ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ

Posted By:
Subscribe to Oneindia Kannada
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ | Oneindia Kannada

ಬೆಂಗಳೂರು, ಡಿಸೆಂಬರ್ 04:ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಸೋಮವಾರ (ಡಿಸೆಂಬರ್ 04) ಸಂಜೆ ಪ್ರಕಟಿಸಲಾಗಿದೆ.

ಭಾರತ v/s ದಕ್ಷಿಣ ಆಫ್ರಿಕಾ ಸರಣಿ ವೇಳಾಪಟ್ಟಿ ಪ್ರಕಟ

ದಕ್ಷಿಣ ಆಫ್ರಿಕಾ ಹಾಗೂ ಭಾರತ 3 ಟೆಸ್ಟ್, 6 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿವೆ. ಡಿಸೆಂಬರ್ 24ರಂದು ಶ್ರೀಲಂಕಾ ವಿರುದ್ಧದ ಸರಣಿ ಮುಗಿಯಲಿದೆ. ಡಿಸೆಂಬರ್ 27ರಂದು ಟೀಂ ಇಂಡಿಯಾ ವಿಮಾನವೇರಲಿದೆ. ಡಿಸೆಂಬರ್ 30ರಂದು ಮೊದಲ ಅಭ್ಯಾಸ ಪಂದ್ಯವಾಡಲಿದೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮ ನಾಯಕ

ಜನವರಿ5ರಿಂದ ಕೇಪ್ ಟೌನ್ ನಲ್ಲಿ ಪ್ರಾರಂಭವಾಗುವ ಮೂರು ಟೆಸ್ಟ್ ಪಂದ್ಯಗಳ ಸರಣಿ ಫೆಬ್ರವರಿ 24ಕ್ಕೆ ಮುಕ್ತಾಯವಾಗಲಿದೆ. 3 ಟೆಸ್ಟ್ ಪಂದ್ಯಗಳಿಗೆ ತಂಡ ಪ್ರಕಟಿಸಲಾಗಿದ್ದು, ತಂಡ ಇಂತಿದೆ:

Team India for Test series against South Africa announced

ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ (ಉಪ ನಾಯಕ), ರೋಹಿತ್ ಶರ್ಮ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜ, ಪಾರ್ಥೀವ್ ಪಟೇಲ್, ಹಾರ್ದಿಕ್ ಪಾಂಡ್ಯಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮ, ಉಮೇಶ್ ಯಾದವ್, ಜಸ್ ಪ್ರೀತ್ ಬೂಮ್ರಾ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BCCI today(December 04) announced Team India for three Test series against South Africa announced.
Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