ಮಾನಸ ಸರೋವರ ಯಾತ್ರಿಕರಿಗೆ ಪ್ರೋತ್ಸಾಹಧನ

ಈ ಉದ್ದೇಶಕ್ಕಾಗಿ ಪಾಸ್‌ಪೋರ್ಟ್‌ನಲ್ಲಿ ನಮೂದಿಸಲಾಗಿರುವ ಕರ್ನಾಟಕ ರಾಜ್ಯದ ವಿಳಾಸವನ್ನು ಪರಿಗಣಿಸಲಾಗುವುದು. ಈಗಾಗಲೇ ಮಾನಸ ಸರೋವರ ಯಾತ್ರೆ ಕೈಗೊಂಡು ಸರ್ಕಾರದಿಂದ ಧನಸಹಾಯ ಪಡೆದ ಯಾತ್ರಿಕರು, ಈ ಉದ್ದೇಶಕ್ಕಾಗಿ ಎರಡನೇ ಬಾರಿಗೆ ಈ ಧನ ಸಹಾಯ ಪಡೆಯಲು ಅರ್ಹರಾಗುವುದಿಲ್ಲ.
ಸರ್ಕಾರದ ಮಾರ್ಗಸೂಚಿಗಳಿಗೆ ಒಳಪಟ್ಟು ಧನ ಸಹಾಯ ಪಡೆಯಲು ಇಚ್ಫಿಸುವ ಯಾತ್ರಿಕರು ತಾವು ಯಾತ್ರೆ ಮುಗಿಸಿದ್ದಕ್ಕೆ ಪಡೆಯುವ ಪ್ರಮಾಣ ಪತ್ರದ ದಿನಾಂಕದಿಂದ ಎರಡು ತಿಂಗಳ ಒಳಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, 2ನೇ ಮಹಡಿ, ಮಲೆ ಮಹದೇಶ್ವರ ವಾರ್ತಾಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು - 18 ಈ ಕಚೇರಿಯಲ್ಲಿ ಖುದ್ದಾಗಿ ಪಡೆದು ಅದೇ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡವಾರ್ತೆ)












Click it and Unblock the Notifications