ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಳೆ ಭೀತಿ ಇದ್ದರೂ, 4ನೇ ಏಕದಿನ ಪಂದ್ಯಕ್ಕೆ ಅಡ್ಡಿಯಿಲ್ಲ

By Mahesh

ಬೆಂಗಳೂರು, ಸೆ. 26: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ನಾಲ್ಕನೇ ಪಂದ್ಯವು ನಗರದ ಎ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದ್ದರೂ, ಪಂದ್ಯ ನಿಗದಿಯಂತೆ ನಡೆಯಲಿದೆ ಎಂದು ಕೆಎಸ್ ಸಿಎ ವಕ್ತಾರ ವಿನಯ್ ಮೃತ್ಯುಂಜಯ ಅವರು ಹೇಳಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂಗಿನ್ನು ಮಳೆಯ ಬಾಧೆಯಿಲ್ಲ!ಚಿನ್ನಸ್ವಾಮಿ ಸ್ಟೇಡಿಯಂಗಿನ್ನು ಮಳೆಯ ಬಾಧೆಯಿಲ್ಲ!

ಐದು ಪಂದ್ಯಗಳ ಏಕದಿನ ಸರಣಿಯನ್ನು 3-0ರಲ್ಲಿ ಜಯಿಸಿರುವ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸೆಪ್ಟಂಬರ್ 28 ರಂದು ಬೆಂಗಳೂರಿನಲ್ಲಿ 4ನೇ ಏಕದಿನ ಪಂದ್ಯವಾಡಲಿದೆ.

India Vs Australia: Rain threat looms over 4th ODI as moderate to heavy rains predicted in Bengaluru

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಪ್ರದೇಶ ಸೇರಿದಂತೆ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಸೆ. 28ರಂದು ಪಂದ್ಯ 1.30 pm ರಿಂದ ಪಂದ್ಯ ಆರಂಭವಾಗಲಿದ್ದು, ರಾತ್ರಿ ವೇಳೆ ಬೆಂಗಳೂರಿನಲ್ಲಿ ಶೇ 80ರಷ್ಟು ಮಳೆ ಸಂಭವ ಹೆಚ್ಚಿದೆ.

ಆದರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಮ್ ಅಳವಡಿಸಲಾಗಿದೆ, ಭಾರೀ ಪ್ರಮಾಣದ ಮಳೆಯಾದರೂ, ಮಳೆ ನಿಂತ ಸುಮಾರು 15 ನಿಮಿಷದಲ್ಲೇ ನೀರು ಇಂಗಿಸುವ ಸಾಮರ್ಥ್ಯವನ್ನು ಈ ವ್ಯವಸ್ಥೆ ಹೊಂದಿದೆ. ಹೀಗಾಗಿ ಪಂದ್ಯವನ್ನು ಎಂದಿನಂತೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹೇಳಿದೆ.

ಭಾರತ-ಆಸೀಸ್ ಏಕದಿನ: ಚಿನ್ನಸ್ವಾಮಿಯಲ್ಲಿ ಸೆ. 26ರಿಂದ ಟಿಕೆಟ್ ಲಭ್ಯಭಾರತ-ಆಸೀಸ್ ಏಕದಿನ: ಚಿನ್ನಸ್ವಾಮಿಯಲ್ಲಿ ಸೆ. 26ರಿಂದ ಟಿಕೆಟ್ ಲಭ್ಯ

ಚೆನ್ನೈನಲ್ಲಿ ನಡೆದ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. 21 ಓವರ್ ಗೆ ಆಸ್ಟ್ರೇಲಿಯಾ ಇನ್ನಿಂಗ್ಸ್ ಕಡಿತ ಮಾಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. 2013ರ ನವೆಂಬರ್ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆದಿಲ್ಲ.

100ನೇ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದ ವಾರ್ನರ್ 100ನೇ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದ ವಾರ್ನರ್

ಇಂದೋರ್ ನಿಂದ ಉಭಯ ತಂಡಗಳು ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ಬಂದಿಳಿದಿವೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಟ್ ಅಭ್ಯಾಸ ಜಾರಿಯಲ್ಲಿದೆ. ಹವಾಮಾನ ವೈಪರಿತ್ಯದ ನಡುವೆ ಪಂದ್ಯ ನಡೆಸಲು ಕೆಎಸ್ ಸಿಎ ಸಜ್ಜಾಗಿದೆ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X