಿತ್ರ, ಧಾರವಾಹಿಗಳ ನಟಿ.
By Moumi Majumdar | Thursday, September 8, 2022, 06:13:57 PM [IST]

ಉಮಾಶ್ರೀ ಜೀವನ ಚರಿತ್ರೆ

ಉಮಾಶ್ರೀ ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದ ಮಾಜಿ ಶಾಸಕಿ. ಚಲನಚಿತ್ರ, ಧಾರವಾಹಿಗಳ ನಟಿ. 2013ರ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸೇರುವ ಅವಕಾಶ ಸಿಕ್ಕಿತು.

ರಾಜ್ಯಶಾಸ್ತ್ರ ವಿಷಯದಲ್ಲಿ ಪದವಿ ಪಡೆದಿರುವ ಉಮಾಶ್ರೀ ಎರಡು ದಶಕಗಳಿಂದ ರಾಜಕೀಯದಲ್ಲಿದ್ದಾರೆ. 2001 ರಿಂದ 2006ರ ತನಕ ವಿಧಾನ ಪರಿಷತ್ ಸದಸ್ಯೆಯಾಗಿದ್ದರು. 2008ರ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದರು. 50,351 ಮತಗಳನ್ನು ಪಡೆದು ಬಿಜೆಪಿಯ ಸಿದ್ದು ಸವದಿ ವಿರುದ್ಧ ಸೋತರು.

2013ರ ಚುನಾವಣೆಯಲ್ಲಿ ಪುನಃ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 70,189 ಮತಗಳನ್ನು ಪಡೆದು ಬಿಜೆಪಿಯ ಸಿದ್ದು ಸವದಿ ಸೋಲಿಸಿ ಮೊದಲ ಬಾರಿಗೆ ಗೆಲುವು ಕಂಡರು. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾದರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಖಾತೆ ಹೊಣೆ ಸಿಕ್ಕಿತು.

2018ರ ಚುನಾವಣೆಯಲ್ಲಿ 66,324 ಮತಗಳನ್ನು ಪಡೆದು ಉಮಾಶ್ರೀ ಸೋಲು ಕಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಉಮಾಶ್ರೀ ಕೆಲಸ ಮಾಡಿದ್ದಾರೆ.

ರಾಜಕೀಯ ಹೊರತುಪಡಿಸಿ ಸಿನಿಮಾ ಮತ್ತು ಧಾರವಾಹಿಗಳಲ್ಲಿ ಉಮಾಶ್ರೀ ನಟಿಸುತ್ತಾರೆ. 350ಕ್ಕೂ ಅಧಿಕ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. "ಗುಲಾಬಿ ಟಾಕೀಸ್" ಚಿತ್ರದ ಅಭಿನಯಕ್ಕೆ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.

ಮತ್ತಷ್ಟು ಓದು

ಉಮಾಶ್ರೀ ವಯಕ್ತಿಕ ಜೀವನ

ಪೂರ್ಣ ಹೆಸರು ಉಮಾಶ್ರೀ
ಜನ್ಮ ದಿನಾಂಕ 10 Jul 1957 (ವಯಸ್ಸು 68)
ಹುಟ್ಟಿದ ಸ್ಥಳ ನೊಣವಿನಕೆರೆ, ತುಮಕೂರು
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ M.A from Karnataka State Open University, Mysore.
ಉದ್ಯೋಗ ನಟಿ, ರಾಜಕಾರಣಿ
ತಂದೆಯ ಹೆಸರು NA
ತಾಯಿಯ ಹೆಸರು NA
ಅವಲಂಬಿತರ ಹೆಸರು NA
ಮಕ್ಕಳು 1 ಪುತ್ರ(ರು) 1 ಪುತ್ರಿ(ಯರು)
ಧರ್ಮ ಹಿಂದು
ಜಾತಿ ನೇಕಾರ
ವೆಬ್‌ಸೈಟ್ NA

ಉಮಾಶ್ರೀ ಒಟ್ಟು ಆಸ್ತಿ

ಒಟ್ಟು ಆಸ್ತಿ
₹5.77 CRORE
ಆಸ್ತಿ
₹5.83 CRORE
ಸಾಲಸೋಲ
₹6.43 LAKHS

ಉಮಾಶ್ರೀ ಕುರಿತು ಆಸಕ್ತಿದಾಯಕ ಸಂಗತಿಗಳು

ನಟಿಯಾಗಿಯೂ ಉಮಾಶ್ರೀ ಚಿರಪರಿಚಿತರು. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಧಾರವಾಹಿಗಳಲ್ಲಿ ಸಹ ನಟಿಸುತ್ತಾರೆ.

ಗುಲಾಬಿ ಟಾಕೀಸ್ ಚಿತ್ರದ ಅಭಿನಯಕ್ಕೆ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.

ಉಮಾಶ್ರೀ ರಾಜಕೀಯ ಟೈಮ್‌ಲೈನ್

  • 2018: ವಿಧಾನಸಭೆ ಚುನಾವಣೆಯಲ್ಲಿ ಸೋಲು
  • 2013: ಎರಡನೇ ಬಾರಿಗೆ ಚುನಾವಣೆಗೆ ಸ್ಪರ್ಧೆ, ಗೆಲುವು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸೇರ್ಪಡೆ
  • 2008: ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ, ಸೋಲು
  • 2001: ವಿಧಾನ ಪರಿಷತ್ ಸದಸ್ಯೆಯಾಗಿ ನೇಮಕ

ಉಮಾಶ್ರೀ ಸಾಧನೆಗಳು

2011ರಲ್ಲಿ ಕೃಷ್ಣನ ಲವ್ ಸ್ಟೋರಿ ಚಿತ್ರದಲ್ಲಿನ ಅಭಿನಯಕ್ಕೆ ಪೋಷಕ ನಟಿ ವಿಭಾಗದಲ್ಲಿ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದಾರೆ.

2007ರಲ್ಲಿ ಗುಲಾಬಿ ಟಾಕೀಸ್‌ ಚಿತ್ರದ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+