Chitradurga Travel Guide: ಮಕ್ಕಳೊಂದಿಗೆ ಬೇಸಿಗೆ ರಜೆ ಎಂಜಾಯ್ ಮಾಡ್ಬೇಕಾ? ಚಿತ್ರದುರ್ಗ ಜಿಲ್ಲೆಯಲ್ಲಿವೆ ಅದ್ಭುತ ತಾಣಗಳು
Chitradurga Travel Guide: ರಾಜ್ಯದಲ್ಲಿರುವ ಒಂದೊಂದು ಜಿಲ್ಲೆಗಳು ಒಂದೊಂದು ವಿಶೇಷತೆಯನ್ನು ಹೊಂದಿವೆ. ಹಾಗೆಯೇ ಚಿತ್ರದುರ್ಗವನ್ನು ಕೋಟೆ ನಾಡು ಎಂದು ಕರೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣಗಳನ್ನು ಕಾಣಬಹುದು. ಹಾಗಾದರೆ ಯಾವೆಲ್ಲ ಪ್ರವಾಸಿ ತಾಣಗಳನ್ನು ಒಳಗೊಂಡಿದೆ ಹಾಗೂ ತಲುಪುವ ಮಾರ್ಗಗಳ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇನ್ನೂ ಕೆಲವೇ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿಯಲಿದ್ದು, ಬೇಸಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಈ ವೇಳೆ ಮಕ್ಕಳ ಜೊತೆ ಪ್ರವಾಸ ಮಾಡಲು ಬೆಂಗಳೂರಿನ ಬಹುತೇಕ ಮಂದಿ ಹತ್ತಿರದ ತಾಣಗಳ ಹುಡುಕಾಟದಲ್ಲಿದ್ದಾರೆ. ಹಾಗಾದ್ರೆ ಮತ್ತೇಕೆ ತಡ, ಒಂದೇ ದಿನದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿರುವ ಇತಿಹಾಸ ಪ್ರಸಿದ್ಧ ತಾಣಗಳನ್ನು ಸವಿಯಲು ಇದೇ ಸೂಕ್ತ ಸಮಯ.

ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ವಾಣಿವಿಲಾಸ ಜಲಾಶಯ, ಗಾಯಿತ್ರಿ ಜಲಾಶಯ, ಅಶೋಕ್ ಸಿದ್ದಾಪುರ ಹಾಗೂ ಚಿತ್ರದುರ್ಗದ ಕಲ್ಲಿನ ಕೋಟೆ, ಜೋಗಿ ಮಟ್ಟಿ, ಚಂದ್ರವಳ್ಳಿ ತೋಟಕ್ಕೆ ಭೇಟಿ ನೀಡಿ ನಂತರ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಹಾಗೂ ಹೊಳಲ್ಕೆರೆ ಗಣೇಶನ ದರ್ಶನ ಕೂಡ ಪಡೆಯಬಹುದಾಗಿದೆ.
ಚಿತ್ರದುರ್ಗದ ಕಲ್ಲಿನ ಕೋಟೆ: ಚಿತ್ರದುರ್ಗ ಕೋಟೆನಾಡು ಅಂತಲೇ ಪ್ರಸಿದ್ಧಿ ಪಡೆದಿದೆ. ನಾಗರಹಾವು ಅಂದರೆ ತಟ್ಟನೆ ನೆನಪಿಗೆ ಬರುವುದು ಡಾ.ವಿಷ್ಣುವರ್ಧನ್ ಅಭಿನಯದ ರಾಮಾಚಾರಿ ಚಿತ್ರ. ಡಾ. ವಿಷ್ಣುವರ್ಧನ್ ಅವರನ್ನು ಚಿತ್ರರಂಗದಲ್ಲಿ ಮಿಂಚಿಸಿದ್ದೇ ವನಿಕೆ ಓಬವ್ವ ಮೆರೆದ ಕೋಟೆ ಆಗಿದೆ. ಜಿಲ್ಲೆಯ ಪ್ರವಾಸಿ ತಾಣವಾದ ಚಿತ್ರದುರ್ಗದ ಪಾಳೆಯಗಾರರು ಆಳ್ವಿಕೆ ನಡೆಸಿರುವ ಏಳು ಸುತ್ತಿನ ಕೋಟೆಗೆ ಒಮ್ಮೆ ಭೇಟಿ ಕೊಡಿ. ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕೇವಲ 201.2 ಕಿಲೋ ಮೀಟರ್ ಆಗಲಿದೆ.
ವಾಣಿ ವಿಲಾಸ ಸಾಗರ: ಇನ್ನು ಇದೀಗ ಮಧ್ಯ ಕರ್ನಾಟಕದ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾರಿಕಣಿವೆ ಡ್ಯಾಂ ಭರ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಕೋಡಿ ಬೀಳುವುದು ಬಹುತೇಕ ಖಚಿತವಾಗಿದೆ. ಇದನ್ನು ಈ ವೇಳೆ ಕಣ್ತುಂಬಿಕೊಳ್ಳಲು ಉತ್ತಮ ಸಮಯವಾಗಿದೆ. ಅಣೆಕಟ್ಟಿನ ಎಡ ಮತ್ತು ಬಲ ಭಾಗದಲ್ಲಿ ಕಪ್ಪುಶಿಲೆಯ ಅಪರೂಪದ ಸುಂದರ ಮಂಟಪಗಳಿಗೆ. ಇಲ್ಲಿ ಫೋಟೋ ಕ್ಲಿಕ್ಕಿಸಲು ವಿಶೇಷ ಕೋನಗಳು ಸಿಗುತ್ತವೆ.
