ಹಬ್ಬದ ಪ್ರಯುಕ್ತ ಭರ್ಜರಿ ಬಸ್ ವ್ಯವಸ್ಥೆ

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಬಿಜಾಪುರ, ರಾಯಚೂರು, ಗುಲ್ಬರ್ಗಾ, ಬಳ್ಳಾರಿ, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳ ಸಂಚಾರ ಸೇವೆಯನ್ನು ಆರಂಭಿಸಿದೆ.
ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಗಳಿಗೆ ಹಾಗೂ ಶಾಂತಿನಗರದಿಂದ ವೋಲ್ವೊ ಹೊರತುಪಡಿಸಿ ತಮಿಳುನಾಡಿನ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಕಲ್ಪಿಸಲಿದೆ ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲು ಬೆಂಗಳೂರಿನಲ್ಲಿ 162, ಮೈಸೂರಿನಲ್ಲಿ 15, ಮಂಗಳೂರಿನಲ್ಲಿ 42 ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ 189 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳನ್ನು ತೆರೆಯಲಾಗಿದೆ. ಹೆಚ್ಚಿನ ವಿವರಗಳಿಗೆ ನಿಗಮ ವೆಬ್‌ಸೈಟ್ ನೋಡಬಹುದಾಗಿದೆ.












Click it and Unblock the Notifications