ಮೂರು ಟೆಸ್ಟ್ ಪಂದ್ಯಗಳಿಗೆ ತಂಡ ಪ್ರಕಟ, ಗಂಭೀರ್ ಔಟ್

Posted By:
Subscribe to Oneindia Kannada

ಮುಂಬೈ, ನವೆಂಬರ್ 22: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಇನ್ನುಳಿದ ಮೂರು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಆಯ್ಕೆ ಮಾಡಿದೆ. ಕಳಪೆ ಫಾರ್ಮ್ ನಲ್ಲಿರುವ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಎಂಎಸ್ ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಿದ್ದ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡಿಲ್ಲ. ಗಾಯಾಳುವಾಗಿದ್ದ ವೇಗಿ ಭುವನೇಶ್ವರ್ ಕುಮಾರ್ ಅವರು ಗುಣಮುಖರಾಗಿ ತಂಡವನ್ನು ಸೇರಿದ್ದಾರೆ.[ಭಾರತಕ್ಕೆ ಇಂಗ್ಲೆಂಡ್ ಪ್ರವಾಸ, ಬೆಂಗ್ಳೂರಲ್ಲಿ 1 ಟಿ20 ಪಂದ್ಯ]

16-member squad for remaining 3 Test matches against England announced

ಮೂರನೇ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ನವೆಂಬರ್ 26ರಂದು ಆರಂಭವಾಗಲಿದೆ.ಗಂಭೀರ್ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಎರಡನೇ ಟೆಸ್ಟ್ ಪಂದ್ಯಕ್ಕೆ ಗಂಭೀರ್ ಬದಲಿಗೆ ಕರ್ನಾಟಕದ ಕೆಎಲ್ ರಾಹುಲ್ ಆಯ್ಕೆಯಾಗಿದ್ದರು. [ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ]

ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರಾ, ಕರುಣ್ ನಾಯರ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜ, ಜಯಂತ್ ಯಾದವ್, ಅಮಿತ್ ಮಿಶ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ (ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Board of Control for Cricket in India (BCCI) on Tuesday (Nov 22) announced the 16-member India Test squad for remaining three Tests in the 5-match home series against England.
Please Wait while comments are loading...