ರಣಜಿಯಲ್ಲಿ ಶತಕ, ಇಂಗ್ಲೆಂಡ್ ವಿರುದ್ಧ ಪಂದ್ಯಕ್ಕೆ ರಾಹುಲ್

Posted By:
Subscribe to Oneindia Kannada

ವಿಶಾಖಪಟ್ಟಣಂ, ನವೆಂಬರ್ 15: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಕರ್ನಾಟಕದ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು ಟೀಂ ಇಂಡಿಯಾಕ್ಕೆ ಮರಳಿದ್ದಾರೆ.

ರಣಜಿಯಲ್ಲಿ ಭರ್ಜರಿಯಾಗಿ ಶತಕ ಬಾರಿಸಿದ ರಾಹುಲ್ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ(ನವೆಂಬರ್ 15) ಪ್ರಕಟಿಸಿದೆ.

kl-rahul-added-india-squad-2nd-england-test

ಟೀಂ ಇಂಡಿಯಾದ ಆರಂಭಿಕ ಆಟಗಾರರಾಗಿದ್ದ ಕೆಎಲ್ ರಾಹುಲ್ ಅವರು ಗಾಯಗೊಂಡು ತಂಡದಿಂದ ಹೊರಗುಳಿದಿದ್ದರು. ಗಾಯದಿಂದ ಗುಣಮುಖರಾದ ಮೇಲೆ ರಣಜಿ ಪಂದ್ಯವಾಡಲು ಬಯಸಿದರು. ಅದರಂತೆ ರಾಜಸ್ಥಾನ ವಿರುದ್ಧದ ಪಂದ್ಯವಾಡಿದ ರಾಹುಲ್ ಅವರು 106ರನ್ ಬಾರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ನವೆಂಬರ್ 17ರಿಂದ ವಿಶಾಖಪಟ್ಟಣಂನಲ್ಲಿ ಗುರುವಾರದಿಂದ ಆರಂಭವಾಗಲಿದೆ.

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ಸ್ನಾಯುಸೆಳೆತಕ್ಕೆ ಸಿಲುಕಿ ಗಾಯಗೊಂಡಿದ್ದ ರಾಹುಲ್ ಅವರು ಇಂಗ್ಲೆಂಡ್ ವಿರುದ್ಧದ ರಾಜ್ ಕೋಟ್ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ನ್ಯೂಜಿಲೆಂಡ್ ಸರಣಿಯಲ್ಲಿ ರಾಹುಲ್ ಬದಲಿಗೆ ಗೌತಮ್ ಗಂಭೀರ್ ಆಯ್ಕೆಯಾಗಿದ್ದರು. (ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Opening batsman KL Rahul has been added to the Indian squad for the 2nd Test against England, the Board of Control for Cricket in India (BCCI) announced today (November 15).
Please Wait while comments are loading...