ಟೀಂ ಇಂಡಿಯಾಕ್ಕೆ ಎಂಟ್ರಿ ಕೊಟ್ಟ ಕನ್ನಡಿಗ ಕೆಎಲ್ ರಾಹುಲ್

Posted By:
Subscribe to Oneindia Kannada

ಗಾಲೆ (ಶ್ರೀಲಂಕಾ), ಜುಲೈ 28 : ಜ್ವರದಿಂದ ಬಳಲುತ್ತಿದ್ದ ಕನ್ನಡಿಗ ಕೆಎಲ್ ರಾಹುಲ್ ಗುಣಮುಖರಾಗಿದ್ದು, ಗುರುವಾರ ಟೀಂ ಇಂಡಿಯಾ ತಂಡವನ್ನು ಸೇರಿಕೊಂಡಿದ್ದಾರೆ.

ಗಾಲೆ ಟೆಸ್ಟ್ ಪಂದ್ಯಕ್ಕೂ ಮುನ್ನ ರಾಹುಲ್ ಫ್ಯಾನ್ಸಿಗೆ ನಿರಾಶೆ

ಜ್ವರದಿಂದ ಬಳಲುತ್ತಿದ್ದ ರಾಹುಲ್, ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇವರ ಸ್ಥಾನಕ್ಕೆ ಎಡಗೈ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರನ್ನು ಆಯ್ಕೆ ಮಾಡಲಾಗಿತ್ತು.

India Vs Sri Lanka: KL Rahul joins Team India at Galle after recovery from fever

ರಾಹುಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಶಿಖರ್ ಧವನ್ ಮೊದಲ ಇನ್ನಿಂಗ್ಸ್ ನಲ್ಲಿ ಅಮೋಘ 190 ರನ್ ಗಳಿಸಿ ಉತ್ತಮ ಫಾರ್ಮ್ ನಲ್ಲಿದ್ದಾರೆ.

ಆದ್ದರಿಂದ ಮತ್ತೋರ್ವ ಆರಂಭಿಕ ಬ್ಯಾಟ್ಸ್ ಮನ್ ಅಭಿನವ್ ಮುಕ್ಕಂದ್ ಅವರನ್ನು ಕೈಬಿಟ್ಟು ರಾಹುಲ್ ಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಆಗಸ್ಟ್ 3ರಂದು ಕೊಲಂಬೋದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
India opener KL Rahul has joined the team at Galle after recovering from fever which ruled him out of the opening Test against Sri Lanka, here.
Please Wait while comments are loading...