ಐಸಿಸಿ ಶ್ರೇಯಾಂಕ ಪಟ್ಟಿಗೆ ರಹಾನೆ, ಅಶ್ವಿನ್ ನಂ.1 ಆಲ್ ರೌಂಡರ್

Posted By:
Subscribe to Oneindia Kannada

ದುಬೈ, ಆಗಸ್ಟ್ 16: ಟೀಂ ಇಂಡಿಯಾದ ಟೆಸ್ಟ್ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಅಜಿಂಕ್ಯ ರಹಾನೆ ಅವರು ಮೊಟ್ಟ ಮೊದಲ ಬಾರಿಗೆ ಐಸಿಸಿ ಟಾಪ್ 10 ಶ್ರೇಯಾಂಕ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ ಮೂರು ಸ್ಥಾನ ಕುಸಿದಿದ್ದರೆ, ರವಿಚಂದ್ರನ್ ಅಶ್ವಿನ್ ಅವರು ಆಲ್ ರೌಂಡರ್ ಪಟ್ಟಿಯಲ್ಲಿ ನಂ. 1 ಸ್ಥಾನಕ್ಕೇರಿದ್ದಾರೆ.

ಅಜಿಂಕ್ಯಾ ರಹಾನೆ ಅವರು 11ನೇ ಸ್ಥಾನದಲ್ಲಿದ್ದ ರಹಾನೆ ಅವರು ಮೂರು ಸ್ಥಾನ ಬಡ್ತಿ ಪಡೆದು 8ನೇ ಸ್ಥಾನಕ್ಕೇರಿದ್ದಾರೆ. ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಅವರು ಮೂರು ಸ್ಥಾನ ಕುಸಿದು 13 ರಿಂದ 16ನೇ ಸ್ಥಾನಕ್ಕಿಳಿದಿದ್ದಾರೆ. ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಅವರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. [ಕೋಚ್ ಕುಂಬ್ಳೆಗೆ ಮೊದಲ ಟೆಸ್ಟ್ ಸರಣಿ ಗೆದ್ದ ಸಂಭ್ರಮ]

Ajinkya Rahane enters ICC top-10, R Ashwin on top of all-rounders' list

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬಿಡುಗಡೆ ಮಾಡಿರುವ ಹೊಸ ಪಟ್ಟಿಯಲ್ಲಿ ಬೌಲಿಂಗ್ ವಿಭಾಗದಲ್ಲಿ ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಕ್ರಮವಾಗಿ 2 ಮತ್ತು 6 ನೇ ಸ್ಥಾನ ಪಡೆದಿದ್ದಾರೆ. ಆಲ್​ರೌಂಡ್ ವಿಭಾಗದಲ್ಲಿ ಭಾರತದ ಆರ್. ಅಶ್ವಿನ್ ಅಗ್ರಸ್ಥಾನದಲ್ಲಿದ್ದಾರೆ.

ಟಾಪ್ 5 ಆಲ್ ರೌಂಡರ್

1. ಆರ್ ಅಶ್ವಿನ್ (ಭಾರತ)
2. ಶಾಕಿಬ್ ಅಲ್ ಹಸನ್ (ಬಾಂಗ್ಲಾದೇಶ)
3. ಮೋಯಿನ್ ಅಲಿ (ಇಂಗ್ಲೆಂಡ್)
4. ಫಿಲ್ಯಾಂಡರ್ (ದಕ್ಷಿಣ ಆಫ್ರಿಕಾ)
5. ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Indian batsman Ajinkya Rahane jumped three places to enter the top-10 in batsman's list while Ravichandran Ashwin maintained his pole position among all-rounders in the latest Test rankings released by the International Cricket Council (ICC).
Please Wait while comments are loading...