ವಿಶ್ವ ಟಿ20 ಸಮರಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ, ಸ್ಮಿತ್ ಕ್ಯಾಪ್ಟನ್

Posted By:
Subscribe to Oneindia Kannada

ಮೆಲ್ಬೋರ್ನ್, ಫೆ. 09: ಪ್ರವಾಸಿ ಭಾರತ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದಿಂದ ಹೀನಾಯ ಸೋಲು ಕಂಡ ಆಸ್ಟ್ರೇಲಿಯಾ ಈಗ ವಿಶ್ವ ಟಿ20 ಸಮರಕ್ಕೆ ಸಜ್ಜಾಗುತ್ತಿದೆ. ಐಸಿಸಿ ವಿಶ್ವ ಟಿ20 ಟೂರ್ನಿಗೆ ಆಸ್ಟ್ರೇಲಿಯಾ ತಂಡವನ್ನು ಮಂಗಳವಾರ ಪ್ರಕಟಿಸಿದ್ದು, ಸ್ಟೀವ್ ಸ್ಮಿತ್ ನಾಯಕರಾಗಿದ್ದಾರೆ.

ವಿಶ್ವ ಟಿ20 ಸಂಪೂರ್ಣ ವೇಳಾಪಟ್ಟಿ

ಭಾರತ ವಿರುದ್ಧ ಸರಣಿಯಲ್ಲಿ ಆಡಿದ್ದ ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಅವರನ್ನು ಆಯ್ಕೆದಾರರು ಕಡೆಗಣಿಸಿದ್ದಾರೆ. ಸ್ಟೀವ್ ಸ್ಮಿತ್ ಅವರು ಈಗ ಟೆಸ್ಟ್, ಏಕದಿನ ಕ್ರಿಕೆಟ್ ಹಾಗೂ ಟಿ20 ಮೂರು ಮಾದರಿಯಲ್ಲೂ ನಾಯಕರಾಗಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. [ಆಸೀಸ್ ತಂಡಕ್ಕೆ ಭಾರತದ ಮಾಜಿ ಕ್ರಿಕೆಟರ್ ಸಲಹೆಗಾರ]

Steve Smith

ಐಸಿಸಿ ವಿಶ್ವ ಟಿ20 ಟೂರ್ನಿ ಮಾರ್ಚ್ 8 ರಿಂದ ಏಪ್ರಿಲ್ 3 ರ ತನಕ ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಇದುವರೆವಿಗೂ ವಿಶ್ವ ಟಿ 20 ಕಪ್ ಎತ್ತಿಲ್ಲ.

ಬಿಗ್ ಬಾಷ್ ಲೀಗ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಉಸ್ಮಾನ್ ಖವಾಜ ಅವರು ಸ್ಥಾನ ಪಡೆದಿದ್ದಾರೆ. ಎಡಗೈ ಸ್ಪಿನ್ನರ್ ಆಸ್ಟನ್ ಅಗರ್ ಹಾಗೂ ಲೆಗ್ ಸ್ಪಿನ್ನರ್ ಆಡಂ ಝಂಪಾ ಸ್ಪಿನ್ ದಾಳಿ ಮುನ್ನಡೆಸಲಿದ್ದಾರೆ. ನಾಥನ್ ಲಿಯಾನ್ ಅವರನ್ನು ಕೈಬಿಡಲಾಗಿದೆ.

ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಹಾಗೂ ಅರ್ಹತಾ ತಂಡ ವಿರುವ ಗುಂಪಿನಲ್ಲಿ ಆಸ್ಟ್ರೇಲಿಯಾ ತಂಡವಿದೆ. ಆಸ್ಟ್ರೇಲಿಯಾ ತನ್ನ ಮೊದಲ ಪಂದ್ಯವನ್ನು ಮಾರ್ಚ್ 18 ರಂದು ಧರ್ಮಶಾಲದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ.

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್ (ಉಪ ನಾಯಕ), ಆಸ್ಟರ್ ಅಗರ್, ನಾಥನ್ ಕೌಲ್ಟರ್ ನೈಲ್, ಜೇಮ್ಸ್ ಫಾಲ್ಕ್ನರ್, ಅರೋನ್ ಫಿಂಚ್, ಜಾನ್ ಹೇಸ್ಟಿಂಗ್ಸ್, ಜೋಶ್ ಹೇಜಲ್ ವುಡ್, ಉಸ್ಮಾನ್ ಖವಾಜ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ ವೆಲ್, ಪೀಟರ್ಲ್ ನೆವಿಲ್ (ವಿಕೆಟ್ ಕೀಪರ್), ಆಂಡ್ರ್ಯೂ ಟೈ, ಶೇನ್ ವಾಟ್ಸನ್, ಆಡಂ ಝಂಪಾ. (ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
After a 0-3 whitewash against India, Australia have made major changes to their side for the next month's ICC World Twenty20.
Please Wait while comments are loading...