ಕೆಪಿಎಲ್ 2016:ಮೈಸೂರು, ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ ಸೆಮೀಸ್ ನತ್ತ

By: ಶಂಭು,ಹುಬ್ಬಳ್ಳಿ
Subscribe to Oneindia Kannada

ಹುಬ್ಬಳ್ಳಿ, ಸೆ.30 : ಮೈಸೂರು, ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿನಾಲ್ಕು ತಂಡಗಳು 5ನೇ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶ ಮಾಡಿವೆ.

ಅ.1 ಶನಿವಾರ ಸೆಮಿಫೈನಲ್ ಪಂದ್ಯಗಳು ಆರಂಭವಾಗಲಿವೆ. ಕ್ರೀಡಾಂಗಣದಲ್ಲಿ ಪಂದ್ಯ ನೋಡಲು ಟಿಕೆಟ್ ಗಾಗಿ ಈಗಾಗಲೇ ಕ್ರಿಕೆಟ್ ಅಭಿಮಾನಿಗಳು ಬುಕ್ಕಿಂಗ್ ಮಾಡಿಕೊಳ್ಳುತ್ತಿದ್ದಾರೆ. ವಾರದ ಕೊನೆಯ ದಿನ ಮತ್ತು ವಾರದ ರಜೆಯಾಗಿರುವ ಶನಿವಾರ, ಭಾನುವಾರ ಪಂದ್ಯಗಳು ನಡೆಯುತ್ತಿರುವುದರಿಂದ ಭಾರೀ ಸಂಖ್ಯೆಯಲ್ಲಿ ಕ್ರಿಕೆಟ್ ಪ್ರೇಮಿಗಳು ಪಂದ್ಯ ವೀಕ್ಷಣೆಗೆ ಬರುವ ನಿರೀಕ್ಷೆಯಿರುವುದರಿಂದ ಕ್ರೀಡಾಂಗಣದಲ್ಲಿ ಹೆಚ್ಚುವರಿ ಆಸನಗಳನ್ನು ವ್ಯವಸ್ಥೆ ಮಾಡಲಾಗಿದೆ.

KPL 2016

ಕೆಪಿಎಲ್ ಪಂದ್ಯಾವಳಿಗಳನ್ನು ಈ ಬಾರಿ ಸೋನಿ ಇಎಸ್ ಪಿಎನ್ ಚಾನೆಲ್ ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ. ಈ ಪಂದ್ಯಾವಳಿಯನ್ನು ವಿಶ್ವದಾದ್ಯಂತ 2. 5 ಕೋಟಿಗೂ ಹೆಚ್ಚು ಜನರು ನಿತ್ಯ ವೀಕ್ಷಿಸುತ್ತಿರುವುದು ವಿಶೇಷ.

ಬಿಜಾಪುರ ಬುಲ್ಸ್ ಹಾಗೂ ಬಳ್ಳಾರಿ ಟಸ್ಕರ್ಸ್ ನಡುವಿನ ಪಂದ್ಯದಲ್ಲಿ ಬಳ್ಳಾರಿ ತಂಡ 6 ವಿಕೆಟ್ ಗಳ ಭರ್ಜರಿ ಜಯಗಳಿಸಿ ಬಹುತೇಕ ಸೆಮೀಸ್ ತಲುಪುವ ವಿಶ್ವಾಸ ಹೆಚ್ಚಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬಿಜಾಪುರ ಬುಲ್ಸ್ 17 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 125 ರನ್ ಗಳಿಸಲಷ್ಟೇ ಶಕ್ತವಾಯಿತು. ಇದನ್ನು ಬೆನ್ನಟ್ಟಿದ ಬಳ್ಳಾರಿ ಟಸ್ಕರ್ಸ್ 15.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದುಕೊಂಡಿತು.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಬೆಳಗಾವಿ ಪ್ಯಾಂಥರ್ಸ್ ಮತ್ತು ನಂತರದ ಸ್ಥಾನದಲ್ಲಿರುವ ಬಳ್ಳಾರಿ ಟಸ್ಕರ್ಸ್ ಈ ಎರಡು ತಂಡಗಳು ಸೆಮಿಫೈನಲ್ ಪ್ರವೇಶಿಸುವುದು ಖಚಿತವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Belagavi Panthers moved one step closer to a semi-final berth when they crushed Rockstars by 9 wickets in a rain-truncated Karnataka Premier League (KPL) Twenty20 tournament match at the KSCA Stadium at Rajnagar on Wednesday (September 28).
Please Wait while comments are loading...