ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭದ್ರಾವತಿಯಲ್ಲಿ ಕನ್ನಡತನ ನಾಶಗೊಳಿಸುವ ವ್ಯವಸ್ಥಿತ ದಾಳಿ: ಕರವೇ

|
Google Oneindia Kannada News

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸ್ಥಾಪನೆಯಾಗಲಿರುವ ಕ್ಷಿಪ್ರ ಕಾರ್ಯ ಪಡೆ(Rapid Action Force)ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಹಿಂದಿ ಹೇರಿಕೆಯಾಗಿದ್ದು, ಕನ್ನಡತನ ನಾಶಗೊಳಿಸುವ ವ್ಯವಸ್ಥಿತ ದಾಳಿ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ. ಎ ನಾರಾಯಣ ಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿದ್ದು, ಹಿಂದಿ ಗುಲಾಮ ಗಿರಿ ಬೇಡ ಎಂದು ಇಂದು ಟ್ವೀಟ್ ಅಭಿಯಾನ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.

ನಾರಾಯಣ ಗೌಡ ಅವರ ಫೇಸ್ಬುಕ್ ಯಥಾವತ್ತಾಗಿ ಇಲ್ಲಿ ನೀಡಲಾಗಿದೆ:
ಶಿವಮೊಗ್ಗದಲ್ಲಿ ನಡೆದ ಸಿಆರ್ ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದನ್ನು ಗಮನಿಸಿದೆ. ಇದು ಬೇರೇನೂ ಅಲ್ಲ, ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ.

ಉಕ್ಕಿನ ನಗರಿ ಭದ್ರಾವತಿಯಲ್ಲಿ RAF ಘಟಕಕ್ಕೆ ಶಂಕುಸ್ಥಾಪನೆ ಮಾಡಿದ ಅಮಿತ್ ಶಾಉಕ್ಕಿನ ನಗರಿ ಭದ್ರಾವತಿಯಲ್ಲಿ RAF ಘಟಕಕ್ಕೆ ಶಂಕುಸ್ಥಾಪನೆ ಮಾಡಿದ ಅಮಿತ್ ಶಾ

ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ. ನಾವು ಸಹಸ್ರಾರು ವರ್ಷಗಳಿಂದ ಕನ್ನಡಿಗರು, ಇಂಥ ಹುನ್ನಾರಗಳಿಗೆ ತಲೆಬಾಗುವುದಿಲ್ಲ.

Karave Objects Hindi Imposition during Amit Shah visit and RAF centre event Bhadravati

ಕಾರ್ಯಕ್ರಮದಲ್ಲಿ‌ ಮುಖ್ಯಮಂತ್ರಿಗಳಾದಿಯಾಗಿ ಹಲವಾರು ಸಚಿವ ಸಂಪುಟದ ಸದಸ್ಯರು ಭಾಗವಹಿಸಿದ್ದರು. ಯಾರೊಬ್ಬರಿಗೂ ಸಹ ಈ ಕನ್ನಡವಿಲ್ಲದ ಹಿಂದೀಮಯ‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಮುಜುಗರ, ನಾಚಿಕೆ ಆಗಲಿಲ್ಲವೇ? ಇವರೆಲ್ಲರೂ ತಮ್ಮ ಕನ್ನಡತನವನ್ನು ದಿಲ್ಲಿ ಹಿಂದೀವಾಲಾಗಳಿಗೆ ಅಡವಿಟ್ಟಿದ್ದಾರೆಯೇ?

ಹಿಂದೀ ಸಾಮ್ರಾಜ್ಯಶಾಹಿ ಹಿಂದೆಂದಿಗಿಂತಲೂ‌ ಇಂದು ಆಕ್ರಮಣಕಾರಿಯಾಗಿದೆ. ಕನ್ನಡಿಗರೇ, ಏನು ಮಾಡ್ತೀರೋ‌ ಮಾಡಿ ನೋಡೋಣ ಎಂದು ಸವಾಲು ಹಾಕುತ್ತಿದೆ. ಈ‌ ಸವಾಲನ್ನು ನಾವು ಎದುರಿಸುತ್ತೇವೆ. ಕನ್ನಡ ನೆಲವನ್ನು, ಕನ್ನಡಿಗರ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ. ಈ ಮರಾಮೋಸದ ಸಮರದಲ್ಲಿ ಗೆದ್ದೇಗೆಲ್ಲುತ್ತೇವೆ.

ಕನ್ನಡಿಗರು ಜಾತಿ, ಮತ, ಧರ್ಮ, ಪಂಥ, ಪಕ್ಷಗಳನ್ನು ಬದಿಗಿಟ್ಟು ಒಂದಾಗಬೇಕಾದ ಕಾಲವಿದು. ಈಗ ನಾವು ಮೈಮರೆತು ಕುಳಿತರೆ ನಮಗೆ ಉಳಿಗಾಲವಿಲ್ಲ. ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ.

English summary
Karnataka Rakshana Vedike Objects Hindi Imposition during Amit Shah visit and Bhumi Pooja of RAF centre event at Bhadravat, Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X