Get Updates
Get notified of breaking news, exclusive insights, and must-see stories!

ವಿ. ಸುನೀಲ್ ಕುಮಾರ್

ವಿ. ಸುನೀಲ್ ಕುಮಾರ್
ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್.
By Rashmi | Friday, September 2, 2022, 03:01:51 PM [IST]

ವಿ. ಸುನೀಲ್ ಕುಮಾರ್ ಜೀವನ ಚರಿತ್ರೆ

ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇವರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಇಂಧನ ಸಚಿವರು.

ಬಿಲ್ಲವ ಸಮುದಾಯಕ್ಕೆ ಸೇರಿದ ಬಿ. ಸುನೀಲ್ ಕುಮಾರ್ ಬಿಎ ಪದವೀಧರರು. 1-4ನೇ ತರಗತಿಯ ತನಕ ಕಾರ್ಕಳದ ರಾಮಪ್ಪ ಹಿರಿಯ ಪ್ರಾಥಮಿಕ ಶಾಲೆ ಪುಲ್ಕೇರಿಯಲ್ಲಿ ವ್ಯಾಸಂಗ ಮಾಡಿದರು. 5-7ನೇ ತರಗತಿಯನ್ನು ಬಸವನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿದರು. ಪ್ರೌಢ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಶಿವಮೊಗ್ಗ ಜಿಲ್ಲೆಯ ಪದವಿ ಪೂರ್ವ ಕಾಲೇಜು ಹಿತ್ತಲದಲ್ಲಿ ಪೂರ್ಣಗೊಳಿಸಿದರು.

ಚಿಕ್ಕಮಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಪದವಿ ಪಡೆದರು. ರಾಜಕೀಯಕ್ಕೆ ಸೇರುವ ಮೊದಲ ಕೆಲವು ಕಾಲ ಪತ್ರಕರ್ತರಾಗಿಯೂ ವಿ. ಸುನೀಲ್ ಕುಮಾರ್ ಕೆಲಸ ಮಾಡಿದ್ದಾರೆ.

ವಿದ್ಯಾರ್ಥಿಯಾಗಿದ್ದಾಗಲೇ ಆರ್‌ಎಸ್‌ಎಸ್‌ ಮತ್ತು ಎಬಿವಿಪಿ ಸಂಪರ್ಕಕ್ಕೆ ಬಂದರು. ಹಿತ್ತಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರು. ಹಿಂದುತ್ವದ ಸಿದ್ದಾಂತದ ಕಡೆ ಆಕರ್ಷಿತಗೊಂಡು ದತ್ತಪೀಠದ ಹೋರಾಟದಲ್ಲಿ ಪಾಲ್ಗೊಂಡರು.

ಬಜರಂಗದಳ ಚಿಕ್ಕಮಗಳೂರು ಜಿಲ್ಲಾ ಸಂಚಾಲಕರಾಗಿ, ಕರ್ನಾಟಕ ರಾಜ್ಯ ಸಂಚಾಲಕರಾಗಿಯೂ ಕೆಲಸ ಮಾಡಿದರು. 2004ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದರು. ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದ ಕಾರ್ಕಳದಲ್ಲಿ ಗೆಲುವು ಕಂಡರು.

2008ರ ಚುನಾವಣೆಯಲ್ಲಿ 1537 ಮತಗಳ ಅಂತರದಿಂದ ಕಾಂಗ್ರೆಸ್‌ನ ಹೆಚ್. ಗೋಪಾಲ ಭಂಡಾರಿ ವಿರುದ್ಧ ಸೋಲು ಕಂಡರು. 2013ರ ಚುನಾವಣೆಯಲ್ಲಿ ಕಾರ್ಕಳದಲ್ಲಿ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದರು. 65,039 ಮತಗಳನ್ನು ಪಡೆದು ಜಯಗಳಿಸಿದರು. 2018ರ ಚುನಾವಣೆಯಲ್ಲಿ 91,245 ಮತಗಳನ್ನು ಪಡೆದು ಜಯಗಳಿಸಿದರು.

2021ರಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ವಿ. ಸುನೀಲ್ ಕುಮಾರ್‌ಗೆ ಮೊದಲ ಬಾರಿಗೆ ಸಚಿವರಾಗುವ ಅವಕಾಶ ಸಿಕ್ಕಿತು. ಇಂಧನ ಖಾತೆ ಹೊಣೆಯನ್ನು ಅವರಿಗೆ ನೀಡಲಾಯಿತು.

2013ರ ಚುನಾವಣೆಯಲ್ಲಿ ಗೆದ್ದ ಬಳಿಕ ಕರ್ನಾಟಕ ಸರಕಾರದ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಆಯ್ಕೆಯಾದರು. ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಗೋವಾ ಚುನಾವಣೆಯ ಉಸ್ತುವಾರಿಯಾಗಿ, ಬಿಜೆಪಿ ರಾಜ್ಯ ಯುವಮೋರ್ಚಾ ಅಧ್ಯಕ್ಷರಾಗಿ ಮೂರು ವರ್ಷ ಕಾರ್ಯ ನಿರ್ವಹಣೆ ಮಾಡಿದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡಿ, ಹಲವು ಯಶಸ್ವಿ ಸಮಾವೇಶಗಳನ್ನು ಆಯೋಜನೆ ಮಾಡಿದರು.

ಮತ್ತಷ್ಟು ಓದು

ವಿ. ಸುನೀಲ್ ಕುಮಾರ್ ವಯಕ್ತಿಕ ಜೀವನ

ಪೂರ್ಣ ಹೆಸರು ವಿ. ಸುನೀಲ್ ಕುಮಾರ್
ಜನ್ಮ ದಿನಾಂಕ 15 Aug 1975 (ವಯಸ್ಸು 50)
ಹುಟ್ಟಿದ ಸ್ಥಳ ಮೂಡಿಗೆರೆ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ Kuvempu University, Nilaya
ಉದ್ಯೋಗ ಕೃಷಿಕ
ತಂದೆಯ ಹೆಸರು ಎಂ. ಕೆ. ವಾಸುದೇವ
ತಾಯಿಯ ಹೆಸರು ಕೆ. ಪಿ. ಪ್ರಮೋದ
ಅವಲಂಬಿತರ ಹೆಸರು ಪ್ರಿಯಾಂಕ
ಅವಲಂಬಿತರ ಉದ್ಯೋಗ ಗೃಹಿಣಿ
ಧರ್ಮ ಹಿಂದು
ಜಾತಿ ಬಿಲ್ಲವ
ವೆಬ್‌ಸೈಟ್ vsunilkumar.in

ವಿ. ಸುನೀಲ್ ಕುಮಾರ್ ಒಟ್ಟು ಆಸ್ತಿ

ಒಟ್ಟು ಆಸ್ತಿ
₹-89.24 CRORE
ಆಸ್ತಿ
₹2.92 CRORE
ಸಾಲಸೋಲ
₹92.16 CRORE

ವಿ. ಸುನೀಲ್ ಕುಮಾರ್ ಕುರಿತು ಆಸಕ್ತಿದಾಯಕ ಸಂಗತಿಗಳು

ಎಬಿವಿಪಿ, ಆರ್‌ಎಸ್‌ಎಸ್‌ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ

ಸಾವರ್ಕರ್ ಜನ್ಮ ಶತಮಾನೋತ್ಸವದ ಅಂಗವಾಗಿ ಕಾರ್ಕಳ ತಾಲೂಕಿನಾದ್ಯಂತ ಯುವಜನರಿಗೆ, ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಸರಣಿಗಳನ್ನು ನಡೆಸಿದ್ದಾರೆ.

1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ 150ನೇ ವರ್ಷಾಚರಣೆಯ ಅದ್ಧೂರಿ ಆಚರಣೆ ತಾಲೂಕಿನ ವಿದ್ಯಾರ್ಥಿಗಳೊಂದಿಗೆ ಚಹಾ ಕೂಟದ ಮೂಲಕ ಒಡನಾಟ

ವಿ. ಸುನೀಲ್ ಕುಮಾರ್ ರಾಜಕೀಯ ಟೈಮ್‌ಲೈನ್

  • 2021: ಸಚಿವರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆ
  • 2018: ಚುನಾವಣೆಯಲ್ಲಿ ಮತ್ತೆ ಗೆಲುವು. 3ನೇ ಬಾರಿಗೆ ಶಾಸಕರಾಗಿ ಆಯ್ಕೆ
  • 2013: ವಿಧಾನಸಭೆ ಚುನಾವಣೆಯಲ್ಲಿ ಗೆಲುವು. 2ನೇ ಬಾರಿಗೆ ಶಾಸಕರಾಗಿ ಆಯ್ಕೆ
  • 2008: 1537 ಮತಗಳ ಅಂತರದಿಂದ ವಿಧಾನಸಭೆ ಚುನಾವಣೆಯಲ್ಲಿ ಸೋಲು
  • 2004: ಕಾರ್ಕಳ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ. ಶಾಸಕರಾಗಿ ಮೊದಲ ಬಾರಿಗೆ ಆಯ್ಕೆ

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+