ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ರಹಾನೆ ಔಟ್, ಮನೀಶ್ ಇನ್

Posted By:
Subscribe to Oneindia Kannada

ಮುಂಬೈ, ಡಿಸೆಂಬರ್ 07: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಅಜಿಂಕ್ಯ ರಹಾನೆ ಅವರು ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಡಿಸೆಂಬರ್ 07ರಂದು ಪ್ರಕಟಿಸಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರದಂದು ಅಭ್ಯಾಸನಿರತರಾಗಿದ್ದ ಅಜಿಂಕ್ಯ ರಹಾನೆ ಅವರು ತಮ್ಮ ತೋರುಬೆರಳಿಗೆ ತೀವ್ರವಾಗಿ ಗಾಯ ಮಾಡಿಕೊಂಡಿದ್ದಾರೆ.

Ajinkya Rahane ruled out of England Test series; Manish Pandey called up

ನಾಲ್ಕನೇ ಟೆಸ್ಟ್ ಪಂದ್ಯ ಡಿಸೆಂಬರ್ 9ರಂದು ಆರಂಭವಾಗಲಿದೆ. ರಹಾನೆ ಬದಲಿಗೆ ಕರ್ನಾಟಕದ ಮನೀಶ್ ಪಾಂಡೆ ಅವರಿಗೆ ಅವಕಾಶ ನೀಡಲಾಗಿದೆ.
27 ವರ್ಷ ವಯಸ್ಸಿನ ಮನೀಶ್ ಪಾಂಡೆ ಅವರು ಭಾರತ ಪರ 12 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, ಇನ್ನೂ ಟೆಸ್ಟ್ ಪಂದ್ಯವಾಡಬೇಕಿದೆ. ಮುಂಬೈ ಟೆಸ್ಟ್ ಪಂದ್ಯದಲ್ಲಿ ಆಡುವ XI ಗೆ ಆಯ್ಕೆಯಾದರೆ ಅದು ಅವರ ಚೊಚ್ಚಲ ಪಂದ್ಯವಾಗಲಿದೆ.

28 ವರ್ಷ ವಯಸ್ಸಿನ ಬಲಗೈ ಬ್ಯಾಟ್ಸ್ ಮನ್ ರಹಾನೆ ಅವರು ಟೆಸ್ಟ್ ಸರ್ಣಿಯಲ್ಲಿ 13,1,23, 26 ಹಾಗೂ 0 ರನ್ ಗಳಿಸಿದ್ದು ಕಳಫೆ ಫಾರ್ಮ್ ನಲ್ಲಿದ್ದಾರೆ. ಆದರೆ, ಕೊಹ್ಲಿ ಅವರು ರಹಾನೆ ಬಗ್ಗೆ ಆತ್ಮವಿಶ್ವಾಸ ವ್ಯಕ್ತಪಡಿಸಿ ತಂಡದಲ್ಲಿ ಉಳಿಸಿಕೊಂಡಿದ್ದಾರೆ.

ಮೊಹಮ್ಮದ್ ಶಮಿ ಅವರು ಗಾಯಗೊಂಡಿರುವುದರಿಂದ ಶಾರ್ದೂಲ್ ಠಾಕೂರ್ ಅವರನ್ನು ಕರೆಸಿಕೊಳ್ಳಲಾಗಿದೆ. ಆದರೆ, ಅವರು ಬದಲಿ ಆಟಗಾರರಾಗಿ ಆಯ್ಕೆಯಾಗಿಲ್ಲ.

ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಪಡೆದುಕೊಂಡಿದೆ. (ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
India's middle order batsman Ajinkya Rahane has been ruled out of the remainder of the Test series against England, the Board of Control for Cricket in India (BCCI) announced today (December 7).
Please Wait while comments are loading...