ಟೀಂ ಇಂಡಿಯಾ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಧೋನಿ

Posted By:
Subscribe to Oneindia Kannada

ಬೆಂಗಳೂರು, ಜನವರಿ 04 : ಟೀಂ ಇಂಡಿಯಾ ನಾಯಕತ್ವದಿಂದ ಮಹೇಂದ್ರ ಸಿಂಗ್ ಧೋನಿ ಕೆಳಗಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಧೋನಿ ಈ ನಿರ್ಧಾರ ಕೈಗೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಏಕದಿನ ಅಂತಾರಾಷ್ಟ್ರೀಯ ತಂಡ ಹಾಗೂ ಟ್ವೆಂಟಿ20 ತಂಡಕ್ಕೆ ಧೋನಿ ನಾಯಕರಾಗಿದ್ದರು.

ಈಗಾಗಲೇ ಟೆಸ್ಟ್ ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅವರ ಹೆಗಲಿಗೆ ಏಕದಿನ ಹಾಗೂ ಟಿ20 ನಾಯಕತ್ವ ವಹಿಸುವ ಸಾಧ್ಯತೆಯಿದೆ. ಜನವರಿ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿ ಆರಂಭವಾಗಲಿದೆ. ಜನವರಿ 15 ರಂದು ಪುಣೆಯಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ['ಮ್ಯಾಚ್ ಫಿನಿಷರ್:' ಸಚಿನ್, ಕೊಹ್ಲಿಗಿಂತ ಧೋನಿಯೇ ಬೆಸ್ಟ್!]

MS Dhoni

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ ಶುಕ್ರವಾರ ಸಭೆ ಸೇರಿ ಮುಂಬರುವ ಮೂರು ಏಕದಿನ ಪಂದ್ಯ ಹಾಗೂ ಟಿ20 ಪಂದ್ಯಗಳಿಗೆ ತಂಡವನ್ನು ಆಯ್ಕೆ ಮಾಡಲಿದೆ.


ಧೋನಿ ಅವರು ತಂಡದಲ್ಲಿ ಆಟಗಾರನಾಗಿ ಆಯ್ಕೆಯಾಗಲು ಅರ್ಹರಾಗಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ.
ಅತ್ಯಂತ ಯಶಸ್ವಿ ನಾಯಕ: 35 ವರ್ಷ ವಯಸ್ಸಿನ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜನೆಯ ಎಲ್ಲಾ ಮೂರು ಜಾಗತಿಕ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. 2007ರಲ್ಲಿ ವಿಶ್ವ ಟ್ವೆಂಟಿ20, 2011ರಲ್ಲಿ ವಿಶ್ವಕಪ್ ಹಾಗೂ 2013ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದರು. 2014ರಲ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆದ ಧೋನಿ ಅವರು 2007ರಿಂದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ. [ಏಕದಿನ ಕ್ರಿಕೆಟ್ ನಲ್ಲಿ ಧೋನಿಯೇ 'ಕ್ಯಾಪ್ಟನ್ ಕಿಂಗ್']

60 ಟೆಸ್ಟ್ ಪಂದ್ಯಗಳಲ್ಲಿ 27 ಗೆಲುವು, 199 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 110ರಲ್ಲಿ ಗೆಲುವು, 74 ಸೋಲು (4 ಟೈ, 11 ಫಲಿತಾಂಶವಿಲ್ಲ), 72 ಟ್ವೆಂಟಿ20 ಪಂದ್ಯಗಳಲ್ಲಿ 42 ಗೆಲುವು, 28 ಸೋಲು(2 ಫಲಿತಾಂಶವಿಲ್ಲ). ಒಟ್ಟಾರೆ 331 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, ವಿಶ್ವದಾಖಲೆಯಾಗಿದೆ. ಧೋನಿ ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಇದ್ದು, 324 ಪಂದ್ಯಗಳಲ್ಲಿ ನಾಯಕರಾಗಿದ್ದರು.

ಬಲಗೈ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ಅವರು ಟೀಂ ಇಂಡಿಯಾ ನಾಯಕರಾಗಿ ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 29ರಂದು ವಿಶಾಖಪಟ್ಟಣಂನಲ್ಲಿ ಆಡಿದ್ದರು. ಈ ಪಂದ್ಯದಲ್ಲಿ ಧೋನಿ 41 ರನ್ ಗಳಿಸಿದ್ದರು. 190 ರನ್ ಗಳಿಂದ ಈ ಪಂದ್ಯ ಗೆದ್ದ ಭಾರತ ಐದು ಪಂದ್ಯಗಳ ಏಕದಿನ ಸರಣಿಯನ್ನು 3-2 ಅಂತರದಿಂದ ಗೆದ್ದುಕೊಂಡಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Ahead of the home series against England, India's most successful limited overs captain Mahendra Singh Dhoni has stepped down, the Board of Control for Cricket in India (BCCI) announced today (January 4).
Please Wait while comments are loading...