ಬಾಂಗ್ಲಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ

Posted By:
Subscribe to Oneindia Kannada

ಮುಂಬೈ, ಮೇ.20: ಬಾಂಗ್ಲಾದೇಶ ಪ್ರವಾಸಕ್ಕೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ವಿರಾಟ್ ಕೊಹ್ಲಿ ಅವರು ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಏಕದಿನ ಕ್ರಿಕೆಟ್ ಪಂದ್ಯಕ್ಕೂ ತಂಡವನ್ನು ಘೋಷಿಸಲಾಗಿದ್ದು, ಯಾವುದೇ ಅಚ್ಚರಿಯ ಆಯ್ಕೆ ಕಂಡು ಬಂದಿಲ್ಲ.

ಸಂದೀಪ್ ಪಾಟೀಲ್ ನೇತೃತ್ವದ ಆಯ್ಕೆ ಸಮಿತಿ ಟೆಸ್ಟ್ ತಂಡಕ್ಕೆ ಹರ್ಭಜನ್ ಸಿಂಗ್ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. 101 ಟೆಸ್ಟ್ ಪಂದ್ಯವಾಡಿದ ಅನುಭವ ಹೊಂದಿರುವ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಅವರು ಕಳೆದ 2 ವರ್ಷಗಳಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನಾಡಿಲ್ಲ.

34 ವರ್ಷ ವಯಸ್ಸಿನ ಹರ್ಭಜನ್ ಸಿಂಗ್ ಅವರು 2013ರ ಮಾರ್ಚ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೈದರಾಬಾದಿನಲ್ಲಿ ಟೆಸ್ಟ್ ಪಂದ್ಯವಾಡಿದ್ದರು.

Harbhajan Singh recalled to India Test squad, ODI team also announced

ಜೂ.10ರಿಂದ ಬಾಂಗ್ಲಾದೇಶ ಪ್ರವಾಸ ಆರಂಭಗೊಳ್ಳಲಿದ್ದು 1 ಟೆಸ್ಟ್ ಪಂದ್ಯ ಹಾಗೂ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಭಾರತ ಹಾಗೂ ಬಾಂಗ್ಲಾದೇಶ ಆಡಲಿವೆ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಪ್ರಕಟಿಸಿದರು. [ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ]

ಟೆಸ್ಟ್ ತಂಡ : ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಅಜಿಂಕ್ಯ ರಹಾನೆ, ರೋಹಿತ್ ಶರ್ಮ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ಹರ್ಭಜನ್ ಸಿಂಗ್, ಕರಣ್ ಶರ್ಮ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ವರುಣ್ ಅರೋನ್, ಇಶಾಂತ್ ಶರ್ಮ, ಮುರಳಿ ವಿಜಯ್, ಚೇತೇಶ್ವರ್ ಪೂಜಾರಾ.

ಏಕದಿನ ಕ್ರಿಕೆಟ್ : ಎಂಎಸ್ ಧೋನಿ (ನಾಯಕ), ರೋಹಿತ್ ಶರ್ಮ, ಅಂಜಿಕ್ಯ ರಹಾನೆ, ಶಿಖರ್ ಧವನ್, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಅಂಬಟಿ ರಾಯುಡು, ಆರ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಮೋಹಿತ್ ಶರ್ಮ, ಸ್ಟುವರ್ಟ್ ಬಿನ್ನಿ, ಧವಳ್ ಕುಲಕರ್ಣಿ. (ಒನ್ ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Harbhajan Singh was today recalled to the Indian Test squad to play against Bangladesh next month. Virat Kohli will lead the side.
Please Wait while comments are loading...