ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಕದಿನ ಕ್ರಿಕೆಟ್‌ ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಎಂಎಸ್ ಧೋನಿ

ಕೊಲಂಬೊ, ಸೆಪ್ಟೆಂಬರ್ 04 : ಟೀಂ ಇಂಡಿಯಾದ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ ಅವರು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

ವಿಡಿಯೋ: ಧೋನಿಯಿಂದ ಮಿಂಚಿನ ವೇಗದಲ್ಲಿ ಸ್ಟಂಪಿಂಗ್!ವಿಡಿಯೋ: ಧೋನಿಯಿಂದ ಮಿಂಚಿನ ವೇಗದಲ್ಲಿ ಸ್ಟಂಪಿಂಗ್!

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ಅತಿಹೆಚ್ಚು ಸ್ಟಂಪಿಂಗ್ ಮಾಡಿದ ಕ್ರಿಕೆಟಿಗ ಎಂಬ ಗೌರವಕ್ಕೆ ಧೋನಿ ಭಾಜನರಾಗಿದ್ದಾರೆ. ಭಾನುವಾರ ನಡೆದ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಈ ದಾಖಲೆ ಮಾಡಿದರು.

MS Dhoni creates world record, becomes first wicketkeeper with 100 ODI stumpings

ಶ್ರೀಲಂಕಾ ವಿರುದ್ಧ 5ನೇ ಏಕದಿನ ಪಂದ್ಯದಲ್ಲಿ ಯಜುವೇಂದ್ರ ಚಹಾಲ್ ಎಸೆದ 45ನೇ ಓವರ್‌ನಲ್ಲಿ ಅಖಿಲ ಧನಂಜಯ ಅವರನ್ನು ಸ್ಟಂಪಿಂಗ್ ಮಾಡುವ ಮೂಲಕ 100 ಸ್ಟಂಪಿಂಗ್ ಮಾಡಿದ ವಿಶ್ವದ ಮೊದಲ ವಿಕೆಟ್‌ ಕೀಪರ್ ಎಂಬ ದಾಖಲೆ ನಿರ್ಮಿಸಿದರು.

ಶ್ರೀಲಂಕಾದ ವಿಕೆಟ್ ಕೀಪರ್ ಕುಮಾರ ಸಂಗಾಕ್ಕರ ಅವರು 99 ಸ್ಟಂಪಿಂಗ್ ಮಾಡಿ ಎರಡನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಶ್ರೀಲಂಕಾದ ಕಲುವಿತರನ 75, ಪಾಕಿಸ್ತಾನದ ಮೋಯಿನ್ ಖಾನ್‌ 73 , ಆಸ್ಟ್ರೇಲಿಯಾದ ಆಡಮ್ ಗಿಲ್ ಕ್ರಿಸ್ಟ್‌ 55 ಸ್ಟಂಪಿಂಗ್ ಮಾಡಿ ಕ್ರಮವಾಗಿ 3, 4 ಮತ್ತು 5ನೇ ಸ್ಥಾನದಲ್ಲಿದ್ದಾರೆ.

300 ಏಕದಿನ ಪಂದ್ಯಗಳನ್ನಾಡಿದ ಭಾರತದ ಆಟಗಾರರಲ್ಲಿ ಮಹಿ ಆರನೇ ಸ್ಥಾನವನ್ನು ಅಲಂಕರಿಸಿದರು. ಅಜುರುದ್ದೀನ್, ಸಚಿನ್, ದ್ರಾವಿಡ್ ಹಾಗೂ ಯುವರಾಜ್ ಸಿಂಗ್ 300 ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X