ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ರ‍್ಯಾಂಕಿಂಗ್‌: 2ನೇ ಸ್ಥಾನಕ್ಕೇರಿದ ಪೂಜಾರ, 5ನೇ ಸ್ಥಾನದಲ್ಲಿ ಕೊಹ್ಲಿ

ನವದೆಹಲಿ, ನವೆಂಬರ್ 28 : ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಮಂಗಳವಾರ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟೀಂ ಇಂಡಿಯಾದ ಚೇತೇಶ್ವರ ಪೂಜಾರ 2ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಲಿಲ್ಲಿ ದಾಖಲೆ ಮುರಿದ ಅಶ್ವಿನ್ ಕಾಲೆಳೆದ ಪತ್ನಿ ಪ್ರೀತಿ

ಪ್ರಸ್ತುತ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವುದರಿಂದ ಚೇತೇಶ್ವರ ಪೂಜಾರ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇನ್ನು ಭಾರತದ ನಾಯಕ ವಿರಾಟ್ ಕೊಹ್ಲಿ 877 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ಲಂಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ನಾಯಕ, ಕೊಹ್ಲಿಗೆ ರೆಸ್ಟ್ಲಂಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ನಾಯಕ, ಕೊಹ್ಲಿಗೆ ರೆಸ್ಟ್

Pujara rises to 2nd, Kohli stays 5th in latest ICC rankings

941 ಅಂಕಗಳೊಂದಿಗೆ ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲಿದ್ದು, ಚೇತೇಶ್ವರ ಪೂಜಾರ (888) ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ನ ಜೋ ರೂಟ್ (881) 3, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ 4ನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಬೌಲಿಂಗ್ ವಿಭಾಗದಲ್ಲಿ ಜೇಮ್ಸ್ ಆಂಡ್ರಸನ್ 891 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಟೀಂ ಇಂಡಿಯಾದ ಸ್ಪಿನ್ನರ್ ರವೀಂದ್ರ ಜಡೇಜಾ 880 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ರಬಡಾ 3ನೇ ಹಾಗೂ ರವಿಚಂದ್ರನ್ ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ.

ಇನ್ನು ಟೆಸ್ಟ್ ಆಲ್ ರೌಂಡರ್ ನಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ 437 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ದ್ವಿತೀಯ ಹಾಗೂ ತೃತೀಯ ಸ್ಥಾನದಲ್ಲಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X