ಮುಂಬೈ ಟೆಸ್ಟ್ ಪಂದ್ಯಕ್ಕೆ ಕನ್ನಡಿಗ ಕೆಎಲ್ ರಾಹುಲ್ ಲಭ್ಯ

Posted By:
Subscribe to Oneindia Kannada

ಮುಂಬೈ, ಡಿಸೆಂಬರ್ 05: ಗಾಯಗೊಂಡು ಮೊಹಾಲಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಯುವ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ನಾಲ್ಕನೇ ಟೆಸ್ಟ್ ಪಂದ್ಯ ಮುಂಬೈನಲ್ಲಿ ಡಿಸೆಂಬರ್ 8ರಂದು ಆರಂಭವಾಗಲಿದೆ.[ಮುಂಬೈ ಟೆಸ್ಟ್ ಪಂದ್ಯಕ್ಕೆ ವೃದ್ಧಿಮಾನ್ ಬದಲಿಗೆ ಪಾರ್ಥೀವ್?]

India Vs England: Fit-again KL Rahul to open in fourth Test at Mumbai

ಗಾಯಾಳುವಾಗಿರುವ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರು ಇನ್ನೂ ಗುಣಮುಖರಾಗದ ಕಾರಣ ಇಂಗ್ಲೆಂಡ್ ವಿರುದ್ಧದ ಮುಂಬೈ ಟೆಸ್ಟಿಗೆ ಅಲಭ್ಯರಾಗಿದ್ದಾರೆ. ಸಹಾ ಬದಲಿಗೆ ಪಾರ್ಥೀವ್ ಪಟೇಲ್ ಅವರು ಮುಂದುವರೆಯಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಈಗಾಗಲೇ ಪ್ರಕಟಿಸಿದೆ.

24 ವರ್ಷ ವಯಸ್ಸಿನ ರಾಹುಲ್ ಅವರು ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದು, ಪಾರ್ಥೀವ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ. ರಾಹುಲ್ ಅವರು ಎಂಟ್ರಿಕೊಟ್ಟರೆ ಮಧ್ಯಮ ಕ್ರಮಾಂಕದಿಂದ ಕರ್ನಾಟಕ ಮತ್ತೊಬ್ಬ ಆಟಗಾರ ಕರುಣ್ ನಾಯರ್ ಅವರು ಸ್ಥಾನ ಬಿಟ್ಟುಕೊಡಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ.

2016ರಲ್ಲಿ ನಾಲ್ಕು ಇನ್ನಿಂಗ್ಸ್ ಗಳಿಂದ 32,38,0,10 ಸ್ಕೋರ್ ಮಾಡಿರುವ ರಾಹುಲ್ ಅವರು ರಣಜಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. (ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Young India opener KL Rahul is fit again and will be opening the Indian innings against England in upcoming fourth Test against England here on Thursday (Dec 8).
Please Wait while comments are loading...