ಇಂಗ್ಲೆಂಡ್ ವಿರುದ್ದ ಮೊದಲ ಏಕದಿನ ಪಂದ್ಯಕ್ಕೆ ಕೊಹ್ಲಿ ಪಡೆ ಸಜ್ಜು

Written By: Ramesh
Subscribe to Oneindia Kannada

ಪುಣೆ, ಜನವರಿ. 14 : ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 4-0 ಅಂತರದಲ್ಲಿ ಗೆದ್ದಿರುವ ಕೊಹ್ಲಿ ಪಡೆ, ಏಕದಿನ ಸರಣಿಯನ್ನು ಗೆಲ್ಲುವ ವಿಶ್ವಾದಲ್ಲಿದೆ. ಜನವರಿ 15(ಭಾನುವಾರ) ರಂದು ಪುಣೆಯಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.

ಏಕದಿನ ಹಾಗೂ ಟಿ20 ಎರಡು ತಂಡಕ್ಕೆ ಕೊಹ್ಲಿ ನಾಯಕರಾಗಿದ್ದು, ಹೊಸ ಅಧ್ಯಾಯ ಅರಂಭಗೊಂಡಿದೆ. ಏಕದಿನ ಅಂತಾರಾಷ್ಟ್ರೀಯ ತಂಡ ಹಾಗೂ ಟ್ವೆಂಟಿ20 ತಂಡಕ್ಕೆ ನಾಯಕರಾಗಿದ್ದ ಧೋನಿ ಅವರು ಬುಧವಾರ(ಜನವರಿ 04) ದಂದು ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. [ಭಾರತ vs ಇಂಗ್ಲೆಂಡ್, ಏಕದಿನ, ಟಿ20 ಸರಣಿಗೆ ಫುಲ್ ಗೈಡ್]

Preview: 1st ODI: India Vs England in Pune; New era to begin with Virat Kohli as captain

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 4-0 ಅಂತರದಲ್ಲಿ ಗೆದ್ದಿರುವ ಕೊಹ್ಲಿ ಪಡೆ, ಈಗ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಿದೆ. ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಟಿ20 ಪಂದ್ಯಕ್ಕೆ 15 ಮಂದಿ ತಂಡವನ್ನು ಪ್ರಕಟಿಸಲಾಗಿದೆ.

ಏಕದಿನ ಹಾಗೂ ಟಿ20 ಎರಡು ತಂಡಕ್ಕೂ ಕರ್ನಾಟಕದ ಕೆಎಲ್ ರಾಹುಲ್, ಮನೀಶ್ ಪಾಂಡೆ ಆಯ್ಕೆಯಾಗಿದ್ದಾರೆ. ಇನ್ನು ಬಹು ಮುಖ್ಯವಾಗಿ ಎಸಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದು, ಈ ತಂಡದ ಟ್ರಂಪ್ ಕಾರ್ಡ್ ಆಗಿದ್ದಾರೆ.

ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಎಂಎಸ್ ಧೋನಿ( ವಿಕೆಟ್ ಕೀಪರ್), ಕೆಎಲ್ ರಾಹುಲ್, ಶಿಖರ್ ಧವನ್, ಮನೀಶ್ ಪಾಂಡೆ, ಕೇದಾರ್ ಜಾಧವ್, ಯುವರಾಜ್ ಸಿಂಗ್, ಅಜಿಂಕ್ಯ ರಹಾನೆ, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ರವೀಂದ್ರ ಜಡೇಜ, ಅಮಿತ್ ಮಿಶ್ರಾ, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್.

ಇಂಗ್ಲೆಂಡ್: ಇಯಾನ್ ಮಾರ್ಗನ್(ನಾಯಕ), ಮೋಯಿನ್ ಅಲಿ, ಜಾನಿ ಬೈರ್ಸ್ಟೊ, ಜೇಕ್ ಬಾಲ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಲಿಯಾಮ್ ಡಾಸನ್, ಅಲೆಕ್ಸ್ ಹೇಲ್ಸ್, ಲಿಯಾನ್ ಪ್ಲಂಕೆಟ್, ಅದಿಲ್ ರಶೀದ್, ಜೋ ರೂಟ್, ಜಾಸನ್ ರಾಯ್, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್.

ಪಂದ್ಯದ ಸಮಯ: ಮಧ್ಯಾಹ್ನ 1.30ಕ್ಕೆ.

ನೇರ ಪ್ರಸಾರ: ಸ್ಟಾರ್ ಸ್ಫೋರ್ಟ್ಸ್ ಟಿವಿ ನೆಟ್ವರ್ಕ್.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
India and England face off in Pune on Sunday (January 15) in the 1st ODI of 5-match series. A new era begins with Virat Kohli as captain.
Please Wait while comments are loading...