ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಸರ್ವಶ್ರೇಷ್ಠ ಸಾಧನೆ!

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 22: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ವೃತ್ತಿ ಬದುಕಿನ ಸರ್ವಶ್ರೇಷ್ಠ ಸಾಧನೆ ಮೂಲಕ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ 10 ಸ್ಥಾನ ಜಿಗಿದು ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 167 ಹಾಗೂ 81 ರನ್ ಗಳಿಸಿದ ಕೊಹ್ಲಿ ಅವರು ಗೆಲುವಿಗೆ ತಮ್ಮದೇ ಆದ ಕೊಡುಗೆ ನೀಡಿದರು. ನವೆಂಬರ್ 21ರಂದು ವಿಶಾಖಪಟ್ಟಣಂನಲ್ಲಿ ಆಂಗ್ಲರ ವಿರುದ್ಧ ಜಯ ಗಳಿಸಿದ ಭಾರತ, ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿತು.

ICC Test Rankings: Virat Kohli rises to career-best 4th

28 ವರ್ಷ ವಯಸ್ಸಿನ ವಿರಾಟ್ ಕೊಹ್ಲಿ ಅವರು ಟ್ವೆಂಟಿ 20 ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಏಕದಿನ ಕ್ರಿಕೆಟ್ ನಲ್ಲೂ ಉತ್ತಮ ಸ್ಥಾನ ಹೊಂದಿದ್ದಾರೆ. ಆದರೆ, ಟೆಸ್ಟ್ ಕ್ರಿಕೆಟ್ ನಲ್ಲಿ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ, ಈಗ ಟೆಸ್ಟ್ ಕ್ರಿಕೆಟ್ ನ ಶ್ರೇಯಾಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ.

ಒಟ್ಟಾರೆ 800ಕ್ಕೂ ಅಧಿಕ ಅಂಕ ಗಳಿಸಿ ಟಾಪ್ 10 ಪಟ್ಟಿಯೊಳಗೆ ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
India's Test captain and star batsman Virat Kohli has achieved a career-best position in the latest International Cricket Council (ICC) Rankings for Test batsmen.
Please Wait while comments are loading...