ಸಂಜಯ್, ಅಭಯ್ ಆಯ್ಕೆ ಮಾಡಿಕೊಂಡ ಕುಂಬ್ಳೆ

Posted By:
Subscribe to Oneindia Kannada

ನವದೆಹಲಿ, ಜೂನ್ 26: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳಲಿರುವ ಟೀಂ ಇಂಡಿಯಾಕ್ಕೆ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರು ತಮ್ಮ ಸಹಾಯಕ ಸಿಬ್ಬಂದಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮಾಜಿ ಆಲ್ ರೌಂಡರ್ ಸಂಜಯ್ ಬಂಗಾರ್ ಅವರು ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ನಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಆಡಲಿದೆ. ಈ ಪ್ರವಾಸಕ್ಕೆ ಅನಿಲ್ ಕುಂಬ್ಳೆ ಅವರು ಮುಖ್ಯ ಕೋಚ್ ಆಗಿದ್ದರೆ, ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಹಾಗೂ ಫೀಲ್ಡಿಂಗ್ ಕೋಚ್ ಆಗಿ ಅಭಯ್ ಶರ್ಮ ಅವರನ್ನು ಉಳಿಸಿಕೊಳ್ಳಲಾಗಿದೆ. [ಟೀಂ ಇಂಡಿಯಾ ಕೋಚ್ ಆಗಿ ಅನಿಲ್ ಕುಂಬ್ಳೆ ಆಯ್ಕೆ]

Sanjay Bangar, Abhay Sharma named assistant coaches for West Indies tour

ಜಿಂಬಾಬ್ವೆಯಲ್ಲಿ ನಡೆದ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿ ಹಾಗೂ ಟಿ20 ಪಂದ್ಯಗಳ ಸರಣಿ ಗೆದ್ದ ಭಾರತ ತಂಡಕ್ಕೆ ಮಧ್ಯಂತರ ಕೋಚ್ ಆಗಿ ಸಂಜಯ್ ಬಂಗಾರ್ ಕಾರ್ಯನಿರ್ವಹಿಸಿದ್ದರು. ಅಭಯ್ ಶರ್ಮ ಅವರು ಫೀಲ್ಡಿಂಗ್ ಕೋಚ್ ಆಗಿದ್ದರು.

ಅನಿಲ್ ಕುಂಬ್ಳೆ ಅವರ ಸಲಹೆ ಮೇರೆಗೆ ಸಂಜಯ್ ಹಾಗೂ ಅಭಯ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಅಜಯ್ ಶಿರ್ಕೆ ಪ್ರಕಟಿಸಿದ್ದಾರೆ.[ಕೊಹ್ಲಿ ಪಡೆಯಿಂದ 49 ದಿನಗಳ ಕಾಲ ವಿಂಡೀಸ್ ಟೂರ್]

ಜೂನ್ 23ರಂದು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಒಂದು ವರ್ಷದ ಅವಧಿಗೆ ಅನಿಲ್ ಕುಂಬ್ಳೆ ಅವರನ್ನು ನೇಮಿಸಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು (ಐಎಎನ್ಎಸ್)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Former India all-rounder Sanjay Bangar was named batting coach of the Indian team that will travel to the West Indies for a four-match Test series next month, the Board of Control for Cricket in India (BCCI) announced on Saturday (June 25).
Please Wait while comments are loading...