ಇಂಡೋ-ಆಸೀಸ್ ಏಕದಿನ ಸರಣಿ: ಅಕ್ಷರ್ ಬದಲಿಗೆ ಜಡೇಜ

Posted By:
Subscribe to Oneindia Kannada

ಬೆಂಗಳೂರು, ಸೆ. 17: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಆಲ್ ರೌಂಡರ್ ಅಕ್ಷರ್ ಪಟೇಲ್ ಅಲಭ್ಯರಾಗಿದ್ದಾರೆ. ಗಾಯಾಳುವಾಗಿರುವ ಅಕ್ಷರ್ ಬದಲಿಗೆ ರವೀಂದ್ರ ಜಡೇಜ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ 3 ಏಕದಿನ ಪಂದ್ಯಗಳಿಗೆ ಭಾರತ ತಂಡ ಪ್ರಕಟ

ಮೊದಲ ಪಂದ್ಯ ಚೆನ್ನೈನ ಪಿ. ಚಿದಂಬರಂ ಮೈದಾನದಲ್ಲಿ ಸೆಪ್ಟೆಂಬರ್ 17ರಂದು ಮಧ್ಯಾಹ್ನ ನಡೆಯಲಿದೆ. ನೆಟ್‌ ಅಭ್ಯಾಸ ವೇಳೆ ಅಕ್ಷರ್‌ ಪಟೇಲ್‌ ಅವರ ಎಡ ಪಾದಕ್ಕೆ ಗಾಯವಾಗಿದೆ. ಅವರಿಗೆ ವೈದ್ಯರು ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ವಿಶ್ರಾಂತಿ ಪಡೆಯುತ್ತಿದ್ದ ಆಲ್‌ ರೌಂಡರ್ ರವೀಂದ್ರ ಜಡೇಜ ಅವರು ತಂಡವನ್ನು ಸೇರಿಕೊಂಡಿದ್ದಾರೆ.

India Vs Australia: Ravindra Jadeja replaces injured Axar Patel for first three ODIs

ಈಗಾಗಲೇ ಆರಂಭಿಕ ಆಟಗಾರ ಶಿಖರ್ ಧವನ್ ಮೊದಲು ಮೂರು ಏಕದಿನ ಪಂದ್ಯಗಳಿಂದ ಹೊರಬಿದ್ದಿದ್ದು, ಕನ್ನಡಿಗ ಕೆಎಲ್ ರಾಹುಲ್ ಅವರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಮೊದಲ ಮೂರು ಪಂದ್ಯಗಳು ಚೆನ್ನೈ, ಕೋಲ್ಕತಾ ಹಾಗೂ ಇಂದೋರ್ ನಲ್ಲಿ ಆಯೋಜನೆಗೊಂಡಿದೆ. ನಂತರ ಬೆಂಗಳೂರು ಹಾಗೂ ನಾಗ್ಪುರದಲ್ಲಿ ಮುಂಡಿನ ಪಂದ್ಯಗಳು ನಡೆಯಲಿವೆ. ನಂತರ ಮೂರು ಟಿ20ಐ ಪಂದ್ಯಗಳ ಸರಣಿ ನಿಗದಿಯಾಗಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ಏಕದಿನ ಹಾಗೂ ಟಿ20 ಸರಣಿ ವೇಳಾಪಟ್ಟಿ

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪ ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮನೀಶ್ ಪಾಂಡೆ, ಕೇದಾರ್ ಜಾಧವ್, ಅಜಿಂಕ್ಯ ರಹಾನೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜುವೇಂದ್ರ ಯಾದವ್, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
India spinner Ravindra Jadeja has replaced injured Axar Patel for the first three one-day internationals (ODIs) against Australia, starting Sunday (September 17).
Please Wait while comments are loading...