ನಮ್ಮ ಬೆಂಗಳೂರಿನಲ್ಲಿ ಐಪಿಎಲ್ 10 ರ ಹರಾಜು

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 09: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ನ 10ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಬೆಂಗಳೂರಿನಲಿ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. 10 ವರ್ಷಗಳ ಟೂರ್ನಿಯ ಆಯೋಜನೆ ಹೊಣೆ ಈ ವರ್ಷ ಕೊನೆಗೊಳ್ಳಲಿದ್ದು, ಆಟಗಾರರ ಹರಾಜು ಪ್ರಕ್ರಿಯೆ ಡಿಸೆಂಬರ್ ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ.

ಐಪಿಎಲ್ 2016 ಹರಾಜು ಫುಲ್ ಅಪ್ಡೇಟ್
| ಮಾರಾಟವಾದ ಆಟಗಾರರ ಪೂರ್ತಿ ಪಟ್ಟಿ

ಹೊಸ ತಂಡಗಳಾದ ಪುಣೆ ಹಾಗೂ ರಾಜ್ ಕೋಟ್ ಎರಡು ವರ್ಷಗಳ ಕಾಲ ಐಪಿಎಲ್ ನಲ್ಲಿ ಆಡಲು ಅನುಮತಿ ಪಡೆದಿವೆ. ನಿಷೇಧಕ್ಕೊಳಗಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಬದಲಿಗೆ ಟೂರ್ನಿಯಲ್ಲಿ ಕಳೆದ ವರ್ಷ ಕಾಣಿಸಿಕೊಂಡಿದ್ದವು.

IPL 2017 players' auction to be held in Bengaluru in December

2010ರ ಐಪಿಎಲ್ ಪಂದ್ಯಗಳು ಬಹುತೇಕ ಮುಂಬೈ, ಪುಣೆ ಹಾಗೂ ನಾಗ್ಪುರದಲ್ಲಿ ನಡೆಯಲಿದೆ. ಈಗಾಗಲೇ ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಠಾನಗೊಳಿಸದ ಕಾರಣಕ್ಕೆ ಸುಪ್ರೀಂಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿರುವ ಬಿಸಿಸಿಐಗೆ ಐಪಿಎಲ್ ಆಯೋಜನೆ ಈ ಬಾರಿ ಕಷ್ಟಕರವಾಗಲಿದೆ.[ಐಪಿಎಲ್ 2016: ಯಾವ ತಂಡದಲ್ಲಿ ಯಾವ ಆಟಗಾರರಿದ್ದಾರೆ?]

ಹಾಲಿ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಈ ಬಾರಿಯ ಉದ್ಘಾಟನಾ ಸಮಾರಂಭ ಆಯೋಜನೆಯ ಅವಕಾಶ ಲಭಿಸಲಿದೆ. ಇನ್ನಷ್ಟು ವಿವರಗಳು ಮುಂದಿನ ದಿನಗಳಲ್ಲಿ ತಿಳಿದು ಬರಲಿದೆ.

ಬಿಸಿಸಿಐ ಸಭೆಯಲ್ಲಿ ಅಧ್ಯಕ್ಷ ಅನುರಾಗ್ ಠಾಕೂರ್, ಕಾರ್ಯದರ್ಶಿ ಅಜಯ್ ಶಿರ್ಕೆ, ಚೇರ್ಮನ್ ರಾಜೀವ್ ಶುಕ್ಲಾ, ಮಾಜಿ ನಾಯಕ ಸೌರವ್ ಗಂಗೂಲಿ, ಜಾರ್ಖಂಡ್ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಅಮಿತಾಬ್ ಚೌಧರಿ, ಪಂಜಾಬ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಪಾಂಡೋವ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. (ಪಿಟಿಐ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Indian Premier League players' auction for season 10, which will be the final edition under the existing 10-year contract, will be held in Bengaluru next month.
Please Wait while comments are loading...