ಮಧ್ವಾಚಾರ್ಯರ ಜನ್ಮಸ್ಥಳ ಪಾಜಕ ಕ್ಷೇತ್ರದ ಅಭಿವೃದ್ಧಿಗೆ ಶ್ರೀಕಾರ

ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಮತ್ತು ಮುಜರಾಯಿ ಖಾತೆ ಸಚಿವ ಡಾ. ವಿ.ಎಸ್. ಆಚಾರ್ಯ ಸರಕಾರದ ಪರವಾಗಿ ಪಾಜಕ ಕ್ಷೇತ್ರದ ಅಭಿವೃದ್ಧಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಶ್ರೀ ಮಧ್ವಾಚಾರ್ಯರನ್ನು ಪೂರ್ಣಪ್ರಜ್ಞ ಮತ್ತು ಆನಂದತೀರ್ಥ ಹೆಸರಿನಿಂದಲೂ ಕರೆಯುತ್ತಾರೆ.
ಡಾ. ವಿ.ಎಸ್. ಆಚಾರ್ಯ ಮಾತನಾಡಿ ಎರಡು ಕೋಟಿ ರೂ. ಅನುದಾನದಲ್ಲಿ ಪ್ರಥಮ ಹಂತದಲ್ಲಿ ಸುಭಾಷ್ ನಗರದಿಂದ ಪಾಜಕವರೆಗಿನ ಡಾಂಬರು ರಸ್ತೆ ವಿಸ್ತರಣಾ ಕಾಮಗಾರಿ, ಪಾಜಕ ಕ್ಷೇತ್ರದ ಸುತ್ತಲೂ ಇಂಟರ್ಲಾಕ್ ಅಳವಡಿಕೆ, ಶುಚಿತ್ವಕ್ಕೆ ಆದ್ಯತೆ ನೀಡಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ತರಿಸಿಕೊಂಡು ಪಾಜಕದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ವಸತಿಗೃಹ ನಿರ್ಮಿಸಲಾಗುವುದು ಎಂದು ಹೇಳಿದರು.
ಉಡುಪಿ ಜಿಲ್ಲಾದಿಕಾರಿ ಡಾ. ಎಂ.ಟಿ. ರೆಜು, ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ತಾಲೂಕು ಪಂಚಾಯತ್ ಅಧ್ಯಕ್ಷ ದೇವದಾಸ್ ಹೆಬ್ಟಾರ್, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರಾದ ಚಂದ್ರಶೇಖರ್, ಜಿ.ಪಂ. ಕಾರ್ಯಕಾರಿ ಅಭಿಯಂತರಾದ ಶ್ರೀಧರ ಮೂರ್ತಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಕಾಶ್, ಉಡುಪಿ ನಿರ್ಮಿತಿ ಕೇಂದ್ರದ ಅಧಿಕಾರಿ ಅರುಣ್ ಕುಮಾರ್, ಕುರ್ಕಾಲು ಮತ್ತು ಮೂಡುಬೆಳ್ಳೆ ಗ್ರಾಮ ಪಂಚಾಯತ್‌ನ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications