ಅನುರಾಗ್ ಠಾಕೂರ್ ಬಿಸಿಸಿಐ ಅಧ್ಯಕ್ಷರಾಗಿ ಅವಿರೋಧ ಆಯ್ಕೆ!

Posted By:
Subscribe to Oneindia Kannada

ಮುಂಬೈ, ಮೇ 22: ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಅನುರಾಗ್ ಠಾಕೂರ್ ಅವರು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿ ಭಾನುವಾರ ಅವಿರೋಧ ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಹುದ್ದೆಗೇರಿದ ಅತ್ಯಂತ ಯುವ ಅಧ್ಯಕ್ಷ ಎನಿಸಿಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನವನ್ನು ತೊರೆದ ಶಶಾಂಕ್ ಮನೋಹರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನ ಚೇರ್ಮನ್ ಆಗಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು. ಶಶಾಂಕ್ ಮನೋಹರ್ ಅವರು ಮೇ 10 ರಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನವನ್ನು ತೊರೆದಿದ್ದರು.[ಬಿಸಿಸಿಐ ತೊರೆದ ಶಶಾಂಕ್ ಮನೋಹರ್ ಈಗ ಐಸಿಸಿ ಚೇರ್ಮನ್]

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕಾಗಿ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಜಯ್ ಶಿರ್ಕೆ, ಆಂಧ್ರಪ್ರದೇಶ ಕ್ರಿಕೆಟ್ ಸಂಸ್ಥೆಯ ಜಿ.ಗಂಗರಾಜು ಹಾಗೂ ಐಪಿಎಲ್ ಚೇರ್ಮನ್ ರಾಜೀವ್ ಶುಕ್ಲಾ ಈ ಮೂವರು ಪ್ರಬಲ ಪೈಪೋಟಿ ನಡೆಸಿದ್ದರು, ಇದರಿಂದ ತೀವ್ರ ಕುತೂಹಲ ಕೆರಳಿಸಿತ್ತು.

Anurag Thakur becomes youngest BCCI President

ಬೆಂಗಾಲ ಕ್ರಿಕೆಟ್ ಅಸೋಸಿಯೇಷನ್ (ಸಿಎಬಿ) ನ ಮುಖ್ಯಸ್ಥ ಸೌರವ್ ಗಂಗೂಲಿ ಅವರಿಗೂ ಆಫರ್ ಬಂದಿತ್ತು. ಮೇ 14 ರಂದು ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ವಿಳಂಬವಾಗಿತ್ತು.

ಮುಂಬೈನಲ್ಲಿ ಮೇ 222ರಂದು ನಡೆದ ಬಿಸಿಸಿಐ ವಿಶೇಷ ಸಭೆಯಲ್ಲಿ 41 ವರ್ಷ ವಯಸ್ಸಿನ ಅನುರಾಗ್ ಠಾಕೂರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಠಾಕೂರ್ ಅವರ ಆಯ್ಕೆ ಬಳಿಕ ಬಿಸಿಸಿಐ ಕಾರ್ಯದರ್ಶಿ ಸ್ಥಾನ ಹಾಗೂ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ನ ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕಿದೆ. ಉದ್ಯಮಿ ಶಿರ್ಕೆ ಅವರು ಈ ಸ್ಥಾನವನ್ನು ತುಂಬುವ ಸಾಧ್ಯತೆ ಹೆಚ್ಚಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Anurag Thakur unanimously elected BCCI President in the Board's Special General Meeting (SGM) here today (May 22), replacing Shashank Manohar who stepped down from the position to take up the ICC chief's job.
Please Wait while comments are loading...