ಎಬಿಡಿ ಅಜೇಯ 89 ರನ್ ಅಬ್ಬರ, ಪಂಜಾಬಿಗೆ 149 ರನ್ ಟಾರ್ಗೆಟ್!

Posted By:
Subscribe to Oneindia Kannada

ಇಂದೋರ್, ಏಪ್ರಿಲ್ 10: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ 360 ಡಿಗ್ರಿ ಆಟಗಾರ ಎಬಿ ಡಿವಿಲಿಯರ್ಸ್ ಅವರು ಬಲ ತಂದರೂ ಉಳಿದ ಆಟಗಾರರ ಕಳಪೆ ಪ್ರದರ್ಶನದಿಂದ ಪಂದ್ಯ ಕೈ ತಪ್ಪಿದೆ. ಆರ್ ಸಿಬಿ ನೀಡಿದ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ತಂಡ 8 ವಿಕೆಟ್ ಗಳ ಸುಲಭ ಜಯ ದಾಖಲಿಸಿದೆ. ಹಶೀಂ ಆಮ್ಲಾ ಅಜೇಯ 58, ಮ್ಯಾಕ್ಸ್ ವೆಲ್ ಅಜೇಯ 43ರನ್ ಗಳಿಸಿ ಗೆಲುವಿನ ನಗೆ ಬೀರಿದರು.

ಸ್ಟಾರ್ ಆಟಗಾರರ ಅನುಪಸ್ಥಿತಿಯ ನಡುವೆಯೂ ಉತ್ತಮ ಆಟವಾಡಿ ಹಿಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಇನ್ನಷ್ಟು ಬಲ ತುಂಬಲು ದಕ್ಷಿಣ ಆಫ್ರಿಕಾದ 360 ಡಿಗ್ರಿ ಆಟಗಾರ ಎಬಿ ಡಿವಿಲಿಯರ್ಸ್ ಎಂಟ್ರಿ ಕೊಟ್ಟಿದ್ದಲ್ಲದೆ ಅಜೇಯ 89 ರನ್ ಬಾರಿಸಿ, ಆರ್ ಸಿಬಿ ಮೊತ್ತವನ್ನು 148ಕ್ಕೇರಿಸಿದ್ದಾರೆ.

ಐಪಿಎಲ್ 2017: ಆರ್ ಸಿಬಿ ವೇಳಾಪಟ್ಟಿ | ಸಂಪೂರ್ಣ ವೇಳಾಪಟ್ಟಿ | ಆರ್ ಸಿಬಿ ಪಡೆ | ಗ್ಯಾಲರಿ

ಪಂಜಾಬ್ ವಿರುದ್ಧ ಟಾಸ್ ಗೆದ್ದ ಆರ್ ಸಿಬಿ ನಾಯಕ ಶೇನ್ ವಾಟ್ಸನ್ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಸ್ಫೋಟಕ ಬ್ಯಾಟ್ಸ್ ಮನ್ ವೆಸ್ಟ್ ಇಂಡೀಸ್ ನ ದೈತ್ಯ ಕ್ರಿಸ್ ಗೇಲ್ ಪಂದ್ಯದಿಂದ ಹೊರಗುಳಿದಿದ್ದಾರೆ. [ಟಿ20ಯಲ್ಲಿ ಹೊಸ ದಾಖಲೆ ಬರೆದ ಧೋನಿ]

IPL 2017: Match 8: Bengaluru win toss, opt to bat first against Punjab

ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಲಿರುವ ಪಂದ್ಯದಲ್ಲಿ ಶೇನ್ ವಾಟ್ಸನ್ ನಾಯಕತ್ವದ ಆರ್‌ಸಿಬಿ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಎದುರು ಪೈಪೋಟಿ ನಡೆಸಲಿದೆ.

ಆರ್‌ಸಿಬಿ ಈ ಬಾರಿಯ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ ಎದುರು ಸೋಲು ಕಂಡಿತ್ತು.

ಆಡುವ ತಂಡ XI :

ಬೆಂಗಳೂರಿನಲ್ಲಿ ನಡೆದಿದ್ದ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು 15 ರನ್‌ಗಳಿಂದ ಮಣಿಸಿತ್ತು. ಪಂಜಾಬ್ ತಂಡ, ಹಿಂದಿನ ಪಂದ್ಯದಲ್ಲಿ ಪುಣೆ ರೈಸಿಂಗ್ ಸೂಪರ್‌ಜೈಂಟ್ ಎದುರು ಗೆಲುವು ಪಡೆದಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
IPL 2017: Match 8: Punjab beat Bangalore by 8 wickets; De Villiers' exploits go in vain here on Monday (April 10)
Please Wait while comments are loading...