#46ನೇ ಹುಟ್ಟುಹಬ್ಬ ಸಂಭ್ರಮದಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ!

Written By: Ramesh
Subscribe to Oneindia Kannada

ನವದೆಹಲಿ, ಅಕ್ಟೋಬರ್. 17 : ಟೀಂ ಇಂಡಿಯಾದ ಮಾಜಿ ಬೌಲರ್ ಹಾಗೂ ಭಾರತ ತಂಡದ ಕೋಚ್ ಕನ್ನಡಿಗ ಅನಿಲ್ ಕುಂಬ್ಳೆ ಅವರಿಗೆ ಸೋಮವಾರ(ಅ.17) 46ನೇ ಹುಟ್ಟುಹಬ್ಬದ ಸಂಭ್ರಮ.

ಅಕ್ಟೋಬರ್ 17, 1970 ರಂದು ಜನಿಸಿದ ಕುಂಬ್ಳೆ, ಎಪ್ರಿಲ್ 25, 1990ರಂದು ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಕುಂಬ್ಳೆ ಪಾದಾರ್ಪಣೆ ಮಾಡಿದರು. ಕ್ರಿಕೆಟ್ ಪಾದಾರ್ಪಣೆ ಮಾಡಿದ ಅದೇ ವರ್ಷ ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಕಾಲಿಟ್ಟರು. ಸುಮಾರು 18 ವರ್ಷಗಳ ತಮ್ಮ ಕ್ರಿಕೆಟ್ ಜೀವನದಲ್ಲಿ ಟೀಂ ಇಂಡಿಯಾಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. [ಟೀಂ ಇಂಡಿಯಾ ಕೋಚ್ ಆಗಿ ಅನಿಲ್ ಕುಂಬ್ಳೆ ಆಯ್ಕೆ]

Kumble

ಕರ್ನಾಟಕದ ಅನಿಲ್ ಕುಂಬ್ಳೆ ಅವರು ಭಾರತ ಪರ ಲೆಗ್ ಸ್ಪಿನ್ನರ್ ಆಗಿ ಟೆಸ್ಟ್ ಕ್ರಿಕೆಟ್ ಹಾಗೂ ಏಕದಿನ ಕ್ರಿಕೆಟ್ ಎರಡರಲ್ಲೂ ಅತ್ಯಧಿಕ ವಿಕೆಟ್ ಪಡೆದಿರುವ ಬೌಲರ್ ಆಗಿದ್ದಾರೆ.

ಅನಿಲ್ ಕುಂಬ್ಳೆ ಅವರು ತಮ್ಮ 44ನೇ ಹುಟ್ಟುಹಬ್ಬದ ದಿನದಂದು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಲೋಕಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿರುವುದು ವಿಶೇಷ.

ಫೆಬ್ರವರಿ 7, 1999ರಂದು ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 26.3-9-74-10 ಅದ್ಭುತ ಸ್ಪೆಲ್ ಮಾಡಿ ಭಾರತಕ್ಕೆ 212ರನ್ ಗಳ ಬೃಹತ್ ಜಯ ತಂದಿತ್ತಿದ್ದರು.ಈ ನೆನಪಿನಲ್ಲಿ ತಮ್ಮ ಟ್ವಿಟ್ಟರ್ ಐಡಿಯನ್ನು @anilkumble1074 ಎಂದು ಆಯ್ಕೆ ಮಾಡಿಕೊಂಡಿದ್ದರು.

ಇನ್ನು ಇವರ 46ನೇ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಕ್ರಿಕೆಟಿಗರು,ಗಣ್ಯರು ಸೇರಿದಂತೆ ಹಲವರು ಟ್ವಿಟ್ಟರ್ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Legendary India bowler and current Head Coach of the Indian cricket team, Anil Kumble, is celebrating his 46th birthday.
Please Wait while comments are loading...