ಯುಎಸ್ಎನಲ್ಲಿ ಇಂಡೋ-ವಿಂಡೀಸ್ ಟಿ20ಗೆ ಫುಲ್ ಗೈಡ್

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 24: ಮೊಟ್ಟ ಮೊದಲ ಬಾರಿಗೆ ಆಮೆರಿಕದಲ್ಲಿ ನಡೆಯಲಿರುವ ಟಿ20 ಟೂರ್ನಮೆಂಟ್ ಆಡಲು ಧೋನಿ ನಾಯಕತ್ವದ ಭಾರತ ತಂಡ ಫ್ಲೋರಿಡಾಗೆ ಆಗಮಿಸಿದೆ. ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಂ ಇಂಡಿಯಾ ಈಗ ಎರಡು ಟಿ20 ಪಂದ್ಯಗಳನ್ನಾಡಲು ಸಜ್ಜಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಪ್ರಕಟಿಸಿದೆ. ಕರ್ನಾಟಕದಿಂದ ಕೆಎಲ್ ರಾಹುಲ್ ಹಾಗೂ ಸ್ಟುವರ್ಟ್ ಬಿನ್ನಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.[ಎರಡು ಟಿ20 ವೇಳಾಪಟ್ಟಿ]

India-West Indies T20Is in USA: Full Schedule, Squads, TV information

ಅಮೆರಿಕಾದ ಪ್ಲೋರಿಡಾದಲ್ಲಿ ಆಗಸ್ಟ್ 27 ಹಾಗೂ 28ರಂದು ಪಂದ್ಯಗಳು ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಫ್ಲೋರಿಡಾದ ಫೋರ್ಟ್ ಲಾರ್ಡಾರ್ ಡೇಲ್(Fort lauderdale)ನಲ್ಲಿ ಪಂದ್ಯ ನಡೆಯಲಿದೆ.[ವಿಂಡೀಸ್ ವಿರುದ್ಧದ ಪಂದ್ಯಕ್ಕೆ ಧೋನಿ ನಾಯಕ]

ತಂಡ ಇಂತಿದೆ:
ಭಾರತ: ಮಹೇಂದ್ರ ಸಿಂಗ್ ಧೋನಿ (ನಾಯಕ), ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಅಮಿತ್ ಮಿಶ್ರಾ, ಸ್ಟುವರ್ಟ್ ಬಿನ್ನಿ [ಯುಎಸ್ಎ ಗೆ ಬಂದಿಳಿದ ಧೋನಿ ಪಡೆ]

ವೆಸ್ಟ್ ಇಂಡೀಸ್ : ಕಾರ್ಲೊಸ್ ಬ್ರಥ್ ವೈಟ್ (ನಾಯಕ), ಆಂಡ್ರೆ ಫ್ಲೆಚರ್ (ವಿಕೆಟ್ ಕೀಪರ್), ಆಂಡ್ರೆ ರಸೆಲ್, ಕ್ರಿಸ್ ಗೇಲ್, ಡ್ವಾಯ್ನೆ ಬ್ರಾವೋ, ಇವಿನ್ ಲೂಯಿಸ್, ಜಾಸನ್ ಹೋಲ್ಡರ್, ಜಾನ್ಸನ್ ಚಾರ್ಲ್ಸ್, ಕೀರಾನ್ ಪೊಲ್ಲಾರ್ಡ್, ಲೆಂಡ್ಲ್ ಸಿಮನ್ಸ್, ಮರ್ಲಾನ್ ಸ್ಯಾಮುಯಲ್ಸ್, ಸ್ಯಾಮುಯಲ್ ಬದ್ರಿ, ಸುನಿಲ್ ನರೇನ್

ಯಾವ ಚಾನೆಲ್ ನಲ್ಲಿ ಪ್ರಸಾರವಾಗಲಿದೆ?
* ಸ್ಟಾರ್ ಸ್ಫೋರ್ಟ್ಸ್ ನೆಟ್ವರ್ಕ್ (ಸ್ಟಾರ್ ಸ್ಫೋರ್ಟ್ 1, 3 ಹಾಗೂ ಎಚ್ ಡಿ ಚಾನೆಲ್ ಗಳಾದ ಸ್ಟಾರ್ ಎಚ್ ಡಿ 1 ಹಾಗೂ ಎಚ್ ಡಿ 2 ನಲ್ಲಿ ಪ್ರಸಾರವಾಗಲಿದೆ.
* ಹಿಂದಿ ಹಾಗೂ ಇಂಗ್ಲೀಷ್ ನಲ್ಲಿ ಕಾಮೆಂಟರಿ ಲಭ್ಯ
* ವೆಬ್ ಸೈಟ್ ನಲ್ಲಿ starsports.com, BCCI.TV ಯಲ್ಲೂ ನೋಡಬಹುದು.
* ಯುಎಸ್ಎನಲ್ಲಿ YuPPTV ನಲ್ಲೂ ಲೈವ್ ಸ್ಟ್ರೀಮಿಂಗ್ ಇರುತ್ತದೆ.

(ಒನ್ ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
India under the leadership of limited-overs skipper MS Dhoni will be playing their first ever Twenty20 international series in the United States of America (USA).
Please Wait while comments are loading...