ಕ್ರಿಕೆಟ್ ː ಇ ಹರಾಜು ಪ್ರಕ್ರಿಯೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

Posted By:
Subscribe to Oneindia Kannada

ನವದೆಹಲಿ, ಜುಲೈ 12:ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಟಿ.ವಿ. ಪ್ರಸಾರದ ಹಕ್ಕುಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾರಾಟ ಮಾಡುತ್ತಿರುವ ರೀತಿಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಂದ್ಯಗಳ ಪ್ರಸಾರ ಹಕ್ಕು ಮಾರಾಟ ಪ್ರಕ್ರಿಯೆ ಎಲ್ಲವೂ ಇ-ಹರಾಜು ಮಾಡುವಂತೆ ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಹಾಕಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ನ್ಯಾಯಪೀಠವು ತಿಳಿಸಿದೆ.

Swamy questions BCCI's style of auctioning broadcasting rights of matches

ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್ ಮತ್ತು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ, ಈ ಬಗ್ಗೆ ಇನ್ನಷ್ಟು ಪರಿಶೀಲನೆ ಅಗತ್ಯ ಎಂದಿದ್ದಾರೆ.

ಜುಲೈ 17ರಂದು ಐಪಿಎಲ್ ಪ್ರಸಾರದ ಹಕ್ಕುಗಳ ಹರಾಜು ಪ್ರಕ್ರಿಯೆ ನಡೆಯಲಿದೆ. ಸುಮಾರು ₹ 30 ಸಾವಿರ ಕೋಟಿ ಮೌಲ್ಯದ ವ್ಯವಹಾರ ಇದಾಗಿದೆ. ಆದ್ದರಿಂದ ಇ-ಹರಾಜು ಪದ್ಧತಿಯನ್ನು ಅಳವಡಿಸುವುದರಿಂದ ಪಾರದರ್ಶಕತೆ ಸಾಧ್ಯವಾಗುತ್ತದೆ' ಎಂದು ಸ್ವಾಮಿ ಅವರು ಅರ್ಜಿ ಹಾಕಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BJP MP, Subramanian Swamy has moved the Supreme Court challenging the manner in which the BCCI is scheduled to auction its broadcasting and media rights of matches.
Please Wait while comments are loading...