ಅಮೆರಿಕದಲ್ಲಿ ಟಿ20 ಕದನ, ವಿಂಡೀಸ್ ವಿರುದ್ಧದ ಪಂದ್ಯಕ್ಕೆ ಧೋನಿ ನಾಯಕ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 12: ಮೊಟ್ಟ ಮೊದಲ ಬಾರಿಗೆ ಆಮೆರಿಕದಲ್ಲಿ ನಡೆಯಲಿರುವ ಟಿ20 ಟೂರ್ನಮೆಂಟ್ ಪಂದ್ಯಕ್ಕೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಪ್ರಕಟಿಸಿದೆ. ಕರ್ನಾಟಕದಿಂದ ಕೆಎಲ್ ರಾಹುಲ್ ಹಾಗೂ ಸ್ಟುವರ್ಟ್ ಬಿನ್ನಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಅಮೆರಿಕಾದ ಪ್ಲೋರಿಡಾದಲ್ಲಿ ಆಗಸ್ಟ್ 27 ಹಾಗೂ 28ರಂದು ಪಂದ್ಯಗಳು ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಫ್ಲೋರಿಡಾದ ಫೋರ್ಟ್ ಲಾರ್ಡಾರ್ ಡೇಲ್(Fort lauderdale)ನಲ್ಲಿ ಪಂದ್ಯ ನಡೆಯಲಿದೆ.[ಎರಡು ಟಿ20 ವೇಳಾಪಟ್ಟಿ]

India T20I squad named for WI series in USA

ಧೋನಿ ನಾಯಕತ್ವದ ಟೀಂ ಇಂಡಿಯಾ ಅಮೆರಿಕನ್​ರಿಗೆ ಕ್ರಿಕೆಟ್ ರುಚಿ ತೋರಿಸಲು ತುದಿಗಾಲ ಮೇಲೆ ನಿಂತಿದ್ದಾರೆ.ಕೆರಿಬಿಯನ್ ಪ್ರೀಮಿಯರ್ ಲೀಗ್​ (ಸಿಪಿಎಲ್) ನ ಪಂದ್ಯಗಳಿಗೆ ಇದೇ ತಾಣ ವೇದಿಕೆ ಒದಗಿಸಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ತಂಡ ಇಂತಿದೆ: ಮಹೇಂದ್ರ ಸಿಂಗ್ ಧೋನಿ (ನಾಯಕ), ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಅಮಿತ್ ಮಿಶ್ರಾ, ಸ್ಟುವರ್ಟ್ ಬಿನ್ನಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The BCCI on Friday (Aug 12) announced the 14-member India squad for upcoming T20 International series with West Indies in the USA.
Please Wait while comments are loading...