ಎಲ್ಲ ಸಮುದಾಯಕ್ಕೆ ಅನುಕೂಲವಾಗುವ ಬಜೆಟ್ : ಕವಟಗಿಮಠ
ನರೇಂದ್ರ ಮೋದಿಜಿಯವರ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಷ್ಟ್ರದ ಜನರಿಗೆ ಅದರಲ್ಲೂ ವಿಶೇಷವಾಗಿ ಮಧ್ಯಮವರ್ಗದ ಜನರು ಕಾರ್ಮಿಕರು, ರೈತರು, ಹಿರಿಯ ನಾಗರೀಕರು, ಅಂಗನವಾಡಿ ಕಾರ್ಯಕರ್ತರು ಹೀಗೆ ಹತ್ತು ಹಲವಾರು ಸಮುದಾಯಕ್ಕೆ ಅನುಕೂಲವಾಗುವಂತಹ, ಅದ್ಬುತವಾದಂತಹ ಆಯವ್ಯಯವನ್ನು ಮಂಡಿಸಿದ್ದಾರೆ. ಒಟ್ಟಾರೆ ಸರ್ವೇಜನಃ ಸುಖಿನೋಭವಂತು ಎಂಬ ಪಂಕ್ತಿ ಈ ಸಂದರ್ಭದಲ್ಲಿ ನೆನೆಸಿಕೊಳ್ಳಬಹುದು.
ಮಧ್ಯಂತರ ಬಜೆಟ್ 2019: ಆದಾಯ ತೆರಿಗೆ ಮಿತಿಯಲ್ಲಿ ಏರಿಕೆ
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮಂಡಿಸಿದ ಆಯವ್ಯಯಗಳ ಇತಿಹಾಸದಲ್ಲಿ ಇದೊಂದು ದಾಖಲೆಯ ಆಯವ್ಯಯವಾಗಿದೆ. ಆದಾಯ ತೆರಿಗೆಯ ಮಿತಿಯನ್ನು 2.5 ಲಕ್ಷದಿಂದ 5 ಲಕ್ಷಕ್ಕೆ ಏರಿಸಲಾಗಿದೆ. ಸಣ್ಣ ರೈತರ ಖಾತೆಗೆ ನೇರವಾಗಿ 6,000 ರೂಪಾಯಿ ಜಮೇ ಮಾಡುವ ಈ ಆಯವ್ಯಯ ದೇಶದಲ್ಲಿ 87% ರೈತರಿಗೆ ಲಾಭವಾಗುವುದು.
ಉದ್ಯೋಗಿಗಳಿಗೆ ಗಿಫ್ಟ್: ತೆರಿಗೆ ರಹಿತ ಗ್ರಾಚ್ಯುಟಿ ಮಿತಿ ಏರಿಕೆ!
ಅಂಗನವಾಡಿ ಕಾರ್ಯಕರ್ತರ ಸಂಬಳ ಹೆಚ್ಚಳ. 10 ಕೋಟಿ ಕಾರ್ಮಿಕರಿಗೆ 3,000 ಪಿಂಚಣಿ. 8 ಕೋಟಿ ಗ್ರಾಮೀಣ ಮಹಿಳೆಯರಿಗೆ ಉಚಿತ ಗ್ಯಾಸ್ ವಿತರಣೆ. ಆಹಾರ ಪದಾರ್ಥಗಳ ಉತ್ಪಾದನೆಯ ಸಹಾಯಧನ ದ್ವಿಗುಣ. 36 ಗೃಹ ಉಪಯೋಗಿ ವಸ್ತುಗಳ ಮೇಲಿನ ಜಿ.ಎಸ್.ಟಿ ಇಳಿಕೆ. ಮಧ್ಯಮ ವರ್ಗದ ಜನರಿಗೆ ಈ ಆಯವ್ಯಯದಿಂದ ಫಲ. ಕೃಷಿ ಸಾಲದ ಮೇಲೆ ಶೇ.2ರಷ್ಟು ಬಡ್ಡಿ ವಿನಾಯಿತಿ. ಗೃಹ ಸಾಲದ ಮೇಲೆ ರೂ.2 ಲಕ್ಷದವರೆಗೆ ಬಡ್ಡಿ ರಹಿತ ಸಾಲ.

ವಿರೋಧ ಪಕ್ಷದವರು ಸರ್ಕಾರದ ಅವಧಿ ಮುಗಿಯುವ ಹಂತದಲ್ಲಿ ಇಷ್ಟೊಂದು ವಿನಾಯಿತಿ ಬಜೆಟ್ ಮಂಡಿಸಲು ಅವಕಾಶವಿಲ್ಲವೆಂದು ಹೇಳಿದ್ದಾರೆ. ಆದರೆ ಪ್ರಾಯೋಗಿಕವಾಗಿ ಯಾವುದೇ ಸರ್ಕಾರಕ್ಕೂ ಆಯವ್ಯಯ ಮಂಡಿಸಲು ಸಂಪೂರ್ಣ ಅಧಿಕಾರವಿರುತ್ತದೆ. ಮಧ್ಯಾವಧಿ ಬಜೆಟ್ ಅಥವಾ ಪೂರ್ಣಾವಧಿ ಬಜೆಟ್ ಎಂಬ ಯಾವುದೇ ವಿಧಗಳಿಲ್ಲ. ಬಜೆಟ್ ಎಂಬುದು ಒಂದೇ ಒಂದು. ಒಟ್ಟಾರೆ ಹಂಗಾಮಿ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಮಂಡಿಸಿರುವ ಈ ಬಜೆಟ್ ಪ್ರಗತಿಪರ, ಜನಾನುರಾಗಿ ಎಲ್ಲ ಸಮುದಾಯಕ್ಕೂ ಅನುಕೂಲವಾಗುವ ಆಯವ್ಯಯವಾಗಿದೆ.
ಮಹಾಂತೇಶ ಮ ಕವಟಗಿಮಠ
ವಿರೋಧ ಪಕ್ಷದ ಮುಖ್ಯ ಸಚೇತಕರು,
ಕರ್ನಾಟಕ ವಿಧಾನ ಪರಿಷತ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications