ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ವಜಾ

Posted By:
Subscribe to Oneindia Kannada

ನವದೆಹಲಿ, ಜನವರಿ 02: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ಅವರನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾ. ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಠಾನಗಳನ್ನು ವಿಫಲವಾದ ಹಿನ್ನಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ.

ಅನುರಾಗ್ ಠಾಕೂರ್ ಹಾಗೂ ಅಜಯ್ ಶಿರ್ಕೆ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಶಿರ್ಕೆ ಅವರು ಕೂಡಾ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ತಕ್ಷಣದಿಂದ ಕಳೆದುಕೊಂಡಿದ್ದಾರೆ. [ಬಿಸಿಸಿಐಗೆ ಮತ್ತೆ ಹಿನ್ನಡೆ, ವೀಕ್ಷಕರಾಗಿ ಪಿಳ್ಳೈ ನೇಮಕ]

 Supreme court Removes Anurag Thakur from the post of BCCI President

ಹಾಲಿ ಉಪಾಧ್ಯಕ್ಷ ಸ್ಥಾನದಲ್ಲಿರುವ ಹಿರಿಯರೊಬ್ಬರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾ. ಲೋಧಾ ಸಮಿತಿ ಶಿಫಾರಸುಗಳನ್ನು ಅಳವಡಿಸಲು ಹೊಸ ಸಮಿತಿಯನ್ನು ಸುಪ್ರೀಂಕೋರ್ಟ್ ಸ್ಥಾಪಿಸಲಿದೆ.

ಸುಪ್ರೀಂಕೋರ್ಟಿನಿಂದ ಫಾಲಿ ಎಸ್ ನಾರಿಮನ್ ಹಾಗೂ ಗೋಪಾಲ್ ಸುಬ್ರಮಣಿಯನ್ ಅವರನ್ನು ಅಮಿಕ್ಯೂಸ್ ಕ್ಯೂರಿಯಾಗಿ ನೇಮಿಸಲಾಗಿದ್ದು, ಬಿಸಿಸಿಐ ಕಾರ್ಯನಿರ್ವಹಣೆ ಮೇಲೆ ನಿಗಾ ಇಡಲಿದ್ದಾರೆ. ಮುಂದಿನ ವಿಚಾರಣೆಯನ್ನು ಜನವರಿ 19ಕ್ಕೆ ಮುಂದೂಡಲಾಗಿದೆ.[ಎಂಸಿಎ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶರದ್ ಪವಾರ್]

70 ವರ್ಷದ ವಯಸ್ಸು ಮೀರಿದವರು, ಸಚಿವರು, ರಾಜಕಾರಣಿಗಳು ಅಥವಾ ಸರ್ಕಾರಿ ಅಧಿಕಾರಿಗಳು, ನೌಕರರು ಬಿಸಿಸಿಐ ಮತ್ತು ರಾಜ್ಯ ಸಂಸ್ಥೆಗಳ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಬಾರದು ಎಂದು ಲೋಧಾ ಸಮಿತಿಯು ಮಾಡಿದ್ದ ಶಿಫಾರಸಿಗೆ ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Supreme Court on Monday(January 02) directed Anurag Thakur and Ajay Shirke to immediately cease and desist from BCCI work. The court also said that it would appoint a panel of eminent persons to govern the BCCI.
Please Wait while comments are loading...