ಕಮಾನು ದ್ವಾರದಿಂದ ಹಸಿರುಟ್ಟ ಬೆಟ್ಟಗಳ ಸೌಂದರ್ಯವನ್ನು ಕ್ಲಿಕ್ಕಿಸುವ ಸೊಬಗೇ ಅದ್ಭುತವಾಗಿರುತ್ತದೆ. ಗುಡ್ಡಗಳ ಸಂಕೀರ್ಣವನ್ನು ಜಲಾಶಯದ ಸುತ್ತ ಒಮ್ಮೆ ಕಣ್ಣಾಡಿಸಿದರೆ, ಅಚ್ಚಹಸಿರಿನಿಂದ ಕಂಗೊಳಿಸುವ ದೃಶ್ಯವನ್ನು ಕಾಣಬಹುದಾಗಿದೆ. ಜಲಾಶಯದ ಮೇಲೆ ನಿಂತು ಮತ್ತೊಮ್ಮೆ ಕಣ್ಣಾಡಿಸಿದರೆ ಅಡಿಕೆ, ತೆಂಗು, ತೋಟಗಳ ಸೌಂದರ್ಯವನ್ನು ಸವಿಯಬಹುದಾಗಿದೆ.
ಜಲಾಶಯದ ಮತ್ತೊಂದು ತುದಿಯಲ್ಲಿ ನಿಂತರೆ, ಭಾರತ ಭೂಪಟದ ಆಕಾರ ಹೊಂದುವ ದೃಶ್ಯವನ್ನು ಕಾಣಬಹುದಾಗಿದೆ. ಸೂರ್ಯಾಸ್ತ ಇಲ್ಲಿನ ಮತ್ತೊಂದು ವಿಶೇಷವಾಗಿದೆ. ಜಲಾಶಯದ ಎಡ ಭಾಗದ ಉತ್ತೆರಿಗುಡ್ಡ ಹಾಗೂ ಬಲ ಭಾಗದ ಛತ್ರಿಗುಡ್ಡಗಳ ನಡುವೆ ಮರೆಯಾಗುವ ಸೂರ್ಯನನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ. ಸಂಜೆ 4ರಿಂದ 5ರೊಳಗೆ ಇಲ್ಲಿದ್ದರೆ, ಸೂರ್ಯಾಸ್ತವನ್ನು ಸೆರೆ ಹಿಡಿಯಬಹುದು.
ಮಾರ್ಗಗಳ ವಿವರ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಬಳಿ ವೇದಾವತಿ ನದಿಗೆ ಅಡ್ಡಲಾಗಿ 1907ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅಣೆಕಟ್ಟು ಕಟ್ಟಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ "ವೇದಾ" ನದಿ ಕಡೂರಿನ ಬಳಿ "ಅವತಿ" ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ.
ವಾಣಿ ವಿಲಾಸ ಜಲಾಶಯವನ್ನು ನೋಡಲು ಬಯಸುವ ಪ್ರವಾಸಿಗರು ಹಿರಿಯೂರು ನಗರದಿಂದ ಹೊಸದುರ್ಗ ರಸ್ತೆ ಮಾರ್ಗವಾಗಿ 18 ಕಿಲೋ ಮೀಟರ್ ದೂರದ ಎಡಭಾಗಕ್ಕೆ ಜಲಾಶಯ ತಲುಪಬಹುದು. ಬೆಂಗಳೂರು, ತುಮಕೂರಿನಿಂದ ಹಿರಿಯೂರು ನಗರದ ಮೂಲಕ ಡ್ಯಾಂ ಪ್ರವೇಶಿಸಬಹುದು.
ಹುಬ್ಬಳ್ಳಿ, ದಾವಣಗೆರೆಯಿಂದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಲಭಾಗದ ವಿವಿ ಪುರ ಕ್ರಾಸ್ ಮೂಲಕ ಜಲಾಶಯಕ್ಕೆ ತೆರಳಬಹುದು. ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಪ್ರವಾಸಿಗರು ಹೊಸದುರ್ಗದಿಂದ ಹಿರಿಯೂರು ಮಾರ್ಗವಾಗಿ ಬಲಭಾಗದ ಮೂಲಕ ತೆರಳಿ ಡ್ಯಾಂ ವೀಕ್ಷಿಸಬಹುದಾಗಿದೆ.
ಬೆಂಗಳೂರಿಬೆಂಗಳೂರಿನಿಂದ ಬರುವವರಿಗೆ ಪ್ರಮುಖ ಮಾಹಿತಿ:ನಿಂದ ಹಿರಿಯೂರಿನ ಮೂಲಕ ಪ್ರಯಾಣ ಬೆಳೆಸಿದರೆ ವಾಣಿ ವಿಲಾಸ ಜಲಾಶಯ ನೋಡಬಹುದು. ನಂತರ ಹಿರಿಯೂರು ಮಾರ್ಗವಾಗಿ ಎಡಭಾಗಕ್ಕೆ ಚಿತ್ರದುರ್ಗ ತಲುಪಿ ಕೋಟೆ, ಜೋಗಿ ಮಟ್ಟಿ, ಚಂದ್ರವಳ್ಳಿ ತೋಟದ ಸೌಂದರ್ಯವನ್ನು ಸವಿಯಬಹುದಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications