ಬೇಸಿಗೆ ರಜೆ ಕಳೆಯಲು ಕೊಡಗಿನ ನಿಸರ್ಗಧಾಮ

ಕಾವೇರಿ ನಿಸರ್ಗಧಾಮವು ಜೀವನದಿ ಕಾವೇರಿ ಸೃಷ್ಟಿಸಿರುವ ದ್ವೀಪಗಳಲ್ಲೊಂದಾಗಿದೆ. ತನ್ನದೇ ಆದಂತಹ ವೈಶಿಷ್ಟ್ಯತೆ ಹಾಗೂ ಮುಖ್ಯರಸ್ತೆಗೆ ಸಮೀಪದಲ್ಲಿಯೇ ಇರುವುದರಿಂದ ಪ್ರವಾಸಿಗರನ್ನು ತನ್ನೆಡೆಗೆ ಸೆಳೆಯುತ್ತಿದೆ. ಹಾಗಾಗಿ ವರ್ಷದ ಎಲ್ಲಾ ದಿನಗಳಲ್ಲಿಯೂ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಲೇ ಇರುತ್ತಾರೆ.
ಕೊಡಗಿನ ಹೆಬ್ಬಾಗಿಲು ಕುಶಾಲನಗರದಿಂದ ಮಡಿಕೇರಿ ಕಡೆಗಿನ ಮುಖ್ಯ ರಸ್ತೆಯಲ್ಲಿ ಸುಮಾರು ಒಂದೂವರೆ ಕಿ.ಮೀ. ಸಾಗಿದರೆ ರಸ್ತೆಯ ಎಡಭಾಗದಲ್ಲಿಯೇ ನಿಸರ್ಗಧಾಮದ ಪ್ರವೇಶ ದ್ವಾರ ಕಾಣಸಿಗುತ್ತದೆ.
ಜುಳು...ಜುಳು... ನಿನಾದಗೈಯುತ್ತಾ ಹರಿಯುವ ಕಾವೇರಿ ನದಿ ಅದರ ದಡದುದ್ದಕ್ಕೂ ಮುಗಿಲೆತ್ತರಕ್ಕೆ ಬೆಳೆದು ನಿಂತ ಮರಗಿಡಗಳು... ಬಿದಿರು ಮೆಳೆಗಳು... ಚಿಲಿಪಿಲಿ ಗುಟ್ಟುವ ಹಕ್ಕಿಗಳು... ಇಂತಹವೊಂದು ನಿಸರ್ಗ ರಮಣೀಯತೆಯನ್ನು ತನ್ನೊಡಲಿನಲ್ಲಿರಿಸಿಕೊಂಡು ನಿಸರ್ಗಧಾಮ ಪ್ರವಾಸಿಗರನ್ನು ಸ್ವಾಗತಿಸುತ್ತಿದೆ.
ಅರಣ್ಯ ಸಂರಕ್ಷಣಾಧಿಕಾರಿ ಆರ್.ಕೆ.ತೋರ್ವೆ ಹಾಗೂ ವಲಯಾಧಿಕಾರಿ ಟಿ.ಎನ್.ನಾರಾಯಣ್‌ರವರ ಸತತ ಪ್ರಯತ್ನದಲ್ಲಿ 1989 ರಲ್ಲಿ ನಿರ್ಮಿಸಲ್ಪಟ್ಟ ಕಾವೇರಿ ನಿಸರ್ಗಧಾಮ ಅಲ್ಲಿಂದ ಇಲ್ಲಿಯವರೆಗೆ ದೇಶ, ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ನಿಸರ್ಗಧಾಮವನ್ನು ವೀಕ್ಷಿಸಲು ಬರುವವರು ಇಲ್ಲಿನ ಕುಟೀರವೊಂದರಲ್ಲಿ ಟಿಕೆಟ್ ಪಡೆದು ಪ್ರವೇಶ ದ್ವಾರದ ಮೂಲಕ ತೂಗು ಸೇತುವೆಯ ಮೇಲೆ ಹೆಜ್ಜೆ ಹಾಕುತ್ತಾ ಮುನ್ನಡೆದರೆ ನಿಸರ್ಗದ ಕೌತುಕಮಯ ದೃಶ್ಯಗಳು ಕಣ್ಮುಂದೆ ಬಂದು ನಿಲ್ಲುತ್ತದೆ. ತಳುಕಿ ಬಳುಕಿ ಜುಳು ಜುಳು ಎನ್ನುತ್ತಾ ಹರಿಯುವ ಕಾವೇರಿ ನದಿ... ಬೀಸುವ ತಂಗಾಳಿ... ಪ್ರಕೃತಿಯ ಸೋಜಿಗ ಮೈಪುಳಕಗೊಳಿಸುತ್ತದೆ. ಇಲ್ಲಿ ಮಾರ್ಗಸೂಚಿ ಫಲಕಗಳಿದ್ದು, ನಿಸರ್ಗಧಾಮದ ಬಗ್ಗೆ ಮಾಹಿತಿ ನೀಡುತ್ತದೆ. ಅರಣ್ಯ ಇಲಾಖೆಯು ಪ್ರವಾಸಿಗರ ಅನುಕೂಲಕ್ಕಾಗಿ ಉಪಹಾರ ಗೃಹವನ್ನು ತೆರೆದಿದ್ದು ಇದರ ಸಮೀಪವೇ ಮಕ್ಕಳ ವಿಹಾರಧಾಮವಿದೆ.
ಜಿಂಕೆವನ:ಈ ವಿಹಾರಧಾಮದಲ್ಲಿ ಮಕ್ಕಳು ಆಡಿ ನಲಿಯಲು ಏಣಿಯಾಟ, ಉಯ್ಯಾಲೆ, ಉದ್ದಜಿಗಿತ ಮುಂತಾದ ಆಟದ ಸಾಮಾಗ್ರಿಗಳನ್ನಿಡಲಾಗಿದೆ. ಇಲ್ಲಿಂದ ಮುಂದೆ ಬಿದಿರುಮೆಳೆಗಳ ನಡುವೆ ನಡೆದರೆ ಆನೆ ಸವಾರಿ ನಡೆಸುವ ಜಾಗವನ್ನು ತಲುಪಬಹುದು. ಇಲ್ಲಿ ನಿಗದಿತ ಹಣವನ್ನು ನೀಡಿ ಆನೆಯ ಮೇಲೆ ಕುಳಿತು ಸವಾರಿಯನ್ನು ಮಾಡಬಹುದು. ಆನೆ ಸವಾರಿ ಪಕ್ಕದಲ್ಲಿಯೇ ಜಿಂಕೆವನವಿದೆ. ಸುಮಾರು 5 ಎಕರೆ ಪ್ರದೇಶದಲ್ಲಿ ಸುತ್ತಲೂ ಸುಸಜ್ಜಿತವಾಗಿ ತಂತಿ ಬೇಲಿ ಹಾಕಿ ನಿರ್ಮಿಸಲಾಗಿರುವ ಈ ವನದಲ್ಲಿ ಹಲವಾರು ಜಿಂಕೆ, ಕಡವೆಗಳಿವೆ.
ಕಾಲು ದಾರಿಯಲ್ಲಿ ಹೆಜ್ಜೆಯಿಡುತ್ತಾ ಮುನ್ನಡೆದರೆ ಅಲ್ಲಲ್ಲಿ ಬೆಳೆದಿರುವ ಬಿದಿರು ಮೆಳೆಗಳ ಮೇಲೆ ನಿರ್ಮಿಸಲಾಗಿರುವ ಕುಟೀರಗಳು ಮನಸ್ಸೆಳೆಯುತ್ತವೆ. ಈ ಕುಟೀರಗಳಿಗೆ ಹತ್ತಲು ಏಣಿಗಳನ್ನು ನಿರ್ಮಿಸಿದ್ದು, ಇದರಲ್ಲಿ ಕುಳಿತು ವಿಶ್ರಾಂತಿ ಪಡೆಯಬಹುದು. ಜೊತೆಗೆ ಇಲ್ಲಿನ ನಿಸರ್ಗ ಸೌಂದರ್ಯವನ್ನು ಕೂಡ ಸವಿಯಬಹುದು.
ದೋಣಿ ವಿಹಾರ:ನಿಸರ್ಗಧಾಮದಲ್ಲಿ ಅಡ್ಡಾಡುತ್ತಾ ಅಂಚಿಗೆ ಬಂದರೆ ವಿಶಾಲವಾಗಿ ಹರಿಯವ ಕಾವೇರಿ ನದಿಯ ದರ್ಶನವಾಗುತ್ತದೆ. ಇಲ್ಲಿ ಪ್ರವಾಸಿಗರಿಗಾಗಿ ದೋಣಿ ವಿಹಾರದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ನದಿಯ ಒಳಭಾಗದಲ್ಲಿ ವಿಹಾರ ಮಾಡುವ ಸಂದರ್ಭ ಅಪಾಯವಾಗದಿರಲಿ ಎಂಬ ಉದ್ದೇಶದಿಂದ ನದಿಯಲ್ಲಿರುವ ಸುಳಿ ಹಾಗೂ ಹೆಬ್ಬಂಡೆಗಳಿರುವ ಸ್ಥಳಗಳಲ್ಲಿ ಅಪಾಯದ ಸಂಕೇತವಾದ ಕೆಂಪು ಬಾವುಟವನ್ನು ಹಾರಿಸಲಾಗಿದೆ. ಇಲ್ಲಿ ವಿಹಾರಕ್ಕಾಗಿ ಕಪಿಲಾ, ಭದ್ರಾ, ನೇತ್ರಾವತಿ, ತುಂಗಾ, ನರ್ಮದಾ, ಬ್ರಹ್ಮಪುತ್ರ ಹೆಸರಿನ ದೋಣಿಗಳಿವೆ.
ನಿಸರ್ಗದ ಚೆಲುವನ್ನು ಸವಿಯುತ್ತಾ ಅಲ್ಲಿಯೇ ತಂಗುವುದಾದರೆ ಅದಕ್ಕೂ ವ್ಯವಸ್ಥೆಯಿದೆ. ಇಟ್ಟಿಗೆ ಗೋಡೆ, ತೇಗದ ಮರ, ಹುಲ್ಲಿನ ಛಾವಣಿಯಿಂದ ನಿರ್ಮಿಸಲಾದಂತಹ ಐದು ಕಾಟೇಜ್‌ಗಳಿದ್ದು, ಇವುಗಳಿಗೆ ನಿಗದಿತ ಶುಲ್ಕ ಪಾವತಿಸ ಬೇಕಾಗುತ್ತದೆ. ಪ್ರವಾಸಿಗರಿಗಾಗಿಯೇ ಇಲ್ಲೊಂದು ಮಾಹಿತಿ ಕೇಂದ್ರವನ್ನು ಕೂಡ ನಿರ್ಮಿಸಲಾಗಿದೆ.
ಕಾವೇರಿ ನಿಸರ್ಗಧಾಮವು ಎಲ್ಲಾ ರೀತಿಯಿಂದಲೂ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಬೇಕಾದ ಅಗತ್ಯವಿದೆ. ನಿಸರ್ಗಧಾಮವು ನಿರ್ಮಾಣಗೊಂಡಿರುವ ದ್ವೀಪವು ಸುಮಾರು 65 ಎಕರೆ ಪ್ರದೇಶವನ್ನು ಹೊಂದಿದ್ದು ಕೇವಲ 15 ಎಕರೆ ಪ್ರದೇಶದಲ್ಲಿ ಮಾತ್ರ ವಿವಿಧ ಸವಲತ್ತುಗಳನ್ನು ಕಲ್ಪಿಸಿ ನಿಸರ್ಗಧಾಮವನ್ನು ನಿರ್ಮಿಸಲಾಗಿದೆ. ಹಾಗಾಗಿ ಉಳಿದ ಸ್ಥಳಗಳಲ್ಲಿ ಪವಿತ್ರವನ, ಶ್ರೀಚಕ್ರವನ, ರಾಶಿವನ ಹಾಗೂ ಕೊಡಗಿನ ಇತಿಹಾಸ ಸಾರುವ ಕಾವೇರಿ ಪುರಾಣ, ಶ್ರೀಕೃಷ್ಣವನ, ಕೃತಕ ಜಲಪಾತ, ಕಾರಂಜಿ ನಿರ್ಮಾಣವಲ್ಲದೆ, ಈಗಿರುವ ಜಿಂಕೆವನವನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾತುಗಳು ಕೇಳಿ ಬಂದಿತ್ತಾದರೂ ಅದ್ಯಾವುದೂ ಇದುವರೆಗೆ ಕಾರ್ಯರೂಪಕ್ಕೆ ಬಂದಿಲ್ಲ.
ಕಾವೇರಿ ನಿಸರ್ಗಧಾಮಕ್ಕೆ ಹೊಂದಿಕೊಂಡಂತೆ ಇನ್ನೆರಡು ದ್ವೀಪಗಳಿದ್ದು ಅವುಗಳಿಗೆ ತೂಗು ಸೇತುವೆ ನಿರ್ಮಿಸುವ ಮೂಲಕ ಅಭಿವೃದ್ಧಿಪಡಿಸಿದ್ದೇ ಆದಲ್ಲಿ ಕಾವೇರಿ ನಿಸರ್ಗಧಾಮಕ್ಕೆ ಇನ್ನಷ್ಟು ಪ್ರವಾಸಿಗರು ಭೇಟಿ ನೀಡಬಹುದು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications