ಅ.16ರಂದು ಭಾರತ-ಕಿವೀಸ್ ನಡುವೆ ಮೊದಲ ಏಕದಿನ ಪಂದ್ಯ

Written By: Ramesh
Subscribe to Oneindia Kannada

ಧರ್ಮಶಾಲಾ, ಅಕ್ಟೋಬರ್. 15 : ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು ಟೆಸ್ಟ್‌ ಸರಣಿಯಲ್ಲಿ 0-3 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಟೆಸ್ಟ್‌ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನು ವೈಟ್ ವಾಶ್ ಮಾಡುವ ತವಕದಲ್ಲಿದೆ.

ನ್ಯೂಜಿಲೆಂಡ್- ಭಾರತ ಟೆಸ್ಟ್, ಏಕದಿನ ಸರಣಿ ವೇಳಾಪಟ್ಟಿ

ಅಕ್ಟೋಬರ್ 16 ದಂದು(ಭಾನುವಾರ) ಧರ್ಮಶಾಲಾದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಭಾರತ ಸದ್ಯ ಏಕದಿನ ಶ್ರೇಯಾಂಕದಲ್ಲಿ 110 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದರೆ. 113 ಅಂಕ ಪಡೆದಿರುವ ನ್ಯೂಜಿಲೆಂಡ್ 3ನೇ ಸ್ಥಾನದಲ್ಲಿದೆ. ಒಂದು ವೇಳೆ ಭಾರತ 5 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯನ್ನು 4-1ರಿಂದ ಜಯಿಸಿದರೆ ನ್ಯೂಜಿಲ್ಯಾಂಡ್‌ ತಂಡವನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೆ ಪ್ರವೇಶ ಮಾಡಲಿದೆ. [ಕಿವೀಸ್ ವಿರುದ್ಧದ 3 ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ]

dharamsala

ಭಾರತದ ಎಡಗೈ ಬ್ಯಾಟ್ಸ್ ಮನ್ ಸುರೇಶ್ ಜ್ವರದಿಂದ ಬಳಲುತ್ತಿದ್ದರಿಂದ ದರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಿಂದ ದೂರ ಉಳಿಯುವ ಸಾಧ್ಯತೆಗಳಿವೆ. [ಕಿವೀಸ್ ವಿರುದ್ಧ ಸರಣಿ, ಕ್ರಿಕೆಟರ್ಸ್ ಗೆ ಟ್ವಿಟ್ಟರಲ್ಲಿ ಬಹುಪರಾಕ್!]

ಇನ್ನು ಟೆಸ್ಟ್ ಸರಣಿಯಲ್ಲಿ ಮಾಜಿಕ್ ಮಾಡಿದ್ದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜ ಈ ಇಬ್ಬರು ಸ್ಪಿನ್ನರ್ ಗಳಿಗೆ ವಿಶ್ರಾಂತಿ ನೀಡಲಾಗಿದ್ದು, ಅಮಿತ್ ಮಿಶ್ರ ಮತ್ತು ಅಕ್ಷರ್ ಪಟೇಲ್ ಸ್ಪಿನ್ ವಿಭಾಗವನ್ನು ನಿಭಾಹಿಸಲಿದ್ದಾರೆ.

newzealand-dharamsala

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ನ್ಯೂಜಿಲೆಂಡ್ ತಂಡ ಆಲ್ ರೌಂಡರ್ ಕೋರೆ ಆಂಡರ್ಸನ್ ತಂಡಕ್ಕೆ ಮರಳಿರುವುದರಿಂದ ಕಿವೀಸ್ ಗೆ ಆತ್ಮವಿಶ್ವಾಸ ಹೆಚ್ಚಿಸಿದೆ.ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು ಕಂಡಿರುವ ನ್ಯೂಜಿಲೆಂಡ್ ತಂಡ ಏಕದಿನ ಸರಣಿಯಲ್ಲಿ ಭಾರತಕ್ಕೆ ತಿರುಗೇಟು ನೀಡುವ ತವಕದಲ್ಲಿದೆ.

ತಂಡಗಳು:
ಭಾರತ : ಎಂಎಸ್ ಧೋನಿ(ನಾಯಕ), ರೋಹಿತ್ ಶರ್ಮ, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಮನೀಶ್ ಪಾಂಡೆ, ಸುರೇಶ್ ರೈನಾ, ಹಾರ್ದಿಕ್ ಪಾಂಡ್ಯ. ಅಕ್ಷರ್ ಪಟೇಲ್, ಜಯಂತ್ ಯಾದವ್, ಅಮಿತ್ ಮಿಶ್ರಾ, ಜಸ್ಪ್ರೀತ್ ಬೂಮ್ರಾ, ಧವಳ್ ಕುಲಕರ್ಣಿ, ಉಮೇಶ್ ಯಾದವ್, ಮನ್ದೀಪ್ ಸಿಂಗ್, ಕೇದಾರ್ ಜಾಧವ್.

ನ್ಯೂಜಿಲೆಂಡ್ : ಕೇನ್ ವಿಲಿಯಮ್ಸನ್(ನಾಯಕ), ಟ್ರೆಂಟ್ ಬೌಲ್ಟ್, ಡಗ್ ಬ್ರೇಸ್‌ವೆಲ್, ಮಾರ್ಕ್ ಕ್ರೇಗ್, ಮಾರ್ಟಿನ್ ಗುಫ್ತಿಲ್, ಟಾಮ್ ಲಥಾಮ್, ಲುಕ್ ರಾಂಚಿ (ವಿಕೆಟ್ ಕೀಪರ್), ಜಿಮ್ಮಿ ನೀಶಾಮ್, ಹೆನ್ರಿ ನಿಕೋಲ್ಸ್, ಮಿಚೆಲ್ ಸೆಂಟನರ್, ಈಶ ಸೋಧಿ, ರಾಸ್ ಟೇಲರ್, ಟಿಮ್ ಸೌಥಿ, ನೀಲ್ ವಾಗ್ನರ್, ಬಿಜೆ ವಾಟ್ಲಿಂಗ್.

ಪಂದ್ಯ ಆರಂಭದ ಸಮಯ : 1.30 pm

ನೇರ ಪ್ರಸಾರ : ಸ್ಟಾರ್ ಸ್ಪೋರ್ಟ್ಸ್

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Brimming with confidence after a clean-sweep in the Test series, India would look to carry on their dominance over New Zealand in the shorter format when the two teams lock horns in the first ODI of the five-match rubber, here tomorrow (October 16).
Please Wait while comments are loading...