ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶ್ವಟಿ20 ಬಗ್ಗೆ ರವಿಶಾಸ್ತ್ರಿ ಹೇಳಿದ್ದೇನು?

Posted By:
Subscribe to Oneindia Kannada

ಸುಬ್ರಹ್ಮಣ್ಯ, ಫೆ.17: ಭಾರತ ಕ್ರಿಕೆಟ್ ತಂಡ ಬಲಿಷ್ಠ ತಂಡವಾಗಿದೆ. ಅನುಭವಿ ಮತ್ತು ಪ್ರತಿಭಾನ್ವಿತ ಆಟಗಾರರು ತಂಡದಲ್ಲಿದ್ದಾರೆ.ಟಿ-20 ವಿಶ್ವಕಪ್‌ನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ಕಪ್ ಎತ್ತುವ ವಿಶ್ವಾಸವಿದೆ ಎಂದು ಮಾಜಿ ಕ್ರಿಕೆಟರ್ ರವಿಶಾಸ್ತ್ರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೇಳಿದ್ದಾರೆ.

ಭಾರತ ತಂಡವೂ ಎದುರಾಳಿ ಬಲಿಷ್ಠ ತಂಡಗಳನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ. ಮುಂದಿನ ಟಿ-20 ವಿಶ್ವಕಪ್‌ನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ತೋರುವ ವಿಶ್ವಾವಿದೆ ಎಂದು ಮಾಜಿ ಕ್ರಿಕೆಟಿಗ ಮತ್ತು ಭಾರತೀಯ ಕ್ರಿಕೆಟ್ ತಂಡದ ನಿರ್ದೇಶಕ ರವಿಶಾಸ್ತ್ರಿ ಹೇಳಿದರು.[ವಿಶ್ವ ಟಿ20 ಸಮರಕ್ಕೆ ಸಜ್ಜಾದ ತಂಡಗಳ ಪಟ್ಟಿ]

Ravi Shastri

ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಸೇವೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಟೆಸ್ಟ್ ಮತ್ತು ಟಿ-20ಯಲ್ಲಿ ಭಾರತ ತಂಡ ಒಂದನೇ ಸ್ಥಾನದಲ್ಲಿದ್ದು, ಸಶಕ್ತ ತಂಡವಾಗಿದೆ ಎಂದರು. ನಂತರ ಕಾರ್ಕಳದ ಎರ್ಲಪಾಡಿಯ ನಾಗನ ಗುಡಿಯಲ್ಲಿ ಆಶ್ಲೇಷ ಬಲಿ ಪೂಜೆ ನಡೆಸಿದರು.[ವಿಶ್ವಟಿ20 ಸಂಪೂರ್ಣ ವೇಳಾಪಟ್ಟಿ]

ರಚನಾತ್ಮಕವಾಗಿ ಮೈದಾನದಲ್ಲಿ ಉತ್ತಮ ಪ್ರದರ್ಶನ ತೋರಿದರೆ ತಂಡಕ್ಕೆ ಗೆಲುವು ಕಷ್ಟವಾಗಲಾರದು. ಮುಂಬರುವ ಟಿ-20 ವಿಶ್ವಕಪ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ತೋರುವ ಎಲ್ಲಾ ಸಾಧ್ಯತೆ ಕಾಣುತ್ತಿದೆ. ಟಿ-20ಯಲ್ಲಿ ನಿರಂತರ ವಿಜಯ ಸಾಧಿಸುತ್ತಿರುವುದರಿಂದ ಇದೇ ಸಾಧನೆ ಮುಂದೆಯೂ ಮುಂದುವರೆಯಲಿದೆ ಎನ್ನುವುದು ನನ್ನ ವಿಶ್ವಾಸವಾಗಿದೆ ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former Indian cricketer and renowned cricket commentator, visited Lord Mahavishnumurty Temple in Karvalu and Kukke Subramanya temple in Dakshina Kannada, Karnataka. During the visit he offered special pooja and said Team India will lift the World T20.
Please Wait while comments are loading...