ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ಕೆಳಗಿಳಿದ ಅನಿಲ್ ಕುಂಬ್ಳೆ

Posted By:
Subscribe to Oneindia Kannada

ನವದೆಹಲಿ, ಜೂನ್ 20 : ಅನಿಲ್ ಕುಂಬ್ಳೆ ಅವರು ಸ್ವಯಂ ಪ್ರೇರಿತವಾಗಿ ಟೀಂ ಇಂಡಿಯಾದ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುಂಚಿತವಾಗಿ ಕೋಚ್ ಅನಿಲ್ ಕುಂಬ್ಳೆ ಹಾಗೂ ನಾಯಕ ವಿರಾಟ್ ಕೊಹ್ಲಿ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿತ್ತು. ಈ ಹಿನ್ನೆಲೆಯಲ್ಲಿ ವಿಂಡೀಸ್ ಪ್ರವಾಸದ ಬಳಿಕ ಕೋಚ್ ಸ್ಥಾನದಿಂದ ಕೆಳಗಿಳಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತ ಕುಂಬ್ಳೆ ಮಂಗಳವಾರ ಸ್ವಯಂ ಪ್ರೇರಿತರಾಗಿ ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ಕೆಳಗಿಳಿದಿದ್ದಾರೆ.

Anil Kumble steps down as coach of Indian cricket team

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಹೀನಾಯ ಸೋಲಿನ ಬಳಿಕ ಇದೀಗ ಅನಿಲ್ ಕುಂಬ್ಳೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಣಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆಯಾಗಿದ್ದ ಅನಿಲ್ ಕುಂಬ್ಳೆ ಸದ್ಯ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳದಿರಲು ತೀರ್ಮಾನಿಸಿದ್ದಾರೆ.

ಅನಿಲ್ ಕುಂಬ್ಳೆ ಅವರು ಆಟಗಾರರೊಂದಿಗೆ ಉದ್ಧಟತನದಿಂದ ವರ್ತಿಸುತ್ತಾರೆ. ಅಗೌರವದಿಂದ ನಡೆದುಕೊಳ್ಳುತ್ತಾರೆ ಎಂದು ಟೀಂ ಇಂಡಿಯಾ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಬಿಸಿಸಿಐ ನೂತನ ಕೋಚ್ ಹುದ್ದೆಗಾಗಿ ಅರ್ಜಿ ಆಹ್ವಾನಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Anil Kumble steps down as coach of Indian cricket team.
Please Wait while comments are loading...