ರೋಹಿತ್ ಶರ್ಮಗೆ 'ತೀವ್ರ' ಗಾಯ, ಏಳೆಂಟು ತಿಂಗಳು ರೆಸ್ಟ್!

Posted By:
Subscribe to Oneindia Kannada

ಮುಂಬೈ, ನವೆಂಬರ್ 03: ಟೀಂ ಇಂಡಿಯಾದ 'ಹಿಟ್ ಮ್ಯಾನ್' ರೋಹಿತ್ ಶರ್ಮ ಅವರನ್ನು ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಿಲ್ಲ ಎಂಬ ಸುದ್ದಿ ಕೇಳಿ ಅಭಿಮಾನಿಗಳಿಗೆ ನಿರಾಶೆಯಾಗಿದೆ. ಆದರೆ, ರೋಹಿತ್ ಶರ್ಮ ಅವರು ತೀವ್ರವಾಗಿ ಗಾಯಗೊಂಡಿದ್ದು, ಏಳೆಂಟು ತಿಂಗಳು ಕಡ್ಡಾಯ ವಿಶ್ರಾಂತಿ ಅಗತ್ಯವಿದೆ ಎಂದು ಬಿಸಿಸಿಐ ತಿಳಿಸಿದೆ.

ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಸಂಪೂರ್ಣವಾಗಿ ರೋಹಿತ್ ಅವರನ್ನು ಹೊರಗಿಡಲಾಗುವುದು. ಅವರಿಗೆ ಆಗಿರುವ ಗಾಯದ ತೀವ್ರತೆ ನೋಡಿದರೆ ಏಳೆಂಟು ತಿಂಗಳು ವಿಶ್ರಾಂತಿ ಬೇಕಾಗುತ್ತದೆ. ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಗತ್ಯ ಬಿದ್ದರೆ ಸರ್ಜರಿ ಕೂಡಾ ಮಾಡಿಸಬೇಕಾಗುತ್ತದೆ. ಈ ಬಗ್ಗೆ ತಜ್ಞ ವೈದ್ಯರ ಸಲಹೆ ಪಡೆದುಕೊಳ್ಳಲಾಗುತ್ತಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದರು.

ತೊಡೆ ಹಾಗೂ ಕಾಲಿಗೆ ಗಾಯ ಮಾಡಿಕೊಂಡಿರುವ ರೋಹಿತ್ ಅವರು ಸ್ನಾಯು ಸೆಳೆತ ಅಧಿಕವಾಗಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಇಂಗ್ಲೆಂಡಿನ ತಜ್ಞ ವೈದ್ಯರ ನೆರವು ಪಡೆಯಲಾಗುತ್ತಿದೆ ಎಂದು ಪ್ರಸಾದ್ ಹೇಳಿದರು.[ಇಂಗ್ಲೆಂಡ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ, ಕರುಣ್ ಇನ್!]

Rohit Sharma 'badly injured', to remain out of action for six to eight weeks

ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ರೋಹಿತ್ ಉತ್ತಮ ಪ್ರದರ್ಶನ ನೀಡಿದ್ದರು, ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೋಹಿತ್ 3 ಪಂದ್ಯಗಳಲ್ಲಿ 3 ಅರ್ಧಶತಕಗಳ ಸಹಿತ ಒಟ್ಟು 238 ರನ್ ಕಲೆ ಹಾಕಿದ್ದರು.ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನವನ್ನು ಮುಂದುವರಿಸಿ ಮಧ್ಯಮ ಕ್ರಮಾಂಕದಲ್ಲಿ ಖಾಯಂ ಸ್ಥಾನ ಪಡೆಯುವ ಅವಕಾಶವಿತ್ತು. [ಟೆಸ್ಟ್ ತಂಡಕ್ಕೆ ಹಾರ್ದಿಕ್ ಯಾಕೆ? ಟ್ವಿಟ್ಟರ್ ನಲ್ಲಿ ಪ್ರಶ್ನೆ]


ನಾಗ್ಪುರದಲ್ಲಿ ಜನಿಸಿದ ಮುಂಬೈ ಪರ ಆಡುವ ರೋಹಿತ್ ಶರ್ಮ ಅವರು 2013ರಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಸ್ಮರಣೀಯ ಚೊಚ್ಚಲ ಪಂದ್ಯ ಆಡಿದ್ದರು. ರೋಹಿತ್ ಈ ವರೆಗೆ 21 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಎರಡು ಶತಕ ಹಾಗೂ 7 ಅರ್ಧಶತಕಗಳ ಸಹಿತ ಒಟ್ಟು 1,184 ರನ್ ಗಳಿಸಿದ್ದಾರೆ. 153 ಏಕದಿನ ಪಂದ್ಯಗಳನ್ನು ಅಡಿರುವ 29 ವರ್ಷದ ರೋಹಿತ್ ಅವರು 2014ರಲ್ಲಿ ಶ್ರೀಲಂಕಾ ವಿರುದ್ಧ 264ರನ್ ಗಳಿಸಿದ್ದು ಏಕದಿನ ಕ್ರಿಕೆಟ್ ನಲ್ಲಿ ವೈಯಕ್ತಿಕ ಗರಿಷ್ಠ ಮೊತ್ತವಾಗಿ ದಾಖಲಾಗಿದೆ. (ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
India batsman Rohit Sharma has been ruled out of the upcoming Test series against England due to a thigh injury, which may need even a surgery, and is going to miss out the entire series against English
Please Wait while comments are loading...