ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ವಿಶ್ವ ದಾಖಲೆ ಬರೆದ ಭಾರತದ ಮಿಥಾಲಿ ರಾಜ್

Posted By:
Subscribe to Oneindia Kannada

ಲಂಡನ್, ಜುಲೈ 12 : ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ವಿಶ್ವ ದಾಖಲೆ ಬರೆದಿದ್ದಾರೆ.

ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ 183 ಪಂದ್ಯಗಳಲ್ಲಿ 6000 ರನ್ ಪೇರಿಸಿದ ಮೊದಲ ಮಹಿಳಾ ಆಟಗಾರ್ತಿಯಾಗಿ ಭಾರತದ ಮಿಥಾಲಿ ರಾಜ್ ಹೊರಹೊಮ್ಮಿದ್ದಾರೆ.

ಲಂಡನ್ ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಬುಧವಾರದ ಪಂದ್ಯದಲ್ಲಿ (ಜುಲೈ 12) ಆಸ್ಟ್ರೇಲಿಯಾ ತಂಡದ ವಿರುದ್ಧ 69 ರನ್ ಸಿಡಿಸಿದ ಮಿಥಾಲಿ, ಏಕದಿನ ಮಾದರಿಯ ಪಂದ್ಯದಲ್ಲಿ 6000 ರನ್ ಗಡಿ ದಾಟಿದರಲ್ಲದೆ, ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ್ತಿಯೆಂಬ ಹೆಗ್ಗಳಿಕೆಗೆ ಪಾತ್ರರಾದರು.

ವಿಶ್ವದಾಖಲೆ ಬರೆದ ಭಾರತೀಯ ಮಹಿಳಾ ಕ್ರಿಕೆಟರ್ಸ್!

Mithali Raj becomes first to score 6000 runs in women’s ODI cricket

ಈ ಮೂಲಕ ಮಹಿಳಾ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಪೇರಿಸಿದ ಅಗ್ರಮಾನ್ಯ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾದರು.

ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ 191 ಪಂದ್ಯಗಳಲ್ಲಿ 5992 ಅತ್ಯಧಿಕ ರನ್‌ ಗಳಿಸಿದ್ದ ಇಂಗ್ಲೆಂಡ್‌ನ ಚಾರ್ಲೊಟ್ ಎಡ್ವರ್ಡ್ಸ್ ಅವರ ದಾಖಲೆಯನ್ನು ಮುರಿದರು.

ಸದ್ಯ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಮಿಥಾಲಿ ರಾಜ್ ಈ ದಾಖಲೆ ಬರೆದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Indian skipper Mithali Raj has become the first player in the history of women’s ODI cricket to have crossed 6000 career runs. Mithali reached the milestone in India’s ICC Women’s World Cup 2017 match against Australia.
Please Wait while comments are loading...