ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ, ಜನವರಿ 27: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜನವರಿ 28)ದಂದು ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಸಮಾವೇಶವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.

ಜಗತ್ತಿನಾದ್ಯಂತದ 400 ಕ್ಕೂ ಹೆಚ್ಚು ಉದ್ಯಮಗಳ ಮುಖಂಡರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಇದರಲ್ಲಿ ಪ್ರಧಾನಿಯವರು ನಾಲ್ಕನೇ ಕೈಗಾರಿಕಾ ಕ್ರಾಂತಿ- ಮನುಕುಲದ ಒಳಿತಿಗಾಗಿ ತಂತ್ರಜ್ಞಾನದ ಬಳಕೆ- ಕುರಿತು ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಿಇಒಗಳೊಂದಿಗೆ ಸಂವಾದವನ್ನೂ ನಡೆಸಲಿದ್ದಾರೆ.

ಕೋವಿಡ್ ನಂತರದ ಜಗತ್ತಿನಲ್ಲಿ ವಿಶ್ವ ಆರ್ಥಿಕ ವೇದಿಕೆಯ ಹೊಸ ಆರಂಭ ಉಪಕ್ರಮದ ಚಾಲನೆಯೂ ದಾವೋಸ್ ಸಮಾವೇಶದ ಕಾರ್ಯಸೂಚಿಯಲ್ಲಿದೆ.

PM to address WEF’s Davos Dialogue on 28th January

ಸಾರ್ವಜನಿಕ - ಖಾಸಗಿ ಸಹಭಾಗಿತ್ವದ ವಿಶ್ವ ಆರ್ಥಿಕ ವೇದಿಕೆ (ವರ್ಲ್ಡ್ ಎಕಾನಾಮಿಕ್ ಫೋರಂ) ಸ್ವಿಜರ್‌ ಲ್ಯಾಂಡ್‌ನ ದಾವೋಸ್ ನಲ್ಲಿ 2020ರ ಜನವರಿ 17ರಿಂದ ನಾಲ್ಕು ದಿನಗಳ ಕಾಲ ಜಾಗತಿಕ ಮಟ್ಟದ ಅದ್ಧೂರಿ ಸಮಾವೇಶ ನಡೆದಿತ್ತು. 40 ಕ್ಕೂ ಹೆಚ್ಚು ಜಾಗತಿಕ ಮಟ್ಟದ ಕಂಪನಿಗಳ ಜತೆಯಲ್ಲಿ ಯಡಿಯೂರಪ್ಪ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಹ್ವಾನಿಸಿದ್ದರು.

ವಿಶ್ವ ಆರ್ಥಿಕ ವೇದಿಕೆ: ಲಾಭಗಳಿಕೆಯ ಉದ್ದೇಶವಿಲ್ಲದ ಈ ಪ್ರತಿಷ್ಠಾನವಾಗಿದೆ. ಆರೋಗ್ಯ ಮತ್ತು ಪರಿಸರ-ಸಂಬಂಧಿ ವಿಷಯಗಳೂ ಸೇರಿದಂತೆ, ವಿಶ್ವವು ಎದುರಿಸುತ್ತಿರುವ ಅತ್ಯಂತ ತುರ್ತು ಸಮಸ್ಯೆಗಳ ಕುರಿತು ಚರ್ಚಿಸಲು, ವ್ಯವಹಾರ ವಲಯದ ಅಗ್ರಗಣ್ಯ ನಾಯಕರು, ಅಂತಾರಾಷ್ಟ್ರೀಯ ರಾಜಕೀಯ ನಾಯಕರು, ಆಯ್ದ ಬುದ್ಧಿಜೀವಿಗಳು ಮತ್ತು ಪತ್ರಕರ್ತರನ್ನು ಒಂದೆಡೆ ಸೇರಿಸುವ ವಾರ್ಷಿಕ ಸಭೆ ಇದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+