ಭಾರತ vs ಪಾಕಿಸ್ತಾನ ಕ್ರಿಕೆಟ್ ಕದನ ನೋಡಲು ತಯಾರಾಗಿ!

Posted By:
Subscribe to Oneindia Kannada

ಲಂಡನ್, ಜೂನ್ 01: ಚಾಂಪಿಯನ್ಸ್ ಟ್ರೋಫಿ 2017ರ ಕ್ರಿಕೆಟ್ ಟೂರ್ನಮೆಂಟ್ ನ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ಮಧ್ಯಾಹ್ನ ಪ್ರಕಟಿಸಿದೆ. ಭಾರತ ಹಾಗೂ ಪಾಕಿಸ್ತಾನ ಒಂದೇ ಗುಂಪಿನಲ್ಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುವ ಪಂದ್ಯ ಜೂನ್ 4, 2017ರಂದು ನಡೆಯಲಿದೆ.

ಎ ಗುಂಪಿನಲ್ಲಿ ಆಸ್ಟ್ರೇಲಿಯಾ, ಬಾಂಗ್ಲದೇಶ, ಇಂಗ್ಲೆಂಡ್, ನ್ಯೂಜಿಲೆಂಡ್ ಇದ್ದರೆ, ಬಿ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ತಂಡಗಳಿವೆ.ಆರಂಭಿಕ ಪಂದ್ಯ ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ನಡುವೆ ದಿ ಓವಲ್ ನಲ್ಲಿ ಜೂನ್ 1, 2017ರಂದು ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಜೂನ್ 4(ಭಾನುವಾರ) ರಂದು ಎಜ್ಬಾಸ್ಟನ್ ನಿಗದಿಯಾಗಿದೆ.

Champions Trophy 2017: India and Pakistan in same group, face off on June 4

ವಿಶ್ವಕಪ್ 2015 ಹಾಗೂ 2016ರ ವಿಶ್ವಟಿ20 ಟೂರ್ನಮೆಂಟ್ ಗಳಲ್ಲೂ ಭಾರತ ಹಾಗೂ ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಪರ್ಧಿಸಿದ್ದವು. ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಟೂರ್ನಿ ಜೂನ್ 1 ರಿಂದ 18ರ ತನಕ ವಿಶ್ವದ 8 ತಂಡಗಳ ನಡುವೆ ನಡೆಯಲಿದೆ. ಈ ಬಾರಿ ವೆಸ್ಟ್ ಇಂಡೀಸ್ ತಂಡ ಆಡುತ್ತಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
India and Pakistan are in the same group for the ICC Champions Trophy 2017 One Day International tournament to be held in England in June.
Please Wait while comments are loading...